LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಸತಿ ಶಾಲೆಗಳ ಮಹಿಳಾ ಕೇರ್‌ಟೇಕರ್ ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿ ಶಾಲೆಗಳಲ್ಲಿ ಖಾಲಿ ಇರುವ ಮಹಿಳಾ ಕೇರ್‌ಟೇಕರ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

2026-27ನೇ ಸಾಲಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿಶಾಲೆ-ಹಕ್ಕಿಪಿಕ್ಕಿ ಕ್ಯಾಂಪ್, ಸದಾಶಿವಪುರ ಶಿವಮೊಗ್ಗ ತಾಲೂಕು ಹಾಗೂ ಹಿರೇಮನೆ, ಸಾಗರ ತಾಲೂಕು ಇಲ್ಲಿನ ವಸತಿ ಶಾಲೆಗಳಲ್ಲಿ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಒಂದು ವರ್ಷದ ಅವಧಿಗೆ ಖಾಲಿಯಿರುವ ಮಹಿಳಾ ಕೇರ್‌ಟೇಕರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ನಿಗಧಿಪಡಿಸಿದ ಬಿ.ಎಸ್‌ಸಿ. ನರ್ಸಿಂಗ್ ಮತ್ತು ಜಿಎನ್‌ಎಂ ನರ್ಸಿಂಗ್ ವಿದ್ಯಾರ್ಹತೆಯನ್ನು ಹೊಂದಿದ್ದು, ಕನಿಷ್ಠ 2 ವರ್ಷಗಳ ವೃತ್ತಿ ಅನುಭವ ಹೊಂದಿರಬೇಕು.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜು.28 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-200266 ಹಾಗೂ ಶಿವಮೊಗ್ಗ ಮತ್ತು ಸಾಗರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೀರ್ಥಹಳ್ಳಿ ; ಮೆಸ್ಕಾಂ ಜನ ಸಂಪರ್ಕ ಸಭೆ

ಶಿವಮೊಗ್ಗ : ತೀರ್ಥಹಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜು. 17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.:9448289508 ನ್ನು ಸಂಪರ್ಕಿಸುವುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ