ಬಳ್ಳಾರಿ: ಮದುವೆಯಾಗಿರುವ ವಿಷಯ ಮುಚ್ಚಿಟ್ಟು ಅವಿವಾಹಿತನೆಂದು ನಂಬಿಸಿ ವಿದ್ಯಾರ್ಥಿನಿ ಮೇಲೆ ಉಪನ್ಯಾಸಕ ಅತ್ಯಾಚಾರ ಎಸಗಿದ್ದಾನೆ. ಬಳ್ಳಾರಿಯ ಖಾಸಗಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಜಿ. ರವಿಕಿರಣ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ವರ್ಷದಿಂದ ವಿದ್ಯಾರ್ಥಿನಿಯೊಂದಿಗೆ ಮೊಬೈಲ್ ನಲ್ಲಿ ಚಾಟಿಂಗ್ ಮಾಡುತ್ತಿದ್ದ ಆರೋಪಿ ದಿನ ಕಳೆದಂತೆ ಪ್ರೀತಿಸುವುದಾಗಿ ಹೇಳಿದ್ದ. ಇದನ್ನೇ ನೆಪವಾಗಿಟ್ಟುಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ. ಆಂಧ್ರಪ್ರದೇಶದ ತಿರುಪತಿಯ ಆರೋಪಿ ರವಿಕಿರಣ್ ಬಳ್ಳಾರಿ ನಗರದ ಕಾಲೇಜೊಂದರಲ್ಲಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದು, ಕ್ಯಾಂಪಸ್ ನಲ್ಲಿ ವಾಸವಾಗಿದ್ದ.
ವಿದ್ಯಾರ್ಥಿನಿಯನ್ನು ಅಜ್ಞಾತ ಸ್ಥಳಕ್ಕೆ ಕಾರ್ ನಲ್ಲಿ ಕರೆದುಕೊಂಡು ಹೋಗಿ ಇದು ಅತ್ಯಾಚಾರ ಎಸಗಿರುವುದಾಗಿ ವಿದ್ಯಾರ್ಥಿನಿ ಪೋಷಕರಿಗೆ ಮಾಹಿತಿ ನೀಡಿದ್ದರು. ನಂತ ಪೊಲೀಸರಿಗೆ ದೂರು ನೀಡಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.