LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 ಈ ತಿಂಗಳು ವಿದ್ಯುತ್ ಮೀಟರ್ ರೀಡಿಂಗ್ ಗೆ ಸಿಬ್ಬಂದಿ ಬರಲ್ಲ: ಗ್ರಾಹಕರ ಮೊಬೈಲ್ ಗೆ ಸರಾಸರಿ ಬಿಲ್ ರವಾನೆ

ಬೆಂಗಳೂರು: ವಿದ್ಯುತ್ ಮೀಟರ್ ರೀಡರ್ ಗಳನ್ನು ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಕಾರ್ಯಕ್ಕೆ ನಿಯೋಜಿಸಲಾಗಿದೆ. ಹೀಗಾಗಿ ಜುಲೈ ತಿಂಗಳ ಮೀಟರ್ ರೀಡಿಂಗ್ ಇರುವುದಿಲ್ಲ. ಗ್ರಾಹಕರಿಗೆ ಸರಾಸರಿ ಬಿಲ್ ಅನ್ನು ಎಸ್ಎಂಎಸ್ ಮೂಲಕ ಕಳುಹಿಸುವುದಾಗಿ ಬೆಸ್ಕಾಂ ತಿಳಿಸಿದೆ.

ಜುಲೈ ತಿಂಗಳ ಅವಧಿಯಲ್ಲಿ ಗ್ರಾಹಕರಿಗೆ ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಸರಾಸರಿ ಬಿಲ್ ನೀಡಲಾಗುವುದು. ಜುಲೈ ತಿಂಗಳ ಸರಾಸರಿ ಬಿಲ್ ಗಳನ್ನು ಗ್ರಾಹಕರಿಗೆ ಎಸ್ಎಂಎಸ್ ಮತ್ತು ಇಮೇಲ್ ಮೂಲಕ ಕಳುಹಿಸಲಾಗುವುದು.

ಹೆಚ್.ಟಿ. ಗ್ರಾಹಕರು, 40 ಹೆಚ್.ಪಿ. ಮತ್ತು ಅದಕ್ಕಿಂತ ಹೆಚ್ಚಿನ ಮಂಜೂರಾದ ಲೋಡ್ ಹೊಂದಿರುವ ಎಲ್‌ಟಿ ಗ್ರಾಹಕರು ಸೋಲಾರ್ ರೂಫ್ಟಾಫ್ ಗ್ರಾಹಕರು, ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಗ್ರಾಹಕರಿಗೆ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ಗೃಹ ಬಳಕೆದಾರರಿಗೆ ಆಗಸ್ಟ್ ತಿಂಗಳಿನಿಂದ ಎಂದಿನಂತೆ ನಿಯಮಿತ ಮೀಟರ್ ರೀಡಿಂಗ್ ಮತ್ತು ನೈಜ ವಿದ್ಯುತ್ ಬಳಕೆ ಆಧಾರದ ಮೇಲೆ ಬಿಲ್ ನೀಡಲಾಗುವುದು. ಸರಾಸರಿ ಬಿಲ್ಲಿಂಗ್ ಅವಧಿಯಲ್ಲಿನ ವ್ಯತ್ಯಾಸದ ಯೂನಿಟ್ ಗಳನ್ನು ಬೈಜ ಮೀಟರ್ ರೀಡಿಂಗ್ ಆರಂಭವಾದ ನಂತರ ಮುಂದಿನ ಬಿಲ್ ಗಳಲ್ಲಿ ಸೂಕ್ತವಾಗಿ ಹೊಂದಾಣಿಕೆ ಮಾಡಲಾಗುವುದು. ಗ್ರಾಹಕರು ಜುಲೈನ ಬಿಲ್ ಪಾವತಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಉಪ ವಿಭಾಗದ ನಗದು ಕೌಂಟರ್ ಗಳು, ಬೆಸ್ಕಾಂ ವೆಬ್ಸೈಟ್, ಬೆಸ್ಕಾಂ ಮಿತ್ರ ಆಪ್, ಥರ್ಡ್ ಪಾರ್ಟಿ ವಿಧಾನಗಳನ್ನು ಬಿಲ್ ಪಾವತಿಗೆ ಬಳಸಿಕೊಳ್ಳಬಹುದು ಎಂದು ಹೇಳಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ