ಮಂಗಳೂರು: ಧಾರಾಕಾರ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 2 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೀಗಾಗಿ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜುಲೈ 2 ರಂದು ಗುರುವಾರ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ತಿಳಿಸಿದ್ದಾರೆ.
ಗುರುವಾರ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಲೋಮೀಟರ್ ವರೆಗೂ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.