LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಬೆಂಗಳೂರಿನಲ್ಲಿ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ವಿಶೇಷ ಕಾರ್ಯಚರಣೆ ಬುಧವಾರದಿಂದ ಆರಂಭವಾಗಲಿದೆ. ಒತ್ತುವರಿದಾರರಿಗೆ ಭಾರಿ ದಂಡ ವಿಧಿಸಲಿದ್ದು ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಒತ್ತುವರಿದಾರರು ಸ್ವಯಂ ತೆರವುಗೊಳಿಸಲು ಮಂಗಳವಾರದವರೆಗೂ ಗಡುವು ನೀಡಲಾಗಿದ್ದು, ಬುಧವಾರದಿಂದ ವಿಶೇಷ ಕಾರ್ಯಾಚರಣೆ ಆರಂಭವಾಗಲಿದೆ. ಫುಟ್ ಪಾತ್ ಒತ್ತುವರಿ ತೆರವುಗೊಳಿಸಲಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಯಾರನ್ನೂ ಒಕ್ಕಲಿಬ್ಬಿಸುವ ಕೆಲಸವನ್ನು ನಾವು ಮಾಡುತ್ತಿಲ್ಲ. ಪಾದಚಾರಿಗಳ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಸುಮಾರು ಶೇಕಡ 20ರಷ್ಟು ಪ್ರಮುಖ ರಸ್ತೆಗಳಲ್ಲಿ ಮಾತ್ರ ಪಾದಚಾರಿಗಳ ಸುರಕ್ಷತೆಯ ದೃಷ್ಟಿಯಿಂದ ಬೀದಿ ವ್ಯಾಪಾರ ಮಾಡದಂತೆ ಮನವಿ ಮಾಡಲಾಗಿದೆ. ಉಳಿದ ಶೇಕಡ 80ರಷ್ಟು ರಸ್ತೆಗಳಲ್ಲಿ ವ್ಯಾಪಾರ ನಡೆಸಲು ಅವಕಾಶವಿದೆ. ಪಾದಚಾರಿಗಳಿಗೆ ಸುಗಮ ಸಂಚಾರ ಕಲ್ಪಿಸಲು ಎಲ್ಲರೂ ಸಹಕರಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಮನವಿ ಮಾಡಿದ್ದಾರೆ.

ಅಂಗಡಿ ಮುಂಭಾಗದಲ್ಲಿ ಅಕ್ರಮ ಒತ್ತುವರಿ ಮಾಡಿಕೊಂಡಿರುವವರು ಸ್ವಯಂ ಪ್ರೇರಿತವಾಗಿ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಿಯಮಾನುಸಾರ ತೆರವುಗೊಳಿಸಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ