LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೈಲಿಗೆ ಕರೆದೊಯ್ಯುವಾಗ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಅಕ್ರಮ ಬೇಟೆ ಪ್ರಕರಣ ಆರೋಪಿ ಪರಾರಿ

ಶಿವಮೊಗ್ಗ: ಅಕ್ರಮ ಬೇಟೆ ಪ್ರಕರಣದ ಆರೋಪಿಯನ್ನು ಗುರುವಾರ ಜೈಲಿಗೆ ಕರೆದೊಯ್ಯುವಾಗ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಆಡುಗೋಡಿ ಗ್ರಾಮದ ವೆಂಕಟೇಶ್(36) ಪರಾರಿಯಾದ ಆರೋಪಿ. ಕಳ್ಳ ಬೇಟೆ ಪ್ರಕರಣವೊಂದರ ವಿಚಾರಣೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಆರೋಪಿಯನ್ನು ಹೊಸನಗರ ಜೆಎಮ್ಎಫ್ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಉಪ ವಲಯ ಅರಣ್ಯಾಧಿಕಾರಿ ಸುನೀಲ್ ಡಿ. ಕುಂಬಾರ್, ಇಬ್ರಾಹಿಂ, ಅರಣ್ಯ ವೀಕ್ಷಕ ಅಯಾನ್ ಮತ್ತು ಕಳ್ಳ ಬೇಟೆ ತಡೆ ಶಿಬಿರದ ಸಿಬ್ಬಂದಿ ಚಕ್ರಪಾಣಿ ಅವರನ್ನೊಳಗೊಂಡ ಸಿಬ್ಬಂದಿ ಅರಣ್ಯ ಇಲಾಖೆ ವಾಹನದಲ್ಲಿ ಆರೋಪಿಯನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕರೆದುಕೊಂಡು ಹೋಗುತ್ತಿದ್ದರು.

ಮಧ್ಯಾಹ್ನ 2 ಗಂಟೆ ವೇಳೆಗೆ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಬಳಿ ವಾಹನ ಬಂದಾಗ ನನಗೆ ಹಸಿವಾಗುತ್ತಿದೆ ಊಟ ಕೊಡಿಸಿ ಎಂದು ಆರೋಪಿ ಕೇಳಿದ್ದಾನೆ. ಜೀಪ್ ನಿಲ್ಲಿಸಿ ಇಬ್ಬರು ಸಿಬ್ಬಂದಿ ಸಮೀಪದ ಹೋಟೆಲ್ ಗೆ ಊಟ ತರಲು ಹೋದಾಗ ಆರೋಪಿ ಜೀಪ್ ನಲ್ಲಿ ಆರೋಪಿಯ ಕಾವಲಿಗೆ ಇದ್ದ ಅರಣ್ಯ ವೀಕ್ಷಕ ಅಯಾನ್ ಮತ್ತು ಚಕ್ರಪಾಣಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿ ಬಟ್ಟೆಮಲ್ಲಪ್ಪ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ ಆತ ಪತ್ತೆಯಾಗಿಲ್ಲ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ