LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಜ್ಯೋತಿ ಫಲಾನುಭವಿಗಳ ಗಮನಕ್ಕೆ: ಉಚಿತ ವಿದ್ಯುತ್ ಪಡೆಯಲು ಈ ದಾಖಲೆ ಕಡ್ಡಾಯ

ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಅರ್ಹ ಫಲಾನುಭವಿಗಳ ಪುನರ್ ಪರಿಶೀಲನಾ ಕಾರ್ಯ ಜುಲೈ 1 ರಿಂದ ಅಧಿಕೃತವಾಗಿ ಆರಂಭವಾಗಲಿದೆ. ಸಿಬ್ಬಂದಿ ನೇರವಾಗಿ ಗ್ರಾಹಕರ ಮನೆ-ಮನೆಗೆ ಭೇಟಿ ನೀಡಲಿದ್ದಾರೆ.

ಕಳೆದ 2023 ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿದ್ದ ಗೃಹ ಜ್ಯೋತಿ ಯೋಜನೆಯ ಅರ್ಹತೆಯನ್ನು ಮರು ಪರಿಶೀಲಿಸುವ ಉದ್ದೇಶದಿಂದ ಇಂಧನ ಇಲಾಖೆ ಈ ಮಹತ್ವದ ಕ್ರಮಕ್ಕೆ ಮುಂದಾಗಿದೆ.

ಸ್ಥಳದಲ್ಲೇ ದಾಖಲೆ ಪರಿಶೀಲನೆ, ಆಪ್ ಮೂಲಕ ಮಾಹಿತಿ ಸಂಗ್ರಹ ಸೆಸ್ಕ್ ಮೀಟರ್ ರೀಡರ್‍ಗಳು ಹಾಗೂ ಇಲಾಖೆಯ ಸಿಬ್ಬಂದಿಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ಮೂಲ ದಾಖಲೆಗಳನ್ನು ಸ್ಥಳದಲ್ಲೇ ಪರಿಶೀಲಿಸಲಿದ್ದಾರೆ. ಬಳಿಕ ವಿಶೇಷ ಮೊಬೈಲ್ ಆಪ್ ಹಾಗೂ ಅಧಿಕೃತ ಘೋಷಣಾ ಪತ್ರದ ಮೂಲಕ ಹೊಸದಾಗಿ ಮಾಹಿತಿ ಸಂಗ್ರಹಿಸಿ, ಅರ್ಜಿ ಭರ್ತಿ ಮಾಡುವ ಪ್ರಕ್ರಿಯೆಯನ್ನು ಸ್ಥಳದಲ್ಲೇ ಪೂರ್ಣಗೊಳಿಸಲಿದ್ದಾರೆ.

ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ತಪಾಸಣೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಸಾರ್ವಜನಿಕರು ಸಿಬ್ಬಂದಿಯೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕೆಂದು ಸೆಸ್ಕ್ ಇಲಾಖೆ ಮನವಿ ಮಾಡಿದೆ.

ಈ ದಾಖಲೆಗಳು ಕಡ್ಡಾಯ ಮನೆ-ಮನೆ ಭೇಟಿಯ ಸಂದರ್ಭದಲ್ಲಿ ಫಲಾನುಭವಿಗಳು ಆಧಾರ್ ಕಾರ್ಡ್, ಫಲಾನುಭವಿಯ ಇತ್ತೀಚಿನ ಪಾಸ್‍ ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ(ವೋಟರ್ ಐಡಿ), ಪ್ಯಾನ್ ಕಾರ್ಡ್, ರೇಷನ್ ಕಾರ್ಡ್(ಪಡಿತರ ಚೀಟಿ), ಜಾತಿ ಪ್ರಮಾಣ ಪತ್ರ, ಬಾಡಿಗೆ ಒಪ್ಪಂದದ ಪತ್ರ (ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ಮಾತ್ರ ಅನ್ವಯ) ಜಿಲ್ಲೆ ಮತ್ತು ತಾಲೂಕುಗಳಲ್ಲಿ ಏಕಕಾಲಕ್ಕೆ ಈ ಪರಿಶೀಲನಾ ಕಾರ್ಯ ಚುರುಕಾಗಲಿದೆ. ನಿಯಮಿತವಾಗಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಗ್ರಾಹಕರು ಯಾವುದೇ ಗೊಂದಲಕ್ಕೆ ಒಳಗಾಗದೆ, ತಮ್ಮ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಪ್ರಕ್ರಿಯೆ ಮುಗಿಸಿಕೊಳ್ಳುವಂತೆ ಸೆಸ್ಕ್ ಇಇ ರಾಮಚಂದ್ರ ಅವರು ಕೋರಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ