LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆರೆಗಳ ತುಂಬಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ನಿರ್ಧಾರ

ಕೊಪ್ಪಳ: ಕೊಪ್ಪಳ, ಮತ್ತು ರಾಯಚೂರು ಜಿಲ್ಲೆಯ ಕೆರೆಗಳನ್ನು ತುಂಬಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ತುಂಗಭದ್ರಾ ಜಲಾಶಯದಲ್ಲಿ 2026-27ನೇ ಜಲವರ್ಷದಲ್ಲಿ ನೀರಿನ ಲಭ್ಯತೆ ಆಧರಿಸಿ ಪ್ರಾದೇಶಿಕ ಆಯುಕ್ತರು ಕಲಬುರಗಿ ಇವರ ಆದೇಶದ ಮೇರೆಗೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ತುಂಗಭದ್ರಾ ಜಲಾಶಯದಿಂದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಪ್ರಾದೇಶಿಕ ಆಯುಕ್ತರು, ಕಲಬುರಗಿ ವಲಯ ಕಲಬುರಗಿ ರವರು ನಿಗದಿಪಡಿಸಿದ ವೇಳಾಪಟ್ಟಿಯಂತೆ ನೀರನ್ನು ಹರಿಸಲು ನಿರ್ಧರಿಸಲಾಗಿದೆ.

ಅದರಂತೆ ಸಂಬಂಧಿಸಿದ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ತಮ್ಮ ವ್ಯಾಪ್ತಿಯಲ್ಲಿನ ತೂಬುಗಳ ಗೇಟ್‌ ಗಳ ಮುಖಾಂತರ ಕೆರೆಕಟ್ಟೆಗಳಲ್ಲಿ ಕುಡಿಯುವ ಸಲುವಾಗಿ ನೀರು ಶೇಖರಣೆ ಮಾಡಲು ಹಾಗೂ ನಿಗದಿತ ಪ್ರಮಾಣದ ನೀರನ್ನು 104 ಮೈಲ್ ವರೆಗೆ ಹರಿಸಿ ಮತ್ತು ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಹಾಗೂ ಪೊಲೀಸ್ ಸಿಬ್ಬಂದಿ ಸಹಯೋಗದೊಂದಿಗೆ ಸಮರ್ಪಕ ನೀರು ನಿರ್ವಹಣೆ ಮಾಡಬೇಕು.

ನಿಗದಿತ ವೇಳಾಪಟ್ಟಿ:

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ (0 ರಿಂದ 104 ಮೈಲ್ ವರೆಗೆ) ಗೆ ಕುಡಿಯುವ ನೀರಿಗಾಗಿ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ಜುಲೈ 10ರ ಬೆಳಗ್ಗೆ 8 ಗಂಟೆ ರಿಂದ ಜುಲೈ 23 ರ ಗುರುವಾರ ರಾತ್ರಿ 8 ಗಂಟೆವರೆಗೆ 2,000 ಕ್ಯೂಸೆಕ್ಸ್ ನಂತೆ ಕುಡಿಯುವ ನೀರು ಹರಿಸಲಾಗುವುದು.

ಅದರಂತೆ, ಯರಮರಸ್ ವಿಭಾಗದಲ್ಲಿ ಜುಲೈ 13 ರಿಂದ ಜುಲೈ 16 ರವರೆಗೆ, ಸಿರವಾರ ವಿಭಾಗದಲ್ಲಿ ಜುಲೈ 17 ರಿಂದ 19 ರವರೆಗೆ, ಸಿಂಧನೂರು ವಿಭಾಗದಲ್ಲಿ ಜುಲೈ 20 ರಿಂದ 22 ರವರೆಗೆ ಮತ್ತು ವಡ್ಡರಹಟ್ಟಿ ವಿಭಾಗದಲ್ಲಿ ಜುಲೈ 22 ಮತ್ತು 23 ರಂದು  ನೀರು ಹರಿಸಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.

ರೈತ ಭಾಂದವರಲ್ಲಿ ಮನವಿ:

ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲಾಗುತ್ತಿದ್ದು, ಸಾರ್ವಜನಿಕ ಹಿತ ದೃಷ್ಟಿಯಿಂದ ಎಲ್ಲಾ ಜನಸಾಮಾನ್ಯರಿಗೂ ಹಾಗೂ ರೈತ ಭಾಂದವರಿಗೆ ಈ ಪ್ರಕಟಣೆಯ ಮೂಲಕ ವಿನಂತಿಸುವುದೇನೆಂದರೆ, ಕಾಲುವೆಯಲ್ಲಿ ಮತ್ತು ಕಾಲುವೆಯ ಅಂಚಿನಲ್ಲಿ ಓಡಾಡುವುದು, ಕಾಲುವೆಯಿಂದ ನೀರನ್ನು ಜನಸಾಮಾನ್ಯರು ಅಥವಾ ರೈತರು ಬಳಸುವುದನ್ನು ಮತ್ತು ಎತ್ತಿಕೊಳ್ಳುವುದನ್ನು ನಿಷೇಧಗೊಳಿಸಲಾಗಿರುತ್ತದೆ. ಕಾರಣ ತಾವುಗಳು ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸುವಂತೆ ಕನೀನಿನಿ, ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಎಸ್.ಬಿ ಮಲ್ಲಿಗವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ