LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷಿ ಮೇಲೆ ಪ್ರಭಾವ, ಸಾಕ್ಷ್ಯ ತಿರುಚುವ ಯತ್ನ

ಬೆಂಗಳೂರು: ನಟ ದರ್ಶನ್ ಆರೋಪಿತರಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖಾಧಿಕಾರಿ ಪಟ್ಟಿ ಮಾಡಿರುವ ಪ್ರಾಸಿಕ್ಯೂಷನ್ ಸಾಕ್ಷಿ ಮೇಲೆ ಪ್ರಭಾವ ಬೀರುವ ಮತ್ತು ಸಾಕ್ಷ್ಯ ನಾಶ ಯತ್ನ ನಡೆದಿದೆ.

ಒತ್ತಡಕ್ಕೆ ಒಳಗಾದ ಸಾಕ್ಷಿಯೇ ನ್ಯಾಯಾಲಯದ ಮುಂದೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಬೆಂಗಳೂರಿನ 58ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿದ ಅಥವಾ ಸಂಬಂಧಪಡದ ವ್ಯಕ್ತಿಯಾಗಲಿ ಯಾವುದೇ ರೀತಿ ಸಾಕ್ಷ್ಯ ತಿರುಚಲು ಪ್ರಯತ್ನಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ. ಸಾಕ್ಷಿಗೆ ರಕ್ಷಣೆ ಒದಗಿಸುವಂತೆ ಪ್ರಕರಣದ ತನಿಖಾ ಅಧಿಕಾರಿಗೆ ನಿರ್ದೇಶನ ನೀಡಲಾಗಿದೆ.

49ನೇ ಸಾಕ್ಷಿಯಾಗಿರುವ ಚಿತ್ರದುರ್ಗದ ದುರ್ಗಾ ಬಾರ್ ಅಂಡ್ ರೆಸ್ಟೋರೆಂಟ್ ನ ಕ್ಯಾಶಿಯರ್ ಸಂದೀಪ್ ಮಂಗಳವಾರ ವಿಚಾರಣೆಗೆ ಹಾಜರಾಗಿದ್ದರು. ಆತನನ್ನು ಪ್ರಾಸಿಕ್ಯೂಷನ್ ಪರ ಎಸ್.ಪಿ.ಪಿ. ಪ್ರಸನ್ನಕುಮಾರ್ ಪರೀಕ್ಷೆಗೆ ಗುರಿಪಡಿಸಿದ್ದು, ಆಗ ಸಂದೀಪ್ ನನಗೆ ಪರಿಚಯವಿರುವ ಆಕರ್ಷ್ ಎಂಬ ವ್ಯಕ್ತಿ ಮೂಲಕ ದೂರವಾಣಿಯೊಂದಿಗೆ ಮಾತನಾಡಿದ ಕೆಲವು ವ್ಯಕ್ತಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡುವ ಸಾಕ್ಷ್ಯದ ಬಗ್ಗೆ ಮಾಹಿತಿ ಕೇಳಿದ್ದು, ತಾವು ಹೇಳಿದಂತೆ ಸಾಕ್ಷ್ಯ ನುಡಿಯಬೇಕು ಎಂದು ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ