LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮನೆಯಲ್ಲೇ ಮಾಡಿ ಗರಿಗರಿಯಾದ ಬೇಕರಿ ಶೈಲಿಯ ಬ್ರೆಡ್ ಟೋಸ್ಟ್ ಇಲ್ಲಿದೆ ಸುಲಭ ರೆಸಿಪಿ

ಸಂಜೆ ಚಹಾದ ಜೊತೆಗೆ ಏನಾದರೂ ಗರಿಗರಿಯಾದ ತಿಂಡಿ ಇದ್ದರೆ ಅದರ ಮಜಾವೇ ಬೇರೆ. ಅದರಲ್ಲೂ ಬೇಕರಿಗಳಲ್ಲಿ ಸಿಗುವ ಮಸಾಲೆ ಬ್ರೆಡ್ ಟೋಸ್ಟ್ ಅಂದರೆ ಮಕ್ಕಳಿಗೆ ಮಾತ್ರವಲ್ಲದೆ ದೊಡ್ಡವರಿಗೂ ಸಖತ್ ಇಷ್ಟ. ಪ್ರತೀ ಬಾರಿಯೂ ಬೇಕರಿಯಿಂದಲೇ ತರುವ ಬದಲು ಅತ್ಯಂತ ಸುಲಭವಾಗಿ ಮತ್ತು ಆರೋಗ್ಯಕರವಾಗಿ ಮನೆಯಲ್ಲೇ ಬೇಕರಿ ಶೈಲಿಯ ಬ್ರೆಡ್ ಟೋಸ್ಟ್ ತಯಾರಿಸಬಹುದು. ಇದನ್ನು ಮಾಡುವ ಸರಳ ವಿಧಾನ ಇಲ್ಲಿದೆ.

ಬೇಕಾಗುವ ಸಾಮಗ್ರಿಗಳು ಬ್ರೆಡ್ ಸ್ಲೈಸ್ ಗಳು, ಸಣ್ಣದಾಗಿ ಹೆಚ್ಚಿದ ಈರುಳ್ಳಿ, ಟೊಮೆಟೊ, ಕ್ಯಾಪ್ಸಿಕಂ, ಕ್ಯಾರೆಟ್ ತುರಿ, ಹಸಿಮೆಣಸಿನಕಾಯಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಖಾರದ ಪುಡಿ, ಗರಂ ಮಸಾಲಾ, ಚಾಟ್ ಮಸಾಲಾ, ಕೊತ್ತಂಬರಿ ಸೊಪ್ಪು, ಬೆಣ್ಣೆ ಅಥವಾ ಎಣ್ಣೆ ಮತ್ತು ರುಚಿಗೆ ತಕ್ಕಷ್ಟು ಉಪ್ಪು.

ಮೊದಲಿಗೆ ಒಂದು ಪಾತ್ರೆಯಲ್ಲಿ ಹೆಚ್ಚಿದ ಈರುಳ್ಳಿ, ಟೊಮೆಟೊ, ಕ್ಯಾರೆಟ್ ತುರಿ ಮತ್ತು ಕ್ಯಾಪ್ಸಿಕಂಗಳನ್ನು ಹಾಕಿಕೊಳ್ಳಿ. ಇದಕ್ಕೆ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಹಸಿಮೆಣಸಿನಕಾಯಿ, ಖಾರದ ಪುಡಿ, ಗರಂ ಮಸಾಲಾ, ಚಾಟ್ ಮಸಾಲಾ, ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಕೊತ್ತಂಬರಿ ಸೊಪ್ಪನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಒಂದು ಮಸಾಲೆಯನ್ನು ಸಿದ್ಧಪಡಿಸಿಕೊಳ್ಳಿ.

ನಂತರ ಗ್ಯಾಸ್ ಮೇಲೆ ತವಾವನ್ನು ಇಟ್ಟು ಬ್ರೆಡ್ ನ ಒಂದು ಬದಿಗೆ ಸ್ವಲ್ಪ ಬೆಣ್ಣೆ ಸವರಿ ಲಘುವಾಗಿ ಟೋಸ್ಟ್ ಮಾಡಿ. ಈಗ ಟೋಸ್ಟ್ ಮಾಡಿದ ಆ ಬದಿಯ ಮೇಲೆ ಸಿದ್ಧಪಡಿಸಿಟ್ಟುಕೊಂಡ ತರಕಾರಿ ಮಸಾಲೆಯನ್ನು ಸಮನಾಗಿ ಹರಡಿ. ಅದರ ಮೇಲೆ ಮತ್ತೊಂದು ಬ್ರೆಡ್ ಇಡಬಹುದು ಅಥವಾ ಸಿಂಗಲ್ ಸ್ಲೈಸ್ ನಲ್ಲೇ ಮಾಡಬಹುದು. ತವಾದ ಮೇಲೆ ಸ್ವಲ್ಪ ಬೆಣ್ಣೆ ಹಾಕಿ ಮಸಾಲೆ ಇರುವ ಭಾಗವನ್ನು ಕೆಳಗೆ ಮಾಡಿ ಕಡಿಮೆ ಉರಿಯಲ್ಲಿ ಗರಿಗರಿಯಾಗುವವರೆಗೆ ಬೇಯಿಸಿ. ಎರಡು ಬದಿ ಚೆನ್ನಾಗಿ ಬೆಂದ ನಂತರ ತವಾದಿಂದ ಇಳಿಸಿದರೆ ರುಚಿಕರವಾದ ಬೇಕರಿ ಸ್ಟೈಲ್ ಬ್ರೆಡ್ ಟೋಸ್ಟ್ ಸವಿಯಲು ಸಿದ್ಧವಾಗುತ್ತದೆ. ಇದನ್ನು ಟೊಮೆಟೊ ಸಾಸ್ ಜೊತೆ ಬಿಸಿಯಾಗಿ ಸವಿಯಬಹುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆ