LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹವಾಮಾನ ಇಲಾಖೆಯಿಂದ ಭಾರೀ ಮಳೆ ಮುನ್ಸೂಚನೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ಜುಲೈ 18ರಂದು ಶನಿವಾರ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

1. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ(12ನೇ ತರಗತಿಯವರೆಗೆ) ಯಾವುದೇ ತರಗತಿಗಳನ್ನು ನಡೆಸದಂತೆ ಆದೇಶಿಸಿ, ದಿನಾಂಕ: 18.07.2026 ರಂದು ರಜೆಯನ್ನು ಘೋಷಿಸಲಾಗಿರುತ್ತದೆ. ಸದರಿ ಆದೇಶವನ್ನು ಉಲ್ಲಂಘಿಸಿದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಕಲಂ 51(ಬಿ) ರ ಅನ್ವಯ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು.

2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

5. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳುವುದು.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.

ಟೋಲ್ ಫ್ರೀ ಸಂಖ್ಯೆ: 1077 0824-2442590

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING NEWS: 90ನೇ ಹುಟ್ಟುಹಬ್ಬಕ್ಕೆ 10 ದಿನ ಇರುವಾಗಲೇ ವೆಸ್ಟ್ ಇಂಡೀಸ್ ಕ್ರಿಕೆಟ್ ಲೆಜೆಂಡ್ ‘ಸರ್ ಗ್ಯಾರಿ ಸೋಬರ್ಸ್’ ವಿಧಿವಶ | Sir Garry Sobers Passes Awayಅಭಿವೃದ್ಧಿ ನೆಪದಲ್ಲಿ ರಿಯಲ್ ಎಸ್ಟೇಟ್, ಹೈಕಮಾಂಡ್ ಗೆ ಗಿಫ್ಟ್ ಕೊಡಲು ಟೌನ್ ಶಿಪ್: ಯತ್ನಾಳ್ ಆರೋಪಹವಾಮಾನ ಇಲಾಖೆಯಿಂದ ಭಾರೀ ಮಳೆ ಮುನ್ಸೂಚನೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆBREAKING NEWS: ಮೆಕ್ಸಿಕೋದಲ್ಲಿ 7.3 ತೀವ್ರತೆಯ ಭಾರೀ ಪ್ರಬಲ ಭೂಕಂಪ: ದಕ್ಷಿಣ ಕರಾವಳಿಯಲ್ಲಿ ಸುನಾಮಿ ಎಚ್ಚರಿಕೆಸಾರಿಗೆ ಸಂಸ್ಥೆಯ ಬಸ್ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿ ಸಾವುಬಿಜೆಪಿ ಟಿಕೆಟ್‌ ನಲ್ಲಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಟಿಎಂಸಿ ಬಂಡಾಯಗಾರರಾದ ​​ಸುಖೇಂದು ಶೇಖರ್ ರಾಯ್, ಸುಶ್ಮಿತಾ ದೇವ್, ಪ್ರಕಾಶ್ ಬರೈಕ್ಎರಡನೇ ವಿಮಾನ ನಿಲ್ದಾಣ ವಿಚಾರ: ಸಿಎಂ ಡಿ.ಕೆ.ಶಿವಕುಮಾರ್ ಗೆ ಬಹಿರಂಗ ಪತ್ರ ಬರೆದ ವಿಜಯೇಂದ್ರಧಾರವಾಡದಲ್ಲಿ ಶೀಘ್ರದಲ್ಲಿಯೇ ಕ್ರೀಡಾ ಸಂಕೀರ್ಣ ಪ್ರಾರಂಭ: ಕೇಂದ್ರ ಸಚಿವ ಪ್ರಲ್ಹಾದ ಜೋಶಿವೆಜ್ ಬದಲಿಗೆ ನಾನ್ ವೆಜ್ ಬರ್ಗರ್ ನೀಡಿದ ಜೊಮ್ಯಾಟೊ, ಹೋಟೆಲ್ ಮಾಲೀಕರಿಗೆ ದಂಡಪ್ರೀತಿಸಿ ಮದುವೆಯಾಗಿದ್ರೂ ಮತ್ತೊಬ್ಬನೊಂದಿಗೆ ಚಾಟಿಂಗ್ ಮಾಡ್ತಿದ್ದ ಅಪ್ರಾಪ್ತೆಗೆ ಗುಂಡು ಹಾರಿಸಿ ಕೊಲೆ: ಶವ ಹೂತಿಟ್ಟಿದ್ದ ಅಪ್ರಾಪ್ತ ಪತಿ ಸೇರಿ ಮೂವರು ಅರೆಸ್ಟ್