ಬೆಂಗಳೂರು: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ, ವಾರಾಂತ್ಯದಲ್ಲಿ ರಾಜ್ಯದ ವಿವಿಧೆಡೆ ಭಾರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿಯ ಉಡುಪಿ. ಉತ್ತರ ಕನ್ನಡ. ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಜುಲೈ 17. 18 ರಂದು ಮಳೆಯಾಗಲಿದೆ. ಶುಕ್ರವಾರ ಸಂಜೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಂಭವ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜುಲೈ 18, 19ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಜುಲೈ 18ರಂದು ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.