LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆ್ಯಕ್ಷನ್ ಪ್ರಿಯರಿಗೆ ಭರ್ಜರಿ ರಸದೌತಣ: ಅದ್ಧೂರಿ ತಾರಾಬಳಗದ ‘ರಕ್ಕಿ’ ಚಿತ್ರದ ಟ್ರೈಲರ್ ರಿಲೀಸ್

ಸ್ಯಾಂಡಲ್‌ವುಡ್ ಅಂಗಳದಲ್ಲಿ ಮತ್ತೊಂದು ಭರ್ಜರಿ ಆ್ಯಕ್ಷನ್ ಕಮರ್ಷಿಯಲ್ ಸಿನಿಮಾದ ಆಗಮನಕ್ಕೆ ವೇದಿಕೆ ಸಿದ್ಧವಾಗಿದೆ. ವೆಂಕಟ್ ಭರದ್ವಾಜ್ ನಿರ್ದೇಶನದಲ್ಲಿ ಮೂಡಿಬಂದಿರುವ ಬಹುನಿರೀಕ್ಷಿತ ‘ರಕ್ಕಿ’ ಚಿತ್ರದ ಅಧಿಕೃತ ಟ್ರೈಲರ್ ಇಂದು ಪಿಆರ್‌ಕೆ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಟ್ರೈಲರ್‌ನ ಪ್ರತಿ ಫ್ರೇಮ್‌ನಲ್ಲೂ ಮಾಸ್ ಎಲಿಮೆಂಟ್‌ಗಳು, ಭರ್ಜರಿ ಸಾಹಸ ದೃಶ್ಯಗಳು ಮತ್ತು ಭಾವನಾತ್ಮಕ ಸನ್ನಿವೇಶಗಳು ಎದ್ದು ಕಾಣುತ್ತಿದ್ದು, ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಿನಿಮಾ ಪ್ರೇಮಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಈ ಚಿತ್ರದ ಮೂಲಕ ನವನಟ ರಕ್ಕಿ ಸುರೇಶ್ ಸ್ಯಾಂಡಲ್‌ವುಡ್‌ಗೆ ನಾಯಕ ನಟನಾಗಿ ಅದ್ಧೂರಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಟ್ರೈಲರ್‌ನಲ್ಲಿ ಅವರ ರಗಡ್ ಲುಕ್, ಖಡಕ್ ಡೈಲಾಗ್ ಹಾಗೂ ಮಾಸ್ ಆ್ಯಕ್ಷನ್ ಝಲಕ್ ಪ್ರೇಕ್ಷಕರಲ್ಲಿ ಚಿತ್ರದ ಮೇಲಿನ ಕುತೂಹಲವನ್ನು ದುಪ್ಪಟ್ಟು ಮಾಡಿದೆ. ಅವರಿಗೆ ಜೋಡಿಯಾಗಿ ಪಲ್ಲವಿ ಮಂಜುನಾಥ್ ಮತ್ತು ಆಶಿಕಾ ಸೋಮಶೇಖರ್ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಚಿತ್ರದಲ್ಲಿ ಹಿರಿಯ ನಟ ಬಿ ಸುರೇಶ, ಸಂಪತ್ ಮೈತ್ರೇಯ, ರಮೇಶ್ ಪಂಡಿತ್, ಜಿಜಿ, ಹರಿಣಿ ಶ್ರೀಕಾಂತ್, ರೇಖಾ ಕೃಷ್ಣಪ್ಪ ಹಾಗೂ ಬಾಲ ರಾಜವಾಡಿ ಸೇರಿದಂತೆ ದೊಡ್ಡ ತಾರಾಬಳಗವೇ ಸಾಥ್ ನೀಡಿದೆ.

ಎಸ್‌ಎನ್‌ಆರ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸುರೇಶ್ ಸಾಲಿಗ್ರಾಮ ಈ ಚಿತ್ರವನ್ನು ಅತ್ಯಂತ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಇನ್ನು ಚಿತ್ರದ ತಾಂತ್ರಿಕ ವರ್ಗವೂ ಅಷ್ಟೇ ಬಲಿಷ್ಠವಾಗಿದ್ದು, ಲೋಕಿ ತವಸ್ಯ ಅವರ ಸಂಗೀತ ಮತ್ತು ಹಿನ್ನೆಲೆ ಸಂಗೀತ ಚಿತ್ರದ ತೂಕವನ್ನು ಹೆಚ್ಚಿಸಿದೆ. ಐಸಾಕ್ ಪ್ರಭಾಕರ್ ಅವರ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನ ಟ್ರೈಲರ್‌ನಲ್ಲಿ ಎದ್ದು ಕಾಣುತ್ತಿದೆ. ಹೈಟ್ ಮಂಜು ಮತ್ತು ಕಂಬಿ ರಾಜು ಅವರ ನೃತ್ಯ ಸಂಯೋಜನೆ ಚಿತ್ರದ ಹಾಡುಗಳಿಗೆ ಮತ್ತಷ್ಟು ಮೆರುಗು ನೀಡಿದೆ. ಇನ್ನು ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಖ್ಯಾತ ಪಿಆರ್‌ಕೆ ಸ್ಟುಡಿಯೋದಲ್ಲಿಯೇ ನಡೆದಿರುವುದು ವಿಶೇಷವಾಗಿದೆ.

ಜುಲೈ 10ಕ್ಕೆ ರಾಜ್ಯಾದ್ಯಂತ ಅದ್ಧೂರಿ ಬಿಡುಗಡೆ

ಎಲ್ಲಾ ಕಮರ್ಷಿಯಲ್ ಎಲಿಮೆಂಟ್‌ಗಳನ್ನು ಒಳಗೊಂಡಿರುವ ಈ ಚಿತ್ರವು ಜುಲೈ 10ರಂದು ಬೆಳ್ಳಿಪರದೆಗೆ ಬರಲು ಸಜ್ಜಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡ್ ಸೃಷ್ಟಿಸಿದ್ದು, ಈಗ ಹೊರಬಂದಿರುವ ಟ್ರೈಲರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಯುವ ಪ್ರೇಕ್ಷಕರನ್ನು ಮತ್ತು ಮಾಸ್ ಸಿನಿಮಾ ಇಷ್ಟಪಡುವವರನ್ನು ಗುರಿಯಾಗಿಸಿಕೊಂಡು ಸಿದ್ಧವಾಗಿರುವ ‘ರಕ್ಕಿ’, ಜುಲೈ ತಿಂಗಳಿನಲ್ಲಿ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಲು ಸಂಪೂರ್ಣವಾಗಿ ಸಿದ್ಧವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ