LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೃತಿ ಸನೋನ್ ಮದುವೆ ಮತ್ತು ಬ್ರೇಕಪ್ ವದಂತಿ: ಅಸಲಿ ಸತ್ಯ ಬಿಚ್ಚಿಟ್ಟ ಬಾಮೈದ ಸ್ಟೆಬಿನ್ ಬೆನ್!

ಬಾಲಿವುಡ್ ಸ್ಟಾರ್ ನಟಿ ಕೃತಿ ಸನೋನ್ ಮತ್ತು ಉದ್ಯಮಿ ಕಬೀರ್ ಬಹಿಯಾ ಅವರ ಡೇಟಿಂಗ್ ಹಾಗೂ ಮದುವೆ ವಿಚಾರ ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕೃತಿ ಸನೋನ್ ತಂಗಿ ನೂಪುರ್ ಸನೋನ್ ಅವರ ಜೋಡಿಯಾಗಿರುವ ಗಾಯಕ ಸ್ಟೆಬಿನ್ ಬೆನ್, ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಕೃತಿ ಅವರ ಮದುವೆ ಮತ್ತು ವೃತ್ತಿಜೀವನದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.

ಉತ್ತಮ ವರ ಸಿಗುವವರೆಗೂ ಮದುವೆ ಬೇಡ

ಕೃತಿ ಸನೋನ್ ಮದುವೆ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ಟೆಬಿನ್ ಬೆನ್, ಕೃತಿ ಅವರ ತಂಗಿ ಮದುವೆಯಾದಾಗಿನಿಂದ ಎಲ್ಲರೂ ಕೃತಿ ಸರದಿ ಯಾವಾಗ ಎಂದು ಕೇಳುತ್ತಿದ್ದಾರೆ. ಆದರೆ ಅವರು ಸದ್ಯಕ್ಕೆ ತಮ್ಮ ವೃತ್ತಿಜೀವನದಲ್ಲಿ ಅತ್ಯುತ್ತಮ ಸ್ಥಾನದಲ್ಲಿದ್ದಾರೆ. ಸಣ್ಣ ಊರಿನಿಂದ ಬಂದು ಸ್ವಂತ ಶ್ರಮದಿಂದ ಈ ಮಟ್ಟಕ್ಕೆ ಬೆಳೆದಿದ್ದಾರೆ. ಮದುವೆ ಎಂಬುದು ವೈಯಕ್ತಿಕ ನಿರ್ಧಾರವಾಗಿದ್ದು, ತಮಗೆ ಸೂಕ್ತವಾದ ಹುಡುಗ ಸಿಕ್ಕಿ, ನಂಬಿಕೆ ಬಂದ ಮೇಲಷ್ಟೇ ಅವರು ಈ ತೀರ್ಮಾನ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ಮದುವೆಗೆ ಯಾರಿಗೂ ಧಾವಂತ ಬೇಡ ಎಂದು ಹೇಳಿದ್ದಾರೆ. ಅಲ್ಲದೆ ಕೃತಿ ಅವರ ಸಿನಿಮಾ ಜರ್ನಿಯನ್ನು ತಮ್ಮದೇ ವೃತ್ತಿಜೀವನಕ್ಕೆ ಹೋಲಿಸಿದ ಸ್ಟೆಬಿನ್, ಕೃತಿ ಸದ್ಯಕ್ಕೆ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡಿದ್ದು, ಅವರ ಭವಿಷ್ಯ ಮತ್ತಷ್ಟು ಯಶಸ್ವಿಯಾಗಲಿದೆ ಎಂದು ಪ್ರಶಂಸಿಸಿದ್ದಾರೆ.

ಬ್ರೇಕಪ್ ವದಂತಿಗೆ ಬಿದ್ದಿತು ತೆರೆ

ಇನ್ನೊಂದೆಡೆ ಕೃತಿ ಸನೋನ್ ಮತ್ತು ಕಬೀರ್ ಬಹಿಯಾ ನಡುವೆ ಬ್ರೇಕಪ್ ಆಗಿದೆ ಎಂಬ ವದಂತಿಗಳು ಇತ್ತೀಚೆಗೆ ಹರಿದಾಡುತ್ತಿದ್ದವು. ಕಬೀರ್ ಬೇರೊಬ್ಬ ಯುವತಿಯೊಂದಿಗೆ ಪಾರ್ಟಿ ಮಾಡುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಈ ಸುದ್ದಿಗಳು ಹಬ್ಬಿದ್ದವು. ಆದರೆ ಆ ಯುವತಿ ಕಬೀರ್ ಅವರ ಕುಟುಂಬದ ಸ್ನೇಹಿತೆಯಾಗಿದ್ದು, ಇಬ್ಬರ ನಡುವೆ ಅಂತಹ ಯಾವುದೇ ಸಂಬಂಧವಿಲ್ಲ ಎಂದು ಕಬೀರ್ ಆಪ್ತ ಮೂಲಗಳು ಸ್ಪಷ್ಟಪಡಿಸಿವೆ.

ಇದಕ್ಕೆ ಪೂರಕವೆಂಬಂತೆ ಕೃತಿ ಸನೋನ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಇತ್ತೀಚಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಕಬೀರ್ ಬಹಿಯಾ ಅವರೊಂದಿಗೆ ಇರುವ ಫೋಟೋವೊಂದನ್ನು ಪೋಸ್ಟ್ ಮಾಡುವ ಮೂಲಕ ತಮ್ಮಿಬ್ಬರ ನಡುವಿನ ಬ್ರೇಕಪ್ ವದಂತಿಗಳಿಗೆ ಕೃತಿ ಪರೋಕ್ಷವಾಗಿ ಫುಲ್ ಸ್ಟಾಪ್ ಇಟ್ಟಿದ್ದಾರೆ. ಕಳೆದ ಎರಡು ವರ್ಷಗಳಿಂದ ಈ ಜೋಡಿ ಹಲವು ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸುತ್ತಲೇ ಬಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ