LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ವಿಪಕ್ಷದವರ ಹತಾಶೆಯ ಪರಮಾವಧಿ: ಸಿಎಂ ಡಿ.ಕೆ. ಶಿವಕುಮಾರ್

ಸಾರ್ವಜನಿಕವಾಗಿ ಸೋತಾಗ ಸಭ್ಯತೆಯೂ ಸತ್ತುಹೋಗುತ್ತದೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ‌ ಎಸೆದ ನೀಚ ಕೃತ್ಯವು ವಿರೋಧ ಪಕ್ಷದವರ ಹತಾಶೆಯ ಪರಮಾವಧಿ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಒಬ್ಬ ಯುವ ನಾಯಕನ ಜನಪ್ರಿಯತೆ ಹಾಗೂ ಮಾತುಗಳನ್ನು ಜೀರ್ಣಿಸಿಕೊಳ್ಳಲಾಗದೆ, ತರ್ಕದ ವೇದಿಕೆಯಿಂದ ತರಗೆಲೆ ರಾಜಕಾರಣಕ್ಕೆ ಇಳಿದಿರುವುದು ನಿಮ್ಮ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ಪ್ರಜಾಪ್ರಭುತ್ವದ ಆಶಯಗಳನ್ನು ಬೀದಿಗೆ ತಂದು ಹರಾಜಿಗಿಟ್ಟಿರುವ ನೀವು, ನಿಮ್ಮ ಕಾರ್ಯಕರ್ತರಿಗೆ ಕಲಿಸುತ್ತಿರುವ ಸಂಸ್ಕಾರವಾದರೂ ಇಂತಹುದೇನಾ? ನೆನಪಿರಲಿ, ಇಂತಹ ಹಿಂಸಾತ್ಮಕ ದಾಳಿಗಳು ನಮ್ಮ ನಾಯಕರ ಹೋರಾಟದ ಹಾದಿಯನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆಯೇ ಹೊರತು ಎಂದಿಗೂ ಧೃತಿಗೆಡಿಸುವುದಿಲ್ಲ ಎಂದಿದ್ದಾರೆ.

ಇದು ಬಸವಣ್ಣನವರ, ಕುವೆಂಪು ಅವರ ಶಾಂತಿಪ್ರಿಯ ಕರ್ನಾಟಕ. ಇಲ್ಲಿ ಇಂತಹ ವಿಕೃತ, ಹಿಂಸಾತ್ಮಕ ಪುಂಡಾಟಿಕೆಗಳಿಗೆ ಜಾಗವಿಲ್ಲ. ಸಾರ್ವಜನಿಕ ಸಭ್ಯತೆಯ ಗಡಿ ದಾಟಿದ ಪ್ರತಿಯೊಬ್ಬರ ವಿರುದ್ಧವೂ ನಾವು ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ.‌ ಪ್ರದೀಪ್ ಈಶ್ವರ್ ಅವರು ಧೃತಿಗೆಡಬೇಕಿಲ್ಲ; ಅವರ ಜೊತೆ ನಾವೆಲ್ಲರೂ ಇದ್ದೇವೆ ಎಂದು ಸಿಎಂ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ