LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಿಯಾ ಸುದೀಪ್ ನಿರ್ಮಾಣದ ಸಿನಿಮಾದಲ್ಲಿ ನಿಮ್ಮ ಕಥೆಗೆ ಅವಕಾಶ ಹೊಸ ಪ್ರತಿಭೆಗಳಿಗೆ ಗೋಲ್ಡನ್ ಚಾನ್ಸ್

ಬೆಂಗಳೂರು: ಕನ್ನಡ ಚಿತ್ರರಂಗದ ಬಾದ್‌ಶಾ ಕಿಚ್ಚ ಸುದೀಪ್ ಅವರ ಪತ್ನಿ ಪ್ರಿಯಾ ಸುದೀಪ್ (Priya Sudeep) ಒಡೆತನದ ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋಸ್ (Supriyanvi Picture Studio) ಈಗ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ. ಇತ್ತೀಚೆಗಷ್ಟೇ ಹೊಸ ಪ್ರತಿಭೆಗಳ ಸಿನಿಮಾ ಮ್ಯಾಂಗೋ ಪಚ್ಚ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿದ್ದ ಈ ಬ್ಯಾನರ್, ಇದೀಗ ಚಿತ್ರರಂಗಕ್ಕೆ ಪ್ರವೇಶಿಸಲು ಹಂಬಲಿಸುತ್ತಿರುವ ಹೊಸಬರ ವಿಶಿಷ್ಟ ಆಲೋಚನೆ ಹಾಗೂ ಸೃಜನಶೀಲತೆಗೆ ಮುಕ್ತ ಅವಕಾಶ ನೀಡಲು ಮುಂದಾಗಿದೆ.

ಅನೇಕರು ತಮ್ಮ ಬಳಿ ಅದ್ಭುತ ಕಥೆ ಇಟ್ಟುಕೊಂಡು ಸರಿಯಾದ ವೇದಿಕೆ ಸಿಗದೆ ಒದ್ದಾಡುತ್ತಿರುತ್ತಾರೆ. ಅಂಥವರಿಗೆ ಪ್ರಿಯಾ ಸುದೀಪ್ ಅವರು ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಬ್ಯಾನರ್ ಮೂಲಕ ಕಥೆಗಳನ್ನು ಆಹ್ವಾನಿಸಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

View this post on Instagram

A post shared by Priya R (@supriyanvipicstudio)

ʻನಮಗೆ ಕೇವಲ ಕಥೆಗಳಲ್ಲ, ಹೊಸ ಇತಿಹಾಸ ಬರೆಯುವ ಕಲ್ಪನೆಗಳು ಬೇಕುʼ

ಕಥೆಗಾರರನ್ನು ಆಕರ್ಷಿಸುವ ನಿಟ್ಟಿನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿರುವ ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ, “ಕಥೆಗಾರರೇ ನಿಮ್ಮ ಕಥೆಗೆ ಇದು ಸೂಕ್ತ ವೇದಿಕೆ. ಮೌಲಿಕ ಕಥಾಸಂಕಲನಗಳು, ಹೊಸ ಚಿಂತನೆಗಳು ಮತ್ತು ಪ್ರಬಲ ಧ್ವನಿಗಳು. ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು. ನಿಮ್ಮ ಬಳಿ ಮೌಲಿಕ ಕಥೆ, ಚಿತ್ರಕಥೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ (ಕಾನ್ಸೆಪ್ಟ್) ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ” ಎಂದು ಮುಕ್ತ ಆಹ್ವಾನ ನೀಡಿದೆ.

ಎಲ್ಲಾ ಜಾನರ್‌ (Genre) ಹಾಗೂ ಎಲ್ಲಾ ಮಾದರಿಯ ವಿಶಿಷ್ಟ ದೃಷ್ಟಿಕೋನ ಹೊಂದಿರುವ ಲೇಖಕರು ತಮ್ಮ ಕಥೆಗಳನ್ನು ಸಲ್ಲಿಸಬಹುದಾಗಿದ್ದು, “ನಿಮ್ಮ ಕಥೆಯೇ ಮುಂದಿನ ದೊಡ್ಡ ಸಿನಿಮೀಯ ಪ್ರಯಾಣದ ಆರಂಭವಾಗಬಹುದು” ಎಂದು ಸಂಸ್ಥೆ ಭರವಸೆ ನೀಡಿದೆ.

ಕಥೆ ಸಲ್ಲಿಸುವುದು ಹೇಗೆ? ಇಲ್ಲಿದೆ ವಾಟ್ಸಾಪ್ ನಂಬರ್

ನಿಮ್ಮ ಬಳಿ ಬೆಳ್ಳಿಪರದೆಯ ಮೇಲೆ ತರಬಹುದಾದ ವಿಶಿಷ್ಟ ಕಥೆಗಳಿದ್ದರೆ, ಹೆಚ್ಚಿನ ವಿವರಗಳಿಗಾಗಿ ಸಂಸ್ಥೆಯು ಅಧಿಕೃತ ವಾಟ್ಸಾಪ್ ಸಂಖ್ಯೆಯನ್ನು ನೀಡಿದೆ.

ಅಧಿಕೃತ ವಾಟ್ಸಾಪ್ ಸಂಖ್ಯೆ: 6363307434

ಗಮನಿಸಿ: ಈ ನಂಬರ್‌ಗೆ ಕೇವಲ ವಾಟ್ಸಾಪ್ ಮೆಸೇಜ್ (WhatsApp Chat) ಮೂಲಕ ಮಾತ್ರ ಸಂಪರ್ಕಿಸಬೇಕು. ಯಾವುದೇ ಕರೆಗಳಿಗೆ (Calls) ಅವಕಾಶವಿರುವುದಿಲ್ಲ.

ಭದ್ರಕಾಳಿ ಮಾತೆಯ ಆಶೀರ್ವಾದದೊಂದಿಗೆ ಲೋಗೋ ಅನಾವರಣ

ಕೆಲ ದಿನಗಳ ಹಿಂದಷ್ಟೇ ಪ್ರಿಯಾ ಸುದೀಪ್‌ ಅವರ ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ‘ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋಸ್’ನ ಅಧಿಕೃತ ಮೋಷನ್ ಪೋಸ್ಟರ್ ಹಾಗೂ ಲೋಗೋವನ್ನು ಅನಾವರಣಗೊಳಿಸಲಾಗಿತ್ತು. ಈ ಕುರಿತು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದ ಪ್ರಿಯಾ ಸುದೀಪ್, “ಭದ್ರಕಾಳಿ ಮಾತೆಯ ಪವಿತ್ರ ಆಶೀರ್ವಾದ ಮತ್ತು ನಮ್ಮ ಅಮೂಲ್ಯ ಪ್ರೇಕ್ಷಕರ ಆತ್ಮೀಯ ಪ್ರೋತ್ಸಾಹವನ್ನು ಕೋರುತ್ತಾ ಸಂಸ್ಥೆಯ ಲೋಗೋ ಅನಾವರಣಗೊಳಿಸಿದ್ದೇವೆ. ನಮ್ಮ ಕಥೆಗಳು ನಿಮ್ಮ ಕಲ್ಪನೆಯನ್ನು ಬೆಳಗಿಸಲಿ ಎಂದು ಆಶಿಸಿದ್ದರು.

‘ಮ್ಯಾಂಗೋ ಪಚ್ಚ’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ಮುಂದಿನ ಹೆಜ್ಜೆ

ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋಸ್ ಮತ್ತು ಕೆಆರ್‌ಜಿ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸಿದ್ದ ಮ್ಯಾಂಗೋ ಪಚ್ಚ ಸಿನಿಮಾ ಇತ್ತೀಚೆಗಷ್ಟೇ ತೆರೆಕಂಡು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಮೈಸೂರಿನಲ್ಲಿ ನಡೆದ ನೈಜ ಘಟನೆಯನ್ನಾಧರಿಸಿದ ಈ ಕ್ರೈಂ ಥ್ರಿಲ್ಲರ್ ಚಿತ್ರದ ಮೂಲಕ ಕಿಚ್ಚ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ ನಾಯಕ ನಟನಾಗಿ ಹಾಗೂ ವಿವೇಕ್ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಭರ್ಜರಿಯಾಗಿ ಪಾದಾರ್ಪಣೆ ಮಾಡಿದ್ದರು. ಚಿತ್ರದಲ್ಲಿ ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದರು.

ಮೊದಲ ಸಿನಿಮಾದಲ್ಲೇ ಯುವ ಪ್ರತಿಭೆಗಳಿಗೆ ಮಣೆ ಹಾಕಿದ್ದ ಪ್ರಿಯಾ ಸುದೀಪ್, ಈಗ ಅಧಿಕೃತವಾಗಿ ಮತ್ತಷ್ಟು ಹೊಸ ನಿರ್ದೇಶಕರು ಹಾಗೂ ಚಿತ್ರಕಥೆಗಾರರಿಗೆ ವೇದಿಕೆ ಒದಗಿಸುತ್ತಿರುವುದು ಚಿತ್ರರಂಗದಲ್ಲಿ ಹೊಸ ಭರವಸೆ ಮೂಡಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ