LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅನಿರುದ್ಧ್ ರವಿಚಂದರ್ ಕೈಹಿಡಿಯಲಿದ್ದಾರಾ ಕಾವ್ಯಾ ಮಾರನ್? ಮದುವೆ ವದಂತಿಗೆ ಸಿಕ್ಕಿತು ದೊಡ್ಡ ಸುಳಿವು

ಸಿನಿಮಾ ಹಾಗೂ ಕ್ರೀಡಾ ಜಗತ್ತಿನ ಜೋಡಿಯೊಂದು ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಿಇಒ ಕಾವ್ಯಾ ಮಾರನ್ ಪರಸ್ಪರ ಪ್ರೀತಿಸುತ್ತಿದ್ದು, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿಗಳಿಗೆ ಈಗ ಹೊಸ ತಿರುವು ಸಿಕ್ಕಿದೆ. ಅನಿರುದ್ಧ್ ಅವರ ಮಾವ, ಹಿರಿಯ ನಟ ವೈ ಜಿ ಮಹೇಂದ್ರನ್ ನೀಡಿರುವ ಹೇಳಿಕೆ ಈ ಮದುವೆ ಸುದ್ದಿಗೆ ಮತ್ತಷ್ಟು ರೆಕ್ಕೆಪುಕ್ಕ ನೀಡಿದೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ಈ ಕುರಿತು ಮಾತನಾಡಿರುವ ವೈ ಜಿ ಮಹೇಂದ್ರನ್, ಅನಿರುದ್ಧ್ ಅತ್ಯಂತ ಮೃದು ಸ್ವಭಾವದ ಹುಡುಗ ಎಂದು ಹೊಗಳಿದ್ದಾರೆ. ಕುಟುಂಬದ ಮೂಲಗಳಿಂದ ತಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಈ ಮದುವೆ ಬಹುತೇಕ ಖಚಿತವಾಗಿದೆ ಎಂದು ಅವರು ತಿಳಿಸಿದ್ದಾರೆ. ಇದು ಅತ್ಯಂತ ದೊಡ್ಡ ಮಟ್ಟದಲ್ಲಿ ನಡೆಯಲಿರುವ ವಿವಾಹವಾಗಲಿದ್ದು, ಈ ಶುಭ ಸಂದರ್ಭದಲ್ಲಿ ನಾನು ಅನಿರುದ್ಧ್ ಅವರಿಗೆ ಮುಂಚಿತವಾಗಿಯೇ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಹೇಂದ್ರನ್ ಹೇಳಿದ್ದಾರೆ.

ಇದೇ ವೇಳೆ ಕಾವ್ಯಾ ಮಾರನ್ ಅವರ ವ್ಯಕ್ತಿತ್ವವನ್ನು ಶ್ಲಾಘಿಸಿರುವ ಅವರು, ಕಾವ್ಯಾ ಕೇವಲ ಸಾಮಾನ್ಯ ಹುಡುಗಿಯಲ್ಲ. ಸನ್‌ರೈಸರ್ಸ್ ಹೈದರಾಬಾದ್‌ನಂತಹ ದೊಡ್ಡ ಕ್ರಿಕೆಟ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಸಾಮರ್ಥ್ಯ ಅವರಲ್ಲಿದೆ. ತಂದೆಯ ಉದ್ಯಮದ ಗುಣಗಳು ಅವರಿಗೂ ಬಂದಿವೆ. ಅನಿರುದ್ಧ್ ಮತ್ತು ಕಾವ್ಯಾ ಇಬ್ಬರೂ ಅತ್ಯುತ್ತಮ ಜೋಡಿಯಾಗಲಿದ್ದು, ಮದುವೆಯ ನಂತರ ಇಬ್ಬರೂ ಸೇರಿ ಸಂಗೀತ ಮತ್ತು ಉದ್ಯಮದ ಕ್ಷೇತ್ರದಲ್ಲಿ ಹೊಸ ಎತ್ತರವನ್ನು ತಲುಪಲಿ ಎಂದು ಅವರು ಹಾರೈಸಿದ್ದಾರೆ.

ಕಳೆದ ವರ್ಷದಿಂದಲೇ ಅನಿರುದ್ಧ್ ಮತ್ತು ಕಾವ್ಯಾ ಮಾರನ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ನಟ ರಜನಿಕಾಂತ್ ಅವರು ಕಾವ್ಯಾ ತಂದೆ ಕಲಾನಿಧಿ ಮಾರನ್ ಅವರನ್ನು ಭೇಟಿಯಾಗಿ ಈ ಮದುವೆಯ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂಬ ಚರ್ಚೆಯೂ ನಡೆದಿತ್ತು. ಈ ಹಿಂದೆ ಅನಿರುದ್ಧ್ ಅವರು ಮದುವೆಯ ಸುದ್ದಿಗಳನ್ನು ವದಂತಿ ಎಂದು ಸಾಮಾಜಿಕ ಜಾಲತಾಣದಲ್ಲಿ ತಳ್ಳಿಹಾಕಿದ್ದರೂ, ಸದ್ಯ ಮಾವ ವೈ ಜಿ ಮಹೇಂದ್ರನ್ ನೀಡಿರುವ ಈ ಹೇಳಿಕೆ ಸಿನಿರಂಗದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಆದರೆ ಈ ಬಗ್ಗೆ ಅನಿರುದ್ಧ್ ಅಥವಾ ಕಾವ್ಯಾ ಮಾರನ್ ಕಡೆಯಿಂದ ಇನ್ನೂ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ