LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರೀ ಮಳೆ ಮುನ್ಸೂಚನೆ, ಆರೆಂಜ್ ಅಲರ್ಟ್ ಘೋಷಣೆ ಹಿನ್ನೆಲೆ ಇಂದು ದಕ್ಷಿಣ ಕನ್ನಡ ಜಿಲ್ಲೆ ಶಾಲೆಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ದರ್ಶನ್ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ. ಆದೇಶ ಉಲ್ಲಂಘಿಸುವ ಶಾಲಾ, ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನದಿ ಸಮುದ್ರ ತೀರಕ್ಕೆ ಹೋಗದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಆರೆಂಜ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

1. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಯಾವುದೇ ತರಗತಿಗಳನ್ನು ನಡೆಸದಂತೆ ಆದೇಶಿಸಿ, ದಿನಾಂಕ: 03.07.2026 ರಂದು ರಜೆಯನ್ನು ಘೋಷಿಸಲಾಗಿರುತ್ತದೆ. ಸದರಿ ಆದೇಶವನ್ನು ಉಲ್ಲಂಘಿಸಿದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಕಲಂ 51(ಬಿ) ರ ಅನ್ವಯ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು.

2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

5. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳುವುದು.

+ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.

ಟೋಲ್ ಫ್ರೀ ಸಂಖ್ಯೆ: 1077 0824-2442590

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಸಿಐಡಿ ತನಿಖೆಯಲ್ಲಿ ₹5 ಕೋಟಿಗೂ ಹೆಚ್ಚು ಅಕ್ರಮ ಹಣ ರವಾನೆ ಪತ್ತೆಹಾವೇರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ; ತಂದೆ, ಮಗ ಸ್ಥಳದಲ್ಲೇ ದುರಂತ ಸಾವು!BREAKING : ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ರಸ್ತೆಗೆ ಬಿದ್ದ ಬೈಕ್ ಸವಾರರ ಮೇಲೆ ಹರಿದ ಬಸ್ : ಸ್ಥಳದಲ್ಲೇ ಇಬ್ಬರ ದುರ್ಮರಣ!BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYC