LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಐಐಟಿ ಯೋಜನೆಗಾಗಿ ಭೂಮಿ ಕಳೆದುಕೊಂಡ ಹಾಸನದ ರೈತರಿಗೆ ಸಿಹಿಸುದ್ದಿ ಕೊಟ್ಟ ಸಿಎಂ ಡಿಕೆಶಿ

​ಬೆಂಗಳೂರು: ಹಾಸನದಲ್ಲಿ ಉದ್ದೇಶಿತ ಐಐಟಿ (IIT) ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರ ದಶಕಗಳ ಸಮಸ್ಯೆಗಳಿಗೆ ಶೀಘ್ರವೇ ಕಾನೂನುಬದ್ಧ ಮತ್ತು ನ್ಯಾಯಯುತ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

​ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಾಸನದ ದೊಡ್ಡಹೊನ್ನೇನಹಳ್ಳಿ, ಕಾಚಾನಾಯಕನಹಳ್ಳಿ ಸೇರಿದಂತೆ ಏಳು ಗ್ರಾಮಗಳ ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಭೂಸಂತ್ರಸ್ತರೊಂದಿಗೆ ಸಭೆ ನಡೆಸಿದ ಸಿಎಂ, ಅವರ ಅಹವಾಲುಗಳನ್ನು ಕೂಲಂಕಷವಾಗಿ ಆಲಿಸಿದರು.

​ರೈತರ ಆರೋಪಗಳೇನು?: ಸಭೆಯಲ್ಲಿ ಭಾಗವಹಿಸಿದ್ದ ರೈತರು ತಮ್ಮ ಆಕ್ರೋಶ ಮತ್ತು ಸಂಕಷ್ಟಗಳನ್ನು ಸಿಎಂ ಮುಂದಿಟ್ಟರು. ಧಾರವಾಡಕ್ಕೆ ಸ್ಥಳಾಂತರಗೊಂಡಿರುವ ಐಐಟಿ ಹೆಸರಿನಲ್ಲಿ ಎಚ್.ಡಿ. ದೇವೇಗೌಡ ಎಜುಕೇಷನ್ ಟ್ರಸ್ಟ್ ಮತ್ತು ಪ್ರಭಾವಿ ರಾಜಕೀಯ ಮುಖಂಡರ ಕುಮ್ಮಕ್ಕಿನಿಂದ ರೈತರ ಭೂಮಿಯನ್ನು ಕಬಳಿಸುವ ಸಂಚು ನಡೆಯುತ್ತಿದೆ.

​ಪರಿಹಾರ ಮತ್ತು ನಿವೇಶನದ ವಂಚನೆ: 2007ರಲ್ಲೇ ಅಲ್ಪ ಮೊತ್ತದ ಪರಿಹಾರ ನಿಗದಿಪಡಿಸಲಾಗಿದೆ. ನ್ಯಾಯಾಲಯದ ಆದೇಶದಂತೆ 50:50 ಅನುಪಾತದಲ್ಲಿ ಪರಿಹಾರ ಅಥವಾ ನಿವೇಶನ ನೀಡುವ ಭರವಸೆ ಹುಸಿಯಾಗಿದೆ. ಪರಿಹಾರ ಪಡೆಯಲು ಹೋದರೆ ಅಧಿಕಾರಿಗಳು ಅಲೆದಾಡಿಸುತ್ತಿದ್ದಾರೆ, ನಿವೇಶನ ಕೇಳಿದರೆ ಲಭ್ಯವಿಲ್ಲ ಎಂಬ ಹಿಂಬರಹ ನೀಡುತ್ತಿದ್ದಾರೆ.

​ರಾಜಕೀಯ ಒತ್ತಡ: ಅಧಿಕಾರಿಗಳು ಪ್ರಭಾವಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದು, ರೈತರಿಗೆ ನ್ಯಾಯ ಸಿಗದಂತೆ ಅಡಚಣೆ ಉಂಟು ಮಾಡುತ್ತಿದ್ದಾರೆ. ತಮಗೆ ಪರಿಹಾರವೂ ಬೇಡ, ಸೈಟೂ ಬೇಡ, ಬದಲಿಗೆ ತಮ್ಮ ಜಮೀನನ್ನು ತಮಗೆ ವಾಪಸ್ ನೀಡಿ (ಡಿನೋಟಿಫೈ ಮಾಡಿ) ಎಂದು ರೈತರು ಮನವಿ ಮಾಡಿದರು.

​ಸಿಎಂ ಡಿ.ಕೆ. ಶಿವಕುಮಾರ್ ಅವರ ಭರವಸೆ

ರೈತರ ಅಳಲನ್ನು ಆಲಿಸಿದ ಮುಖ್ಯಮಂತ್ರಿಗಳು, “ನಾನು ಬಿಡದಿ ರೈತರಿಗೆ ಒಂದು ನ್ಯಾಯ, ಹಾಸನ ರೈತರಿಗೆ ಮತ್ತೊಂದು ನ್ಯಾಯ ನೀಡುವುದಿಲ್ಲ. ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ. ರೈತರ ಕೈಗೆ ಹೆಚ್ಚಿನ ಹಣ ಸಿಕ್ಕರೆ ಅಥವಾ ಅವರಿಗೆ ನ್ಯಾಯ ಸಿಕ್ಕರೆ ಸಂತೋಷಪಡುವವನು ನಾನು” ಎಂದು ಸ್ಪಷ್ಟಪಡಿಸಿದರು. ಅಧಿಕಾರಿಗಳಿಂದ ಸ್ಥಳದಲ್ಲೇ ನಕ್ಷೆ ಮತ್ತು ದಾಖಲಾತಿಗಳನ್ನು ಪರಿಶೀಲಿಸಿದ ಸಿಎಂ, “ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸಲಾಗುವುದು. ಅಧಿಕಾರಿಗಳೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಿ, ಕಾನೂನುಬದ್ಧವಾಗಿ ಮತ್ತು ಪಾರದರ್ಶಕವಾಗಿ ಸಮಸ್ಯೆಗೆ ಮುಕ್ತಿ ಹಾಡಲಾಗುವುದು” ಎಂದು ಭರವಸೆ ನೀಡಿದರು. ಸಭೆಯಲ್ಲಿ ಸಂಸದ ಶ್ರೇಯಸ್ ಪಟೇಲ್, ಶಾಸಕ ಶಿವಲಿಂಗೇಗೌಡ, ಮಾಜಿ ಎಂಎಲ್‌ಸಿ ಗೋಪಾಲಸ್ವಾಮಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಶಾಸಕ ಶಿವಲಿಂಗೇಗೌಡರು ಮಾತನಾಡಿ, ಐಐಟಿ ಹೆಸರಿನಲ್ಲಿ ರೈತರ ಭೂಮಿಯನ್ನು ದೋಚಲು ಪ್ರಯತ್ನಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. ​ಈ ಸಭೆಯು ದಶಕಗಳಿಂದ ಕಗ್ಗಂಟಾಗಿದ್ದ ಹಾಸನದ ಭೂಸಂತ್ರಸ್ತರ ಸಮಸ್ಯೆಗೆ ಮುಂಬರುವ ದಿನಗಳಲ್ಲಿ ಶಾಶ್ವತ ಪರಿಹಾರ ಸಿಗಲಿದೆ ಎಂಬ ನಿರೀಕ್ಷೆಯನ್ನು ಮೂಡಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ