LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರಾಮುವಿವಿಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಶೈಕ್ಷಣಿಕ ವರ್ಷ 2026-27ರ ಜುಲೈ ಆವೃತ್ತಿಯ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಯುಜಿಸಿ ಅನುಮೋದಿತ ವಿವಿಧ ಪದವಿ, ಸ್ನಾತಕೋತ್ತರ ಪದವಿ (ಎಂ.ಎಸ್.ಡಬ್ಲೂ, ಎಂ.ಲಿಬ್.ಐ.ಎಸ್ಸಿ.), ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಶಿಕ್ಷಣಕ್ರಮಗಳಿಗೆ ಈಗಾಗಲೇ ಆನ್‌ಲೈನ್ ಮೂಲಕ ಪ್ರವೇಶಾತಿ ಪ್ರಾರಂಭವಾಗಿದೆ ಎಂದು ಬಳ್ಳಾರಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕ ನಾಗೇಶ್ ಎಂ. ಅವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ www.ksoumysuru.ac.in ಗೆ ಭೇಟಿ ನೀಡಬಹುದಾಗಿದೆ.

ವಿಶೇಷ ಶುಲ್ಕ ವಿನಾಯಿತಿ ಮತ್ತು ರಿಯಾಯಿತಿಗಳು:

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ / ಎಕ್ಸ್ ಸರ್ವೀಸ್‌ಮನ್ ಅಭ್ಯರ್ಥಿಗಳಿಗೆ, ಆಟೋ ಮತ್ತು ಕ್ಯಾಬ್ ಚಾಲಕರು ಹಾಗೂ ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇರಲಿದೆ.ಕೋವಿಡ್‌ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತೀಯ ಲಿಂಗಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು.

ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದಲ್ಲಿ ವಿದ್ಯಾರ್ಥಿಗಳು ಆನ್‌ಲೈನ್ ಸಹಾಯವಾಣಿ ಮೊ.8800335638 / 8690544544 ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ.9986696487 ಗೆ ಸಂಪರ್ಕಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಕರಾಮುವಿ ಪ್ರಾದೇಶಿಕ ಕೇಂದ್ರ, ಜಿಲ್ಲಾ ಕ್ರೀಡಾಂಗಣದ ಹತ್ತಿರ, ಪ್ರಾದೇಶಿಕ ವಿಜ್ಞಾನ ಕೇಂದ್ರದ ಹಿಂಭಾಗ, ನಲ್ಲಚೆರವು ಪ್ರದೇಶ, ಬಳ್ಳಾರಿ-02 ಇಲ್ಲಿಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ ಬಾಲಕ ಮತ್ತು ಬಾಲಕಿಯರ) ವಿದ್ಯಾರ್ಥಿನಿಲಯಗಳ ಹೊಸ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.

*ಪೋಷಕರ ವಾರ್ಷಿಕ ಆದಾಯದ ಮಿತಿ:*

ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 2.50 ಲಕ್ಷ. ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಇತರೆ ಹಿಂದುಳಿದ ವರ್ಗದವರಿಗೆ ಗರಿಷ್ಠ ರೂ. 1 ಲಕ್ಷ.

ಅರ್ಹ ವಿದ್ಯಾರ್ಥಿಗಳು https://ssp.karnataka.gov.in ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಜುಲೈ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದಲ್ಲಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.8050770004 ಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ