LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅರ್ಹತಾ ಪತ್ರ ನವೀಕರಿಸದ ಆಟೋರಿಕ್ಷಾಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ

ಶಿವಮೊಗ್ಗ : ನಗರದಲ್ಲಿ ಅರ್ಹತಾ ಪತ್ರ (ಎಫ್ ಸಿ) ನವೀಕರಿಸದೆ ನಿಯಮಬಾಹಿರವಾಗಿ ಸಂಚರಿಸುತ್ತಿರುವ ಆಟೋರಿಕ್ಷಾಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ದಿನಾಂಕ 15-07-2026 ರಂದು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲು ನಿರ್ದೇಶನ ನೀಡಲಾಗಿದೆ.ಈ ಹಿನ್ನೆಲೆಯಲ್ಲಿ, ಅರ್ಹತಾ ಪತ್ರದ ಅವಧಿ ಮುಕ್ತಾಯಗೊಂಡಿರುವ ಆಟೋರಿಕ್ಷಾಗಳ ಚಾಲಕರು ಅಥವಾ ಮಾಲೀಕರು ತಕ್ಷಣವೇ ಸಂಬಂಧಪಟ್ಟ ಸಾರಿಗೆ ಕಛೇರಿಯಲ್ಲಿ ನಿಗದಿತ ಶುಲ್ಕವನ್ನು ಪಾವತಿಸಬೇಕಾಗಿ ವಿನಂತಿಸಲಾಗಿದೆ. ತದನಂತರ, ತಮ್ಮ ವಾಹನಗಳನ್ನು ಮಲವಗೊಪ್ಪದ ಡ್ರೈವಿಂಗ್ ಟ್ರ್ಯಾಕ್‌ನಲ್ಲಿ ಹಾಜರುಪಡಿಸಿ, ಅರ್ಹತಾ ಪತ್ರವನ್ನು ನವೀಕರಿಸಿಕೊಳ್ಳಲು ಸೂಚಿಸಲಾಗಿದೆ. ತಪ್ಪಿದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ವಲಯ ಮೀನುಗಾರಿಕೆ ಯೋಜನೆಗಳಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2026-27ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿಯ ವಿವಿಧ ಮೀನುಗಾರಿಕೆ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಶಿವಮೊಗ್ಗ ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಮೀನುಗಾರಿಕೆ ಸಲಕರಣೆ ಕಿಟ್/ಫೈಬರ್ ಗ್ಲಾಸ್ ಹರಿಗೋಲು ಖರೀದಿ ಯೋಜನೆಯಡಿ ರೂ. 10,000/- ಮೌಲ್ಯದ ಮೀನುಗಾರಿಕೆ ಸಲಕರಣೆ ಕಿಟ್ ಅಥವಾ ಫೈಬರ್ ಗ್ಲಾಸ್ ಹರಿಗೋಲು ಖರೀದಿಗೆ ನೆರವು ನೀಡಲಾಗುವುದು. ಕಳೆದ 3 ವರ್ಷಗಳಲ್ಲಿ ಈ ಕಿಟ್ ಯೋಜನೆಯಡಿ ಸೌಲಭ್ಯ ಪಡೆದಿರಬಾರದು ಹಾಗೂ ಒಬ್ಬರಿಗೆ ಒಮ್ಮೆ ಮಾತ್ರ ಫೈಬರ್ ಗ್ಲಾಸ್ ಹರಿಗೋಲು ವಿತರಿಸಲಾಗುವುದು.‌

ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯಧನ ಯೋಜನೆಯಡಿ ಮೀನು ಮಾರಾಟ ಮತ್ತು ಸಾಗಣೆಗೆ ನೆರವಾಗುವಂತೆ ದ್ವಿಚಕ್ರ ವಾಹನ ಹಾಗೂ ಐಸ್ ಬಾಕ್ಸ್ ಖರೀದಿಸಲು ಸಹಾಯಧನ ನೀಡಲಾಗುವುದು. ಈ ಹಿಂದೆ ಈ ಯೋಜನೆಯಡಿ ಸೌಲಭ್ಯ ಪಡೆದವರು ಅರ್ಹರಾಗಿರುವುದಿಲ್ಲ.

ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಪಂಚಾಯತ್ ಯೋಜನೆಗಳ ಅಧಿಕೃತ ಪೋರ್ಟಲ್ https://shimoga.nic.in ಮುಖಾಂತರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 16-07-2026,​ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-08-2026 ಆಗಿರು​ತ್ತೆ.

ಹೆಚ್ಚಿನ ವಿವರಗಳಿಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ- 9686939028, ಸಾಗರ -9538044365, ಸೊರಬ -9535386449, ತೀರ್ಥಹಳ್ಳಿ- 8655132438 ಇವರುಗಳನ್ನು ಸಂಪರ್ಕಿಸಲು ಕೋರಲಾಗಿದೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ