LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಭಿವೃದ್ಧಿ ನೆಪದಲ್ಲಿ ರಿಯಲ್ ಎಸ್ಟೇಟ್, ಹೈಕಮಾಂಡ್ ಗೆ ಗಿಫ್ಟ್ ಕೊಡಲು ಟೌನ್ ಶಿಪ್: ಯತ್ನಾಳ್ ಆರೋಪ

ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಹೋರಾಟ ಬಿಜೆಪಿ ನಾಯಕರ ಹೋರಾಟಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ಕೊಟ್ಟಿದ್ದಾರೆ.

ಪಕ್ಷದ ಎಲ್ಲಾ ನಾಯಕರಿಗೆ ಹೈಕಮಾಂಡ್ ಮಂಗಳಾರತಿ ಮಾಡಿದೆ. ಹೀಗಾಗಿ ಕೆಲವರು ಇದೀಗ ಹೋರಾಟ ಆರಂಭಿಸಿದ್ದಾರೆ ಎಂದು ಬೈರಮಂಗಲದಲ್ಲಿ ಹೇಳಿದ್ದಾರೆ.

ಬಿಜೆಪಿ ನಾಯಕರ ಹೋರಾಟಕ್ಕೆ ಟಾಂಗ್ ಕೊಟ್ಟ ಯತ್ನಾಳ್, ಅಧಿವೇಶನದ ಮೊದಲ ದಿನದಿಂದಲೇ ಹೋರಾಟ ಮಾಡುತ್ತೇವೆ. ಅಧಿವೇಶನವೇ ನಡೆಯದಂತೆ ನಾವು ನೋಡಿಕೊಳ್ಳುತ್ತೇವೆ. ಜನಶಕ್ತಿ ಮುಂದೆ ಯಾವ ಗೂಂಡಾ ಶಕ್ತಿಯೂ ನಡೆಯುವುದಿಲ್ಲ. ಈ ಯೋಜನೆಯನ್ನು ಕೈಬಿಡುತ್ತೇವೆ ಎನ್ನುವವರೆಗೂ ಹೋರಾಟ ಕೈಬಿಡುವುದಿಲ್ಲ ಎಂದು ಹೇಳಿದ್ದಾರೆ.

ಅಭಿವೃದ್ಧಿ ನೆಪದಲ್ಲಿ ರಿಯಲ್ ಎಸ್ಟೇಟ್ ಮಾಡಲು ಭೂಸ್ವಾಧೀನಕ್ಕೆ ಹೊರಟಿದ್ದಾರೆ. ಹೈಕಮಾಂಡ್ ಗೆ ಗಿಫ್ಟ್ ಕೊಡಲು ಟೌನ್ ಶಿಪ್ ಮಾಡುತ್ತಿದ್ದಾರೆ. ಭೂಸ್ವಾಧೀನ ಮಾಡಲ್ಲ ಎಂದು ರೈತರಿಗೆ ಚೆಕ್ ಕೊಡುತ್ತಿದ್ದಾರೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಪೊರಕೆ ಸೇವೆ ಆಗಿದ್ದಕ್ಕೆ ಎರಡು ತಿಂಗಳು ಮುಂದೂಡಿಕೆಯಾಗಿದೆ. ದೇವೇಗೌಡರು ಧರಣಿ ಮಾಡುತ್ತೇವೆ ಎಂದಿದ್ದಕ್ಕೆ ಹೋರಾಟಕ್ಕೆ ಶಕ್ತಿ ಬಂದಿದೆ. ದೇವೇಗೌಡರ ಎಚ್ಚರಿಕೆಯಿಂದ ಈಗ ಬಿಡದಿ ಹೋರಾಟ ಒಂದು ಹಂತಕ್ಕೆ ಬಂದಿದೆ. ಕಾಂಗ್ರೆಸ್ ಪಕ್ಷದ ಶಾಸಕರು ಆತ್ಮಸಾಕ್ಷಿಗಾಗಿ ಕೆಲಸ ಮಾಡಿ. ರೈತರ ಮೇಲೆ ಮರಣ ಶಾಸನ ಬರೆದು ದುಡ್ಡು ಮಾಡಿಕೊಂಡರೆ ಕುಟುಂಬಕ್ಕೆ ಒಳ್ಳೆಯದಾಗಲ್ಲ, ರೈತರ ಶಾಪ ಒಳ್ಳೆಯದಲ್ಲ ಎಂದು ಯತ್ನಾಳ್ ಹೇಳಿದ್ದಾರೆ.

ಕೃಷಿಗೆ ಯೋಗ್ಯವಲ್ಲದ ಕಡೆ ಯೋಜನೆ ಮಾಡಿ. ಸಿಎಂ ಅವರ ಒಣ ಪ್ರತಿಷ್ಠೆಗೆ ರೈತರನ್ನು ಬಲಿ ಕೊಡುತ್ತಿದ್ದಾರೆ. ಹೀಗೆ ಮಾಡಿದರೆ ನಾಳೆ ಸಿಎಂ ಸ್ಥಾನಕ್ಕೆ ಕುತ್ತು ಬರಬಹುದು, ಹುಷಾರಾಗಿರಿ. ಈಗಾಗಲೇ ಅಜ್ಜಯ್ಯನವರು ಹೇಳಿದ್ದಾರೆ ಮುಖ್ಯಮಂತ್ರಿಗಳೇ ಅಜ್ಜಯ್ಯ ಹೇಳಿದ ಹಾಗೆ ಹುಷಾರಾಗಿ ಇರಿ ಎಂದು ಯತ್ನಾಳ್ ಹೇಳಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ