ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿ ಪ್ರವಾಸ ದಿಢೀರ್ ನಿಗದಿಯಾದ ಕಾರಣ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಸೂಚನಾ ಪತ್ರ ಹೊರಡಿಸಲಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿ ಪ್ರವಾಸ ಕೈಗೊಂಡಿರುವುದರಿಂದ ಜುಲೈ 16ರ ಗುರುವಾರ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಮುಂದೂಡಲಾಗಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ತುರ್ತು ಪರಿಹಾರ ಕಾರ್ಯ ಕೈಗೊಳ್ಳುವುದು, ಬರ ಪೀಡಿತ ತಾಲೂಕುಗಳ ಘೋಷಣೆ, ಬಿಡದಿ ಟೌನ್ ಶಿಪ್ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಗುರುವಾರ ಸಂಪುಟ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇತ್ತು.
ಆದರೆ, ಮುಖ್ಯಮಂತ್ರಿಗಳ ದೆಹಲಿ ಪ್ರವಾಸ ದಿಢೀರ್ ನಿಗದಿಯಾಗಿದ್ದರಿಂದ ಗುರುವಾರ ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲು ಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ದೆಹಲಿಗೆ ತೆರಳಿದ್ದಾರೆ. ಸಚಿವ ಸ್ಥಾನಾಕಾಂಕ್ಷಿಗಳು ಕೂಡ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.