LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎನ್ಯುಮರೇಶನ್ ಫಾರಂ ಭರ್ತಿ ಮಾಡುವ ಮೂಲಕ ಎಸ್‌ಐಆರ್ ಪ್ರಕ್ರಿಯೆಗೆ ಸಿಎಂ ಡಿಕೆಶಿಯಿಂದ ಚಾಲನೆ

ಬೆಂಗಳೂರು: ತಮ್ಮ ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಚಾಲನೆ ನೀಡಿದರು.

ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಶಿವಕುಮಾರ್ ಅವರು ಗಣತಿ ನಮೂನೆ ತುಂಬಿದರು. ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಆರಂಭವಾಗಿದ್ದು, ನನ್ನ ಮನೆಯಿಂದಲೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ನನ್ನ ಎನ್ಯುಮರೇಷನ್ ಅರ್ಜಿಯನ್ನು ಭರ್ತಿ ಮಾಡಿ ಸಹಿ ಮಾಡಿ ಸಲ್ಲಿಕೆ ಮಾಡಿರುವೆ. ನೀವು ನಿಮ್ಮ ಹೆಸರಿನ ಜೊತೆಗೆ ಈ ಹಿಂದೆ ಮತದಾರ ಪಟ್ಟಿ ಸಮಯದಲ್ಲಿ ನೀಡಲಾಗಿದ್ದ ದೂರವಾಣಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಇಲ್ಲವಾದರೆ ಹೊಸ ಮೊಬೈಲ್ ಸಂಖ್ಯೆಯನ್ನು ಅಧಿಕಾರಿಗಳ ಮೂಲಕ ಸೇರ್ಪಡೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಯಾವ ಸಂಖ್ಯೆ ನೀಡಿರುತ್ತಿರೋ ಅದೇ ಸಂಖ್ಯೆಗೆ ಒಟಿಪಿ ಬರಲಿದೆ” ಎಂದು ಮಾಹಿತಿ ನೀಡಿದರು.

ಕುಟುಂಬದವರ ಪರವಾಗಿ ಒಬ್ಬರು ಸಹಿ ಮಾಡಿದರೂ ಅರ್ಜಿ ಸ್ವೀಕಾರ

“ನೀವು ನಿಮ್ಮ ಹೆಸರಿನಲ್ಲಿ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿದೆ. ಬಿಎಲ್ಎ, ಬಿಎಲ್ಓ ಹಾಗೂ ಮೇಲ್ವಿಚಾರಕರು ಈಗಾಗಲೇ ವಾಟ್ಸಪ್ ಗ್ರೂಪ್ ಮಾಡಿಕೊಂಡಿದ್ದಾರೆ. ಕುಟುಂಬದ ಸದಸ್ಯರ ಪೈಕಿ ಒಬ್ಬರು ಸಹಿ ಮಾಡಿದರೂ ಸಾಕು. ಕುಟುಂಬದವರ ಪರವಾಗಿ ಒಬ್ಬರೇ ಎಲ್ಲರ ಅರ್ಜಿ ತುಂಬಬಹುದು. ಅದನ್ನು ಸ್ವೀಕಾರ ಮಾಡಿಕೊಳ್ಳಲಾಗುವುದು. ನಿಮ್ಮ ಫೋಟೋ ಬದಲಾಯಿಸಿಕೊಳ್ಳಬೇಕಾದರೆ ಅರ್ಜಿಯಲ್ಲಿ ಹೊಸ ಫೋಟೋ ನೀಡಬಹುದು. ಹೊಸ ಮತದಾರರು ನಿವಾಸ ದೃಢೀಕರಣ ಪತ್ರ ನೀಡಬೇಕು. ಕರ್ನಾಟಕ ಸರ್ಕಾರ ರಾಜ್ಯದ ಜನರಿಗೆ ಅಗತ್ಯ ಪ್ರಮಾಣಪತ್ರ ನೀಡಲು ಮುಂದಾಗಿದೆ. ಎಲ್ಲರೂ ತಮ್ಮ ಮತದಾನದ ಹಕ್ಕು ಉಳಿಸಿಕೊಳ್ಳಬೇಕು. ಉಳಿಸಿಕೊಳ್ಳದಿದ್ದರೆ ಸರ್ಕಾರ ಸೌಲಭ್ಯ, ಕಾರ್ಯಕ್ರಮಗಳನ್ನು ಪಡೆಯುವುದು ಕಷ್ಟವಾಗಲಿದೆ” ಎಂದು ಮಾಹಿತಿ ನೀಡಿದರು.

ಕೆಲವು ಅನಕ್ಷರಸ್ಥರಿಗೆ ‍ಆಪ್ ಬಳಸುವುದರ ಬಗ್ಗೆ ಮಾಹಿತಿ ಇರುವುದಿಲ್ಲ ಎಂದು ಕೇಳಿದಾಗ, “ಆಪ್‌ ಬಳಸುವ ವಿಚಾರದಲ್ಲಿ ನನಗೂ ಮಾಹಿತಿ ಇಲ್ಲ. ನಾನು ಬೇರೆಯವರ ಸಹಾಯ ಪಡೆದೆ. ಈ ಕಾರಣಕ್ಕೆ ಬಿಎಲ್ಓಗಳ ಮೂಲಕ ಅರ್ಜಿ ಪಡೆದು ಆಫ್‌ ಲೈನ್ ಮೂಲಕವೇ ಅರ್ಜಿ ತುಂಬಬಹುದು” ಎಂದು ತಿಳಿಸಿದರು.

ಕರ್ನಾಟಕದ ವಿಚಾರದಲ್ಲಿ ಈ ಪ್ರಕ್ರಿಯೆ ಬಹಳ ಪ್ರಮುಖವಾಗಿದೆ ಎಂದು ಕೇಳಿದಾಗ, “ಬೇರೆ ರಾಜ್ಯಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಕೇವಲ ಮತದಾರರಿಗೆ ಮಾತ್ರ ನೀಡುತ್ತಿದ್ದು, ಮತದಾನ ಹಕ್ಕು ಇಲ್ಲದವರಿಗೆ ಸೌಲಭ್ಯ ಹಿಂಪಡೆಯಲಾಗುತ್ತಿದೆ. ಅದೇ ವ್ಯವಸ್ಥೆ ರಾಜ್ಯದಲ್ಲೂ ಬರಬಹುದು” ಎಂದು ತಿಳಿಸಿದರು.

“ಇಲ್ಲಿನ ಮತದಾರರಿಗೆ ನಾವು ಗ್ಯಾರಂಟಿ ನೀಡಬಹುದು. ಬೇರೆ ರಾಜ್ಯದ ಮತದಾರರಿಗೆ ನಾವು ಯಾಕೆ ಗ್ಯಾರಂಟಿ ನೀಡಬೇಕು? ನಮ್ಮ ರಾಜ್ಯದವರಿಗೆ ಮಾತ್ರ ಗ್ಯಾರಂಟಿ ನೀಡಬೇಕು ಎಂಬುದು ನಮ್ಮ ಆಲೋಚನೆ” ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ