LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಕಾಲಘಟ್ಟ’ ಸಿನಿಮಾದ ‘ನೀನೇನೆ ನನ್ನ ದೇವತೆ’ ಸಾಂಗ್ ರಿಲೀಸ್ : ಮೆಲೋಡಿ ಹಾಡಿಗೆ ಮನಸೋತ ಪ್ರೇಕ್ಷಕರು

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥಾಹಂದರಗಳ ಮೂಲಕ ಗಮನ ಸೆಳೆಯುತ್ತಿರುವ ‘ಕಾಲಘಟ್ಟ’ ಸಿನಿಮಾದ ಹೊಸ ಹಾಡೊಂದು ಬಿಡುಗಡೆಯಾಗಿದೆ. ಚಿತ್ರದ ‘ನೀನೇನೆ ನನ್ನ ದೇವತೆ’ ಎಂಬ ರೋಮ್ಯಾಂಟಿಕ್ ಮೆಲೋಡಿ ಹಾಡು ಸದ್ಯಕ್ಕೆ ಸಂಗೀತ ಪ್ರೇಮಿಗಳ ಗಮನ ಸೆಳೆಯುತ್ತಿದ್ದು ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.

ಅಭಿದಾಸ್ ಮತ್ತು ಮೇಘಾ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಚಿತ್ರದ ಈ ಹೊಸ ಹಾಡಿಗೆ ಪ್ರಸಿದ್ಧ ಗಾಯಕ ಸುನಿಲ್ ಗುಜಗೊಂಡ ಧ್ವನಿಯಾಗಿದ್ದಾರೆ. ಅವರ ಭಾವಪೂರ್ಣ ಗಾಯನ ಮತ್ತು ಅದ್ಭುತ ಧ್ವನಿ ಈ ಹಾಡಿನ ಪ್ರಮುಖ ಆಕರ್ಷಣೆಯಾಗಿದೆ. ಎ ಎಂ ನೀಲ್ ಅವರ ಹಿತವಾದ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಗೀತೆಗೆ ಸಿದ್ದು ಶಿವರಾಮ್ ಅವರು ಅರ್ಥಪೂರ್ಣ ಸಾಹಿತ್ಯ ಬರೆದಿದ್ದಾರೆ.

ಕೆ ಪ್ರಕಾಶ್ ಅಂಬಾಲೆ ಅವರ ನಿರ್ದೇಶನ ಮತ್ತು ಚಿತ್ರಕಥೆಯಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ಲಯನ್ ಚಿಕ್ಕೇಗೌಡ ಟಿ ಸಿ ತಳಗಾವಡಿ ಅವರು ಅದ್ಧೂರಿಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಸದಾಶಿವ ಹಿರೇಮಠ್ ಹಾಗೂ ರಾಜ್ ಕಡೂರ್ ಅವರ ಛಾಯಾಗ್ರಹಣವಿದ್ದು ವೆಂಕಿ ಯುಡಿವಿ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಮಾಸ್ ಮಾದ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಸದ್ಯ ಬಿಡುಗಡೆಯಾಗಿರುವ ಈ ಪ್ರೇಮಗೀತೆ ಕೇಳುಗರ ಮನಸ್ಸಿಗೆ ಹತ್ತಿರವಾಗುತ್ತಿದ್ದು ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ