LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಸರ್ಕಾರಿ ಗೌರವದೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಇಂದು ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಶ್ರೀರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೋಮವಾರ ಬೆಳಗ್ಗೆ ಏಳು ಗಂಟೆಯಿಂದ 9:30ವರೆಗೆ ಹೊಳೆನರಸೀಪುರದ ಹೆಚ್.ಡಿ. ರೇವಣ್ಣನವರ ನಿವಾಸದ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಹರದನಹಳ್ಳಿ ಮಾವಿನಕೆರೆಯ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಮನೋಹರ್ ಲಾಲ್ ಖಟ್ಟರ್, ಶಿವರಾಜ್ ಸಿಂಗ್ ಚೌಹಾಣ್, ಪ್ರಲ್ಹಾದ್ ಜೋಶಿ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಭಾನುವಾರ ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಅಂತಿಮ ದರ್ಶನದ ಬಳಿಕ ಹೊಳೆನರಸೀಪುರಕ್ಕೆ ಚೆನ್ನಮ್ಮನವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆಯಿತು. ಬೆಳಗಿನ ಜಾವ 4.30ಕ್ಕೆ ಹೊಳೆನರಸೀಪುರಕ್ಕೆ ಆಗಮಿಸಿದ್ದು, ಕುಟುಂಬದವರು ಪೂಜೆ ಸಲಲ್ಇಸಿದ ನಂತರ ದೇವೇಗೌಡರ ಹುಟ್ಟೂರು ಹರದನಹಳ್ಳಿ ಸಮೀಪದ ಮಾವಿನಕೆರೆ ಬೆಟ್ಟದ ತಪ್ಪಲಿನ ಕ್ಯಾತನಹಳ್ಳಿ ಬಳಿ ಇರುವ ಸ್ವಂತ ಜಮೀನಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ಭಾರಿ ಜನ ಸೇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೊಳೆನರಸೀಪುರದಲ್ಲಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವರ್ತಕರು ಮಧ್ಯಾಹ್ನದವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ಮಧ್ಯಾಹ್ನ 2 ಗಂಟೆ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮನವರ ಅಂತ್ಯಕ್ರಿಯೆ ನೆರವೇರಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ