LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಮುಂಗಾರು ಕೊರತೆ ನಿರ್ವಹಣೆಗೆ ಕೃಷಿ ಇಲಾಖೆಯಿಂದ ಮಹತ್ವದ ಸಲಹೆ

ಬೆಂಗಳೂರು: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರೈತರು ಮಳೆಯ ಲಭ್ಯತೆಗೆ ಅನುಗುಣವಾಗಿ ಬೆಳೆ ಹಾಗೂ ತಳಿಗಳನ್ನು ಆಯ್ಕೆ ಮಾಡಿಕೊಂಡು ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅನುಸರಿಸುವಂತೆ ಕೃಷಿ ಇಲಾಖೆ ಸಲಹೆ ನೀಡಿದೆ.

ಎಲ್ ನಿನೋ ಪರಿಣಾಮದಿಂದ ಈ ವರ್ಷ ಮಳೆಯ ಪ್ರಮಾಣದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸರಿಯಾದ ಸಮಯದಲ್ಲಿ ಬಿತ್ತನೆ, ತೇವಾಂಶ ಸಂರಕ್ಷಣೆ ಹಾಗೂ ಮಧ್ಯಂತರ ಬರ ನಿರ್ವಹಣಾ ಕ್ರಮಗಳನ್ನು ಅನುಸರಿಸಿದರಿಂದ ಬೆಳೆ ಹಾನಿಯನ್ನು ತಡೆದು ಉತ್ತಮ ಇಳುವರಿ ಪಡೆಯಬಹುದು ಎಂದು ಇಲಾಖೆ ತಿಳಿಸಿದೆ.

ಖುಷ್ಕಿ ಬೆಳೆಗಳಿಗೆ ಕನಿಷ್ಠ 50 ರಿಂದ 60 ಮಿ.ಮೀ. ಮಳೆಯಾದ ನಂತರ ಬಿತ್ತನೆ ಮಾಡುವುದು ಸೂಕ್ತವಾಗಿದೆ. ಜುಲೈ ತಿಂಗಳಲ್ಲಿ ಉತ್ತಮ ಮಳೆಯಾದರೆ ರಾಗಿ ಎಂಆರ್-1, ಎಂಆರ್-6, ಜಿಪಿಯು-28, ಜಿಪಿಯು-66, ಜಿಪಿಯು-67, ಜಿಪಿಯು-26, ಜಿಪಿಯು-45, ಜಿಪಿಯು-48 ಹಾಗೂ ಎಂಎಲ್-365 ತಳಿಗಳನ್ನು ಬಿತ್ತಬಹುದು. ಬಿತ್ತನೆಯ ವೇಳೆ ಶೇ.15ರಿಂದ 20ರಷ್ಟು ಹೆಚ್ಚುವರಿ ಬೀಜ ಬಳಸುವುದು ಹಾಗೂ ಬೀಜಗಳನ್ನು 18 ಗಂಟೆ ನೀರಿನಲ್ಲಿ ನೆನೆಸಿ 24 ಗಂಟೆ ನೆರಳಿನಲ್ಲಿ ಒಣಗಿಸಿ ಬಿತ್ತಿದರೆ ಉತ್ತಮ ಮೊಳಕೆ ಬರುತ್ತದೆ. ತೊಗರಿಯಲ್ಲಿ ಬಿಆರ್ಜಿ-3 ಮತ್ತು ಬಿಆರ್ಜಿ-5 ತಳಿಗಳನ್ನು ಬೆಳೆಯಬಹುದು.

ಆಗಸ್ಟ್ ನಲ್ಲಿ ಮಳೆಯಾದಲ್ಲಿ ರಾಗಿ ಜಿಪಿಯು-28, ಎಂಎಲ್-365, ಎಂಎಲ್-322, ಕೆಎಂಆರ್-316 ಹಾಗೂ ಜಿಪಿಯು-66 ತಳಿಗಳನ್ನು ಆಗಸ್ಟ್ 15ರೊಳಗೆ, ಜಿಪಿಯು-26, ಜಿಪಿಯು-45 ಮತ್ತು ಜಿಪಿಯು-48 ತಳಿಗಳನ್ನು ಆಗಸ್ಟ್ ಅಂತ್ಯದವರೆಗೆ ಬಿತ್ತಬಹುದು. ಇದೇ ಅವಧಿಯಲ್ಲಿ ಅಲಸಂದೆ, ಹುರುಳಿ, ಹೆಬ್ಬಾಳ ಅವರೆ ಹಾಗೂ ಮೇವಿನ ಜೋಳ ಬೆಳೆಯಲು ಅವಕಾಶವಿದೆ. ಸೆಪ್ಟೆಂಬರ್ ನಲ್ಲಿ ಮಳೆಯಾದರೆ ರಾಗಿ ಸಸಿ ಮಡಿಗಳಿಂದ ನಾಟಿ ಕಾರ್ಯ ಪೂರ್ಣಗೊಳಿಸಿ ಕೆಎಂಆರ್-301 ಹಾಗೂ ಇಂಡಾಫ್-15 ಸೇರಿದಂತೆ ಸೂಕ್ತ ತಳಿಗಳನ್ನು ನಾಟಿ ಮಾಡಬಹುದಾಗಿದೆ.

ಹೊಲದಲ್ಲಿ ತೇವಾಂಶ ಉಳಿಸಿಕೊಳ್ಳಲು ಕಳೆ ನಿಯಂತ್ರಣ, ಅಂತರ ಬೇಸಾಯ ಹಾಗೂ ಕೃಷಿ ತ್ಯಾಜ್ಯಗಳನ್ನು ಹೊದಿಕೆಯಾಗಿ ಬಳಸಬೇಕು. ಮಧ್ಯಂತರ ಬರ ಪರಿಸ್ಥಿತಿ ಎದುರಾದಲ್ಲಿ ಬೆಳೆ ಚೇತರಿಕೆಗೆ ಶೇ.1ರಿಂದ 3 ಯೂರಿಯಾ, ಶೇ.0.5 ಜಿಂಕ್ ಸಲ್ಫೇಟ್, ಶೇ.2 ಡಿಎಪಿ ಅಥವಾ 13:0:45 ಮತ್ತು 19:19:19 ದ್ರಾವಣಗಳನ್ನು ಸಿಂಪಡಿಸಬಹುದು. ನೀರಿನ ಲಭ್ಯತೆ ಇರುವ ಪ್ರದೇಶಗಳಲ್ಲಿ ಹನಿ ಅಥವಾ ತುಂತುರು ನೀರಾವರಿ ಅಳವಡಿಸಿಕೊಳ್ಳುವುದು ಉತ್ತಮ ಎಂದು ಸೂಚಿಸಿದ್ದಾರೆ.

ಹವಾಮಾನ ಮುನ್ಸೂಚನೆಗಳನ್ನು ಗಮನಿಸಿ, ಮಳೆಯ ಲಭ್ಯತೆಗೆ ಅನುಗುಣವಾಗಿ ಬೆಳೆ ತಳಿಗಳ ಆಯ್ಕೆ, ತೇವಾಂಶ ಸಂರಕ್ಷಣೆ ಹಾಗೂ ಬರ ನಿರ್ವಹಣಾ ಕ್ರಮಗಳನ್ನು ಅನುಸರಿಸುವ ಮೂಲಕ ರೈತರು ಮಳೆಯ ಕೊರತೆಯಿಂದಾಗುವ ಬೆಳೆ ನಷ್ಟವನ್ನು ತಡೆದು ಉತ್ತಮ ಇಳುವರಿ ಪಡೆಯಬಹುದಾಗಿದೆ ಎಂದು  ಜಂಟಿ ಕೃಷಿ ನಿರ್ದೇಶಕರು  ಪ್ರಕಟಯಲ್ಲಿ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ