ಶಿವಮೊಗ್ಗ: ವಿದ್ಯುತ್ ಸರಬರಾಜು ಖಾಸಗಿಕರಣ ಕೆಲವು ರಾಜ್ಯಗಳಲ್ಲಿ ಈಗಾಗಲೇ ಜಾರಿಯಾಗಿದೆ. ರಾಜ್ಯದಲ್ಲಿ ಎಸ್ಕಾಂ ಗಳ ಖಾಸಗೀಕರಣಕ್ಕೆ ನಾವು ಸಿದ್ಧವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಮಂಗಳವಾರ ಶಿವಮೊಗ್ಗದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿ ಖಾಸಗೀಕರಣ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ವಿದ್ಯುತ್ ಖಾಸಗೀಕರಣ ಪ್ರಸ್ತಾಪ 2003ರಲ್ಲಿ ಕೇಂದ್ರ ಸರ್ಕಾರ ತಂದಿತ್ತು. ಕೆಲವು ರಾಜ್ಯಗಳಲ್ಲಿ ಈಗಾಗಲೇ ಜಾರಿಯಾಗಿದೆ. ಹಳೆಯ ಪ್ರಸ್ತಾವನೆ ಇಟ್ಟುಕೊಂಡು ಟಾಟಾ ಕಂಪನಿಯವರು ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ಸರ್ಕಾರದಿಂದ ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲದ ಕಾರಣದಿಂದ ಎಸ್ಕಾಂಗಳ ಮೂಲಕ ಆಕ್ಷೇಪಣೆ ಸಲ್ಲಿಸಲಾಗಿದೆ. ವಿದ್ಯುತ್ ಪೂರೈಕೆ ಖಾಸಗೀಕರಣ ಮಾಡಲು ನಾವು ಸಿದ್ಧರಿಲ್ಲ ಎಂದು ಹೇಳಿದ್ದಾರೆ.