LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಲ್ಲಿ ಎರಡು ವರ್ಷದ ಮಗು ಅನುಮಾನಾಸ್ಪದ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಎರಡು ವರ್ಷದ ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ. ಬಾಣಸವಾಡಿಯ ಇಂದಿರಾ ಸ್ಟ್ರೀಟ್ ನಲ್ಲಿ ಘಟನೆ ನಡೆದಿದೆ. ಉಸಿರಾಟ ಸಮಸ್ಯೆಯಿಂದ ಮಗು ಮೃತಪಟ್ಟಿರುವುದಾಗಿ ಪೋಷಕರು ಹೇಳಿದ್ದಾರೆ. ಆದರೆ ಲಿವಿಂಗ್‌ ಟುಗೆದರ್ ನಲ್ಲಿದ್ದ ತಂದೆ, ತಾಯಿ ಮೇಲೆ ಅನುಮಾನ ವ್ಯಕ್ತವಾಗಿದೆ.

ಅನುಮಾನಾಸ್ಪದವಾಗಿ ಎರಡು ವರ್ಷದ ಕಾರ್ಲೆಟ್ ಡೈಸಿ ಸಾವನ್ನಪ್ಪಿದ್ದಾಳೆ. ಕೆಲವು ವರ್ಷಗಳಿಂದ ಜೇಸನ್ ಆಂಥೋನಿ –ರೋಸಲಿನ್ ಲಿವಿಂಗ್ ಟುಗೆದರ್ ನಲ್ಲಿದ್ದರು. ಅವರಿಗೆ ಹೆಣ್ಣುಮಗು ಜನಿಸಿದ್ದು, ಮಗುವಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ಸ್ಥಳೀಯ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಮಗು ಕಾರ್ಲೆಟ್ ಮೃತಪಟ್ಟಿದೆ ಎನ್ನಲಾಗಿದ್ದು, ಈ ಕುರಿತು ಮೊನ್ನೆ ರಾತ್ರಿ ಪೊಲೀಸರು ಮಾಹಿತಿ ಪಡೆದಿದ್ದಾರೆ.

ಆದರೆ, ದಂಪತಿಯ ಸ್ನೇಹಿತೆ ಮಗುವಿನ ಸಾವಿನ ಬಗ್ಗೆ ಅನುಮಾನದಿಂದ ದೂರು ನೀಡಿದ್ದಾರೆ. ಮಗುವಿಗೆ ತಾಯಿ ಹೊಡೆಯುತ್ತಿದ್ದರು, ಅದನ್ನು ನಾನು ನೋಡಿದ್ದೆ. ಮಗು ಸಾವಿನ ಬಗ್ಗೆ ಅನುಮಾನವಿದೆ ಎಂದು ದೂರು ನೀಡಿದ್ದು, ಮಗುವಿನ ದೇಹದ ಕೆಲವು ಕಡೆ ಗಾಯದ ಗುರುತುಗಳು ಪತ್ತೆಯಾಗಿವೆ. ಹೀಗಾಗಿ ಮಗುವಿನ ಸಾವಿನ ಬಗ್ಗೆ ಸ್ನೇಹಿತೆ ಅನುಮಾನ ವ್ಯಕ್ತಪಡಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ. ಸದ್ಯ ಮರಣೋತ್ತರ ಪರೀಕ್ಷೆ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ