ಧಾರವಾಡ: ಧಾರವಾಡದ ಪ್ರತಿಷ್ಠಿತ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ಏಳನೇ ಘಟಿಕೋತ್ಸವ ಜುಲೈ 18ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.
ಐಐಟಿ ನಿರ್ದೇಶಕ ಪ್ರೊ. ವೆಂಕಪ್ಪಯ್ಯ ದೇಸಾಯಿ ಈ ಬಗ್ಗೆ ಮಾಹಿತಿ ನೀಡಿದ್ದು, ತನ್ನ ಹತ್ತು ವರ್ಷಗಳ ಶೈಕ್ಷಣಿಕ ಪಯಣದ ಅಂಗವಾಗಿ ಸಂಸ್ಥೆಯು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೆಟ್ ಪ್ರದಾನ ಮಾಡಲಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಮುಖ್ಯಸ್ಥ ಪ್ರೊ. ಭೀಮ್ ಸಿಂಗ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಗೌರವ ಅತಿಥಿಗಳಾಗಿ ಬೆಂಗಳೂರು ಟಾಟಾ ಪವರ್ ರಿನಿವೆಬಲ್ ಮೈಕ್ರೋಗ್ರಿಡ್ ನ ಸಿಇಒ ಮನೋಜ್ ಗುಪ್ತ ಮತ್ತು ಪ್ಯಾನ್ ಐಐಟಿ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರಭಾತ ಕುಮಾರ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.