LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ತೀವ್ರ ಬರದ ಛಾಯೆ : ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಮನವಿ – ಕುಡಿಯುವ ನೀರಿಗೆ ಮಾತ್ರ ಆದ್ಯತೆ

ಶಿವಮೊಗ್ಗ : ರಾಜ್ಯಾದ್ಯಂತ ತೀವ್ರಗೊಳ್ಳುತ್ತಿರುವ ಎಲ್ ನಿನೊ ಪರಿಣಾಮ ಹಾಗೂ ಜಲಾಶಯಗಳ ಒಳಹರಿವು ಬಹುತೇಕ ಶೂನ್ಯಕ್ಕೆ ಇಳಿದಿರುವ ಹಿನ್ನೆಲೆಯಲ್ಲಿ, ಪ್ರಸಕ್ತ ಸಾಲಿನಲ್ಲಿ ಜಲಾಶಯಗಳನ್ನು ನಂಬಿಕೊಂಡು ಯಾವುದೇ ಮುಂಗಾರು ಹಂಗಾಮಿನ ಬೆಳೆಗಳನ್ನು ಬೆಳೆಯದಂತೆ ಕ.ನೀ. ನಿ.ನಿ ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಅವರು ರೈತರಲ್ಲಿ ಮನವಿ ಮಾಡಿದ್ದಾರೆ.

ಕಳೆದ ಜುಲೈ 2 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಬರದ ಪರಿಸ್ಥಿತಿ ಕುರಿತು ಸುಧೀರ್ಘ ಚರ್ಚೆ ನಡೆಸಲಾಗಿದ್ದು, “ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ” ಎಂದು ಸನ್ಮಾನ್ಯ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದರು.

ಮುಖ್ಯಮಂತ್ರಿಗಳ ನಿರ್ದೇಶನದಂತೆ ಪ್ರಸ್ತುತ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕಡ್ಡಾಯವಾಗಿ ಕೇವಲ ಕುಡಿಯುವ ನೀರಿಗಾಗಿ ಮಾತ್ರ ಕಾಯ್ದಿರಿಸಬೇಕಾದ ತುರ್ತು ಪರಿಸ್ಥಿತಿ ಎದುರಾಗಿದೆ. ಸರ್ಕಾರದ ಸುತ್ತೋಲೆಯ ಅನ್ವಯ, ರೈತರಿಗೆ ಈ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಡಲು ಹಾಗೂ ಆಯಾ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಲು ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ.

ಕುಡಿಯುವ ನೀರಿಗೆ ಮಾತ್ರ ಜಲ ಬಿಡುಗಡೆ

“ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆ ಹಾಗೂ ತುಂಗಾ ಅಣೆಕಟ್ಟು ಕಾಲುವೆಗಳಲ್ಲಿ ಕೇವಲ ಜನ-ಜಾನುವಾರುಗಳ ಕುಡಿಯುವ ನೀರಿನ ಉದ್ದೇಶಕ್ಕೆ ಸೀಮಿತವಾಗಿ ಮಾತ್ರ ನೀರನ್ನು ಹರಿಸಲು ಈಗಾಗಲೇ ದಿನಾಂಕ: 03.07.2026 ರಂದು ಅಧಿಕೃತ ಪ್ರಕಟಣೆ ಹೊರಡಿಸಿ ಕ್ರಮ ಕೈಗೊಳ್ಳಲಾಗಿದೆ.”

ಆದ್ದರಿಂದ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತ ಬಾಂಧವರು ಯಾವುದೇ ನೀರಾವರಿ ಬೆಳೆಗಳನ್ನು ಬೆಳೆಯಲು ಮುಂದಾಗಬಾರದೆಂದು ವಿನಂತಿಸಲಾಗಿದ್ದು ಜಲಕ್ಷಾಮದ ಈ ಸಂದರ್ಭದಲ್ಲಿ ರೈತರು ಪರಿಸ್ಥಿತಿಯನ್ನು ಅರ್ಥೈಸಿಕೊಂಡು, ಇಲಾಖೆಯೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕಾಗಿ ಕ ನೀ ನಿ ನಿ, ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ರೇಷ್ಮೆ ಇಲಾಖೆ ವಿವಿಧ ಯೋಜನೆಗಳು: ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ರೇಷ್ಮೆ ಇಲಾಖೆ ವತಿಯಿಂದ 2026-27ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಗಳಡಿ ರೇಷ್ಮೆ ಬೆಳೆಗಾರರಿಗೆ ಹಾಗೂ ರೇಷ್ಮೆ ಕೃಷಿಯಲ್ಲಿ ಆಸಕ್ತಿಯುಳ್ಳ ರೈತರಿಗೆವಿವಿಧ ಸಹಾಯಧನ ಪಡೆಯಲು ಅರ್ಹ ರೈತರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಹೊಸದಾಗಿ ಹಿಪ್ಪುನೇರಳೆ ನಾಟಿ ಮಾಡಲು ಬಯಸುವ ರೈತರಿಗೆ ಆರ್ಥಿಕ ನೆರವು ಮತ್ತು ಸ್ವಂತ ನರ್ಸರಿ ಸ್ಥಾಪಿಸಲು ಇಚ್ಛಿಸುವ ಆಸಕ್ತರಿಗೆ ಸಹಾಯಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಆಗಸ್ಟ್ 14‌ ಕೊನೆಯ ದಿನವಾಗಿದ್ದು ಆಸಕ್ತ ರೈತರು ನಿಗದಿತ ಕೊನೆಯ ದಿನಾಂಕದೊಳಗಾಗಿ ಅಧಿಕೃತ ವೆಬ್‌ಸೈಟ್ www.shivamogga.nic.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ. ಯೋಜನೆಯ ನಿಯಮಗಳು, ಅರ್ಹತೆ ಹಾಗೂ ಅಗತ್ಯ ದಾಖಲಾತಿಗಳ ಕುರಿತು ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ರೇಷ್ಮೆ ಉಪನಿರ್ದೇಶಕರ ಕಚೇರಿ, 100 ಅಡಿರಸ್ತೆ, ರಾಜೇಂದ್ರ ನಗರ, ಶಿವಮೊಗ್ಗ ದೂ.ಸಂ.:08182-184637 ನ್ನು ಸಂಪರ್ಕಿಸಬ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ