LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನ ವಿರುದ್ಧ ಲೋಕಾಯುಕ್ತಕ್ಕೆ ದೂರು ಹಾಸ್ಯಾಸ್ಪದ: ನೋಟಿಸ್ ಬರುವ ಮುನ್ನವೇ ಸುದೀರ್ಘ ಉತ್ತರ ನೀಡುತ್ತೇನೆ ಎಂದ ಸುರೇಶ್ ಕುಮಾರ್

ಬೆಂಗಳೂರು: ಬಿಜೆಪಿಯ ಹಿರಿಯ ಶಾಸಕ ಸುರೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದ್ದು, ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸುವ ಸುರೇಶ್ ಕುಮಾರ್ ನನ್ನ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿರುವುದು ಶುದ್ಧ ಹಾಸ್ಯಾಸ್ಪದ ಎಂದು ತಿರುಗೇಟು ಕೊಟ್ಟಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತ ಹಾಗೂ ವಕೀಲ ಸೂರ್ಯ ಮುಕುಂದರಾಜ್ ಎಂಬುವವರು ತಮ್ಮ ವಿರುದ್ಧ ನೀಡಿರುವ ದೂರು ಸಂಪೂರ್ಣ ಸುಳ್ಳು ಹಾಗೂ ಹಾಸ್ಯಾಸ್ಪದ. ಅಧಿಕಾರ ದುರುಪಯೋಗ ಪಡಿಸಿಕೊಂಡು, ನಿಯಮ ಗಾಳಿಗೆ ತೂರಿ ಬೇನಾಮಿ ಗುತ್ತಿಗೆದಾರರಿಗೆ ಲಾಭ ಮಾಡಿಕೊಟ್ಟು ಸರ್ಕಾರಿ ಖಜಾನೆಗೆ ನಷ್ಟ ಉಂಟುಮಾಡಿದ್ದಾರೆ ಎಂಬ ಆರೋಪವನ್ನು ಶಾಸಕರು ನಿರಾಕರಿಸಿದ್ದಾರೆ.

ತಮ್ಮ ವಿರುದ್ಧ ದೂರು ನೀಡಿರುವ ಸೂರ್ಯ ಮುಕುಂದರಾಜ್ ಅವರ ಹಿನ್ನೆಲೆ ಮತ್ತು ಉದ್ದೇಶದ ಕುರಿತು ಪ್ರಸ್ತಾಪಿಸಿರುವ ಸುರೇಶ್ ಕುಮಾರ್, ‘ದೂರುದಾರರು ಯಾರ ಪರವಾಗಿ ಈ ಎಲ್ಲಾ ಕಾರ್ಯಾಚರಣೆ ಮಾಡುತ್ತಿದ್ದಾರೆ ಎಂಬುದು ನನಗೆ ಸ್ಪಷ್ಟವಾಗಿ ಗೊತ್ತಿದೆ. ಇಡೀ ಬೆಂಗಳೂರಿನಲ್ಲಿ ಕಾಮಗಾರಿಗಳನ್ನು ಕೈಗೊಂಡು, ಕೆಲಸ ಮಾಡದೆಯೇ ಬಿಲ್ ಪಡೆಯುವ ಕುಖ್ಯಾತಿಯನ್ನು ಹೊಂದಿರುವ ಕೆಲ ವ್ಯಕ್ತಿಗಳಿದ್ದಾರೆ. ಅಂತಹ ವ್ಯಕ್ತಿಗಳ ಪರವಾಗಿ ಸೂರ್ಯ ಮುಕುಂದರಾಜ್ ಅವರು ಈ ರೀತಿಯ ವಕಾಲತ್ತು ವಹಿಸಿರುವುದು ನನಗೆ ನಿಜಕ್ಕೂ ಕನಿಕರವೆನಿಸುತ್ತಿದೆ’ ಎಂದು ಲೇವಡಿ ಮಾಡಿದ್ದಾರೆ.

‘ನನ್ನ ನಾಲ್ಕು ದಶಕಗಳ ಸುದೀರ್ಘ ಸಾರ್ವಜನಿಕ ಬದುಕಿನಲ್ಲಿ ನಾನು ಎಂದಿಗೂ, ಯಾವುದೇ ಗುತ್ತಿಗೆಯ ಕೆಲಸಗಳಲ್ಲಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಕೈ ಹಾಕಿಲ್ಲ. ಬೇನಾಮಿ ಗುತ್ತಿಗೆದಾರರು ಎಂಬ ಅಂಶವೇ ನನ್ನ ಜೀವನದಲ್ಲಿ ಬಂದಿಲ್ಲ. ಸರ್ಕಾರಕ್ಕಾಗಲಿ ಅಥವಾ ನಗರ ಪಾಲಿಕೆಗಾಗಲಿ ನಷ್ಟ ಉಂಟು ಮಾಡುವ ಮನಸ್ಥಿತಿ ನನ್ನದಲ್ಲ. ಬೆಂಗಳೂರಿನ ರಾಜಕಾರಣದಲ್ಲಿರುವವರಿಗೆ ಮತ್ತು ನಗರ ಪಾಲಿಕೆಯ ಎಲ್ಲಾ ಅಧಿಕಾರಿಗಳಿಗೆ ನನ್ನ ವ್ಯಕ್ತಿತ್ವ ಏನು ಎಂಬುದು ಚೆನ್ನಾಗಿ ತಿಳಿದಿದೆ. ಈ ದೂರು ಕೇವಲ ನನ್ನ ಹೆಸರಿಗೆ ಕೆಸರೆರಚುವ ರಾಜಕೀಯ ದುರುದ್ದೇಶದ ಪ್ರಯತ್ನವಷ್ಟೇ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಲೋಕಾಯುಕ್ತ ಸಂಸ್ಥೆಯು ಈ ಕುರಿತು ಸಂಪೂರ್ಣ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ. ಲೋಕಾಯುಕ್ತ ಕಚೇರಿಯಿಂದ ತಮಗೆ ಯಾವುದೇ ಅಧಿಕೃತ ನೋಟಿಸ್ ಬರುವ ಮುನ್ನವೇ, ಮುಂದಿನ ಎರಡು ದಿನಗಳಲ್ಲಿ ದೂರಿನ ಎಲ್ಲಾ ಅಂಶಗಳಿಗೂ ತಾವೇ ಸ್ವತಃ ಸುದೀರ್ಘವಾದ ಉತ್ತರವನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ.

ದೂರಿನಲ್ಲಿರುವ ಪ್ರತಿಯೊಂದು ಅಂಶಕ್ಕೂ ಪೂರ್ಣ ಉತ್ತರ ನೀಡುವ ಮುಖಾಂತರ, ಈ ದೂರುದಾರರ ಒಟ್ಟು ದುರುದ್ದೇಶದ ಕುರಿತು ಉನ್ನತ ಮಟ್ಟದ ತನಿಖೆ ಮಾಡಬೇಕೆಂದು ಲೋಕಾಯುಕ್ತರನ್ನು ಕೋರುವುದಾಗಿ ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಸಾರ್ವಜನಿಕ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ ವಕೀಲ ಸೂರ್ಯ ಮುಕುಂದರಾಜ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. 2020ರಿಂದಲೇ ಬಿಬಿಎಂಪಿ ಅಧಿಕಾರಿಗಳ ಮೇಲೆ ರಾಜಕೀಯ ಪ್ರಭಾವ ಬೀರಿರುವ ಶಾಸಕರು, ಅರ್ಹ ಎಲ್-1 (L1) ಬಿಡ್ಡರ್‌ಗಳನ್ನು ಕಡೆಗಣಿಸಿ ತಮ್ಮ ಆಪ್ತ ಹಾಗೂ ಬೇನಾಮಿ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ಕೊಡಿಸಲು ಕೆಟಿಪಿಪಿ ಕಾಯ್ದೆ ಸೇರಿದಂತೆ ಟೆಂಡರ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಪಾರದರ್ಶಕತೆಯನ್ನು ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ