LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿಗದಿತ ಅವಧಿಯೊಳಗೆ ‘ಎತ್ತಿನಹೊಳೆ’ ಕಾಮಗಾರಿ ಪೂರ್ಣ, ವಾರದೊಳಗೆ ರೈತರಿಗೆ ಪರಿಹಾರ: ಸಚಿವ ರಾಮಲಿಂಗಾರೆಡ್ಡಿ

ಹಾಸನ: ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಐದಳ್ಳ ಕಾವಲ್ ನಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಇಂದು ವೀಕ್ಷಣೆ ನಡೆಸಿ ಮಾತನಾಡಿದ ಅವರು, ಮೂರು ಕಡೆ ಸಮಸ್ಯೆಗಳಿತ್ತು, ಅವುಗಳನ್ನು ಪರಿಹರಿಸಲಾಗಿದೆ. ಈ ಯೋಜನೆಗೆ ಯಾವುದೇ ಅನುದಾನದ ಕೊರತೆಯಿಲ್ಲ. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಈ ಯೋಜನೆಯಿಂದ ಹಾಸನ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ ಜಿಲ್ಲೆಗೆ ಪ್ರಯೋಜನ ದೊರಕಲಿದೆ ಎಂದು ತಿಳಿಸಿದರು.

ರೈತರ ಸಮಸ್ಯೆ ಇತ್ತು. ಸಚಿವ ಸಂಪುಟದಲ್ಲಿ ಕ್ಲಿಯರೆನ್ಸ್ ಮಾಡಿದ್ದಾರೆ. ಉಪ ವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯವರು ಒಂದು ತಿಂಗಳೊಳಗೆ ಸರ್ಕಾರಕ್ಕೆ ವರದಿ ಕಳುಹಿಸುವರು. ಭೂ ಸ್ವಾಧಿನಕ್ಕೆ ಸಂಬಂಧಿಸಿದಂತೆ ಇದ್ದ ಸಮಸ್ಯೆ ನಿವಾರಣೆಯಾಗಿದೆ. ರೈತರೇ ಸ್ವ ಇಚ್ಚೆಯಿಂದ ಭೂಮಿ ಬಿಟ್ಟು ಕೊಡಲು ಒಪ್ಪಿದ್ದಾರೆ.. ಒಂದು ವಾರದೊಳಗೆ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಸಂಸದ ಶ್ರೇಯಸ್ ಎಂ ಪಟೇಲ್, ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ, ಶಾಸಕ ಹೆಚ್.ಕೆ.ಸುರೇಶ್, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಶುಕ್ಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಎತ್ತಿನಹೊಳೆ ಯೋಜನೆಯ ಮುಖ್ಯ ಇಂಜಿನಿಯರ್ ಆನಂದ್, ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ಮತ್ತಿತರರು ಹಾಜರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ