ಧಾರವಾಡ: ಸಾರಿಗೆ ಸಂಸ್ಥೆಯ ಬಸ್ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಧಾರವಾಡ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಫಾತಿಮಾ ಜಾಗೀರದಾರ(17) ಮೃತಪಟ್ಟ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಧಾರವಾಡ ತಾಲೂಕಿನ ಚಂದನಮಟ್ಟಿ ಗ್ರಾಮದ ನಿವಾಸಿಯಾಗಿರುವ ಫಾತಿಮಾ ಅವರು ಮದೀನಾ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದರು. ಊರಿಗೆ ಹೋಗಲು ಬಸ್ ನಿಲ್ದಾಣಕ್ಕೆ ಬಂದಿದ್ದಾಗ ಘಟನೆ ನಡೆದಿದೆ. ಸಿಟಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿನಿ ಫಾತಿಮಾ ಬಲಿಯಾದ ಆರೋಪ ಕೇಳಿ ಬಂದಿದೆ. ಧಾರವಾಡ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.