LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಟ ದರ್ಶನ್ ಗೆ ಹಿನ್ನಡೆ: ‘ಬಾಸ್’ ಸಿನಿಮಾ ಬಿಡುಗಡೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ: ಇಂದೇ ಚಿತ್ರ ಬಿಡುಗಡೆ

ಬೆಂಗಳೂರು: ‘ಬಾಸ್’ ಸಿನಿಮಾ ಬಿಡುಗಡೆಗೆ ತಡೆ ಕೋರಿ ನಟ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಚಿತ್ರತಂದಕ್ಕೆ ಗೆಲುವಾಗಿದ್ದು, ದರ್ಶನ್ ಗೆ ಹಿನ್ನಡೆಯಾಗಿದೆ.

ಬಾಸ್ ಸಿನಿಮಾದ ಬಿಡುಗಡೆಗೆ ಇದ್ದ ಅಡೆ-ತಡೆಗಳು ನಿವಾರಣೆಯಾಗಿದ್ದು, ಇಂದೇ ರಾಜ್ಯದಾದ್ಯಂತ ಸಿನಿಮಾ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಈ ಕುರಿತು ತುರ್ತು ಪತ್ರಿಕಾ ಹೇಳಿಕೆ ಹೊರಡಿಸಿರುವ ಚಿತ್ರತಂಡ ಸುಮಾರು ಒಂದೂವರೆ ತಿಂಗಳಿನಿಂದಲೂ ಸಿನಿಮಾ ಬಿಡುಗಡೆಗೆ ಸಂಬಂಧಿಸಿದಂತೆ ನಡೆದಿದ್ದ ಹೊರಾಟದಲ್ಲಿ ಕೊನೆಗೆ ಚಿತ್ರತಂಡಕ್ಕೆ ಗೆಲುವಾಗಿದೆ ಎಂದಿದೆ.

‘ಬಾಸ್’ ಸಿನಿಮಾದ ನಾಯಕ ನಟ ಹಾಗೂ ನಿರ್ಮಾಪಕರಾದ ತನುಷ್ ಶಿವಣ್ಣ ಮತ್ತು ನಿರ್ದೇಶಕರಾದ ಲವಾ ವಿ ಸಂತೋಷ ಹರ್ಷ ವ್ಯಕ್ತಪಡಿಸಿದ್ದು, ನಮ್ಮ ಸಿನಿಮಾ ಇಂದೇ ಬಿಡುಗಡೆ ಆಗಲಿದೆ. ಇಂದು ಸಂಜೆಯಿಂದಲೇ ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಮಾಡಲಾಗುವುದು ಎಂದು ತಿಳಿಸಿದ್ದಾರೆ. ನಿರ್ಮಾಪಕ ತನುಷ್ ಶಿವಣ್ಣ ಮಾತನಾಡಿ, “ನಮ್ಮ ಚಿತ್ರದ ಮೇಲೆ ನಂಬಿಕೆ ಇಟ್ಟು ಬೆಂಬಲಿಸಿದ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಧನ್ಯವಾದಗಳು. ನ್ಯಾಯದ ಗೆಲುವಿನೊಂದಿಗೆ ‘ಬಾಸ್’ ಇಂದು ಪ್ರೇಕ್ಷಕರ ಮುಂದೆ ಬರುತ್ತಿದೆ. ಪ್ರೇಕ್ಷಕರು ಚಿತ್ರವನ್ನು ಪ್ರೀತಿಯಿಂದ ಸ್ವೀಕರಿಸುತ್ತಾರೆ ಎಂಬ ವಿಶ್ವಾಸವಿದೆ,” ಎಂದಿದ್ದಾರೆ.

‘ಬಾಸ್’ ಸಿನಿಮಾ, ನಟ ದರ್ಶನ್ ಮತ್ತು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಕುರಿತಾದ ಕಥಾಹಂದರ ಹೊಂದಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕು ಎಂದು ನಟ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಚಿತ್ರತಂಡವು ಇದನ್ನು ತಳ್ಳಿ ಹಾಕಿದ್ದು, ‘ಬಾಸ್’ ಸಿನಿಮಾ ದರ್ಶನ್ ಹಾಗೂ ಅವರ ಜೀವನ ಕುರಿತಾದ ಸಿನಿಮಾ ಅಲ್ಲ. ಇದೊಂದು ಕಾಲ್ಪನಿಕ ಕತೆ ಎಂದೇ ವಾದಿಸುತ್ತಾ ಬಂದಿತ್ತು. ನ್ಯಾಯಾಲಯದಲ್ಲಿಯೂ ಸಹ ಚಿತ್ರತಂಡ ಇದೇ ವಾದವನ್ನು ಮಾಡಿತ್ತು. ಕೊನೆಗೂ ಈಗ ‘ಬಾಸ್’ ಸಿನಿಮಾಕ್ಕೆ ಜಯವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ