LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ ನಿನೋ ಪರಿಣಾಮ ಎದುರಿಸಲು ರಾಜ್ಯ ಸಜ್ಜಾಗಿದೆ: ಜನರು ಹಿತಮಿತವಾಗಿ ನೀರು ಬಳಸಿ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಎನ್ ನಿ ನೋ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಕೊರತೆ ಆಗಿದ್ದು, ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಮುಂಗಡವಾಗಿ 117 ಕೋಟಿ ರೂ. ಬಿಡುಗಡೆ ಮಾಡಲಾಗಿದೆ, ನೀರು ಪೂರೈಕೆಗೆ ಹಣದ ಕೊರತೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈಗಾಗಲೇ ಸುಮಾರು 85 ಕೋಟಿ ರೂಪಾಯಿಗಳಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ. 30 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.

ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆಗಳ ಒಳಗಾಗಿ ಪರಿಹರಿಸುವಂತೆ ಸೂಚಿಸಲಾಗಿದೆ. ಖಾಸಗಿ ತೆರೆದ ಬಾವಿ, ಬೋರ್ ವೆಲ್ ಗಳಿಂದ ನೀರುಪಡೆದು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ತೀರಾ ಅಗತ್ಯಬಿದ್ದ ಸಂದರ್ಭದಲ್ಲಿ ಮಾತ್ರ ಕೊಳವೆ ಬಾವಿ ಕೊರೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಕಳೆದ 2-3 ದಿನದಿಂದ ಮಳೆ ಆಗುತ್ತಿದ್ದು, ಕೆಲವು ಜಲಾಶಯಗಳಿಗೆ ನೀರು ಬರುತ್ತಿದೆ. ಈ ಸಂಕಷ್ಟದ ಸಮಯದಲ್ಲಿ ಜೀವಜಲವನ್ನು ಹಿತಮಿತವಾಗಿ ಜನರು ಬಳಸಬೇಕು. ಪೋಲು ಮಾಡಬಾರದು ಎಂದು ಮನವಿ ಮಾಡಿದ ಅವರು, ಪಂಚಾಯ್ತಿಗಳು ನೀರು ಸೋರಿಕೆ ಆಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ