LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಗೆ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು.

ಇದೇ ವೇಳೆ ಶಾಶ್ವತ ನಿವಾಸ ಪ್ರಮಾಣ ಪತ್ರ ಸೇವೆಯ ವೆಬ್ ಸೈಟ್ ಹಾಗೂ ವಾಟ್ಸ್ ಆ್ಯಪ್ ಸೇವೆಗೆ ಕೂಡ ಚಾಲನೆ ನೀಡಿದರು. ಈ ವೇಳೆ ಮಾಅತನಾಡಿದ ಸಿಎಂ ಡಿ.ಕೆ.ಶಿವಕುಮಾರ್, “ನಿಮ್ಮ ಮತ ನಿಮ್ಮ ಹಕ್ಕು,” ನಿಮ್ಮ ಮತ- ನಿಮ್ಮ ಬದುಕು” ಇದಕ್ಕೆ ನಮ್ಮ ಸರ್ಕಾರ ಗ್ಯಾರಂಟಿ. ಕರ್ನಾಟಕ ರಾಜ್ಯ ಬದುಕು ಕಟ್ಟಿಕೊಳ್ಳುವವ ಪ್ರತಿಯೊಬ್ಬರಿಗೂ ಮೂಲ ಸೌಕರ್ಯ ಒದಗಿಸಿಕೊಟ್ಟು ಅವರ ಹಕ್ಕು ಸಂರಕ್ಷಿಸಲು ಸದಾ ಮುಂಚೂಣಿಯಲ್ಲಿರುವ ರಾಜ್ಯ. ಎಸ್ ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮನೆ ಬಾಗಿಲಿಗೆ ಪಹಣಿ ನೀಡುವ ಮೂಲಕ ಹೊಸ ಹೆಜ್ಜೆ ಇಟ್ಟಿತ್ತು. ನಾನು ಮುಖ್ಯಮಂತ್ರಿಯಾಗುವ ಮುನ್ನ ಹಾಗೂ ನಂತರವೂ “ನಿಮ್ಮ ಮತ ನಿಮ್ಮ ಹಕ್ಕು,” ನಿಮ್ಮ ಮತ- ನಿಮ್ಮ ಬದುಕು” ಇದಕ್ಕೆ ನಮ್ಮ ಸರ್ಕಾರ ಗ್ಯಾರಂಟಿ ಎನ್ನುವುದು ನಮ್ಮ ಮಂತ್ರ ಹಾಗೂ ತತ್ವವಾಗಿದೆ ಎಂದರು.

ಭಾರತದಲ್ಲಿಯೇ ಶಾಶ್ವತವಾದ ಪ್ರಮಾಣ ಪತ್ರವನ್ನು ಉಚಿತವಾಗಿ ಮನೆ ಮನೆಗೆ ತೆರಳಿ ಪ್ರಮಾಣ ಪತ್ರವನ್ನು ನೀಡಲಾಗುವ ಐತಿಹಾಸಿಕ ಅಭಿಯಾನವನ್ನು ಸರ್ಕಾರ ಕೈಗೊಂಡಿದೆ. ಮತದಾರರ ಪಟ್ಟಿಗೆ ಸೇರಲು ಚುನಾವಣಾ ಆಯೋಗ ಸೂಚಿಸಿರುವ 11 ದಾಖಲೆಗಳಲ್ಲಿ ಒಂದಾದ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ನೀಡುವ ಐತಿಹಾಸಿಕ ಕಾರ್ಯಕ್ರಮವನ್ನು ಕೈಗೊಂಡಿದೆ ಎಂದರು.

ದೇಶದಲ್ಲಿಯೇ 4.85 ಕೋಟಿ ಕುಟುಂಬಗಳಿಗೆ ಈ ದಾಖಲೆ ಮನೆಗೆ ತಲುಪಿಸುವ ಕಾರ್ಯ ಕೈಗೊಂಡ ಪ್ರಥಮ ರಾಜ್ಯ ಕರ್ನಾಟಕವಾಗಿದೆ ಎನ್ನುವುದು ನಮ್ಮ ಹೆಮ್ಮೆ ಎಂದರು. ಚುನಾವಣಾ ಆಯೋಗ ಸೂಚಿಸಿರುವ ಕ್ರಮಗಳನ್ನು ಚಾಚೂ ತಪ್ಪದೆ ಸರ್ಕಾರ ಪಾಲಿಸುತ್ತಿದೆ. ರಾಜ್ಯದ ನಿವಾಸಿಗಳಿಗೆ ಅಗತ್ಯವಿರುವ ಪ್ರಮಾಣಪತ್ರಗಳನ್ನು ನೀಡುವುದು ರಾಜ್ಯ ಸರ್ಕಾರದ ಹೊಣೆಗಾರಿಕೆ. ಇದನ್ನು ಪಕ್ಷಾತೀತವಾಗಿ ನಾವು ಜವಾಬ್ದಾರಿಯಿಂದ ಕೈಗೊಂಡಿದ್ದೇವೆ ಎಂದರು.

ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರುವವರಿದ್ದು, ಆದರೆ ಜನರಿಗೆ ನೆರವಾಗುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಅರ್ಜಿಗಳನ್ನು ಆನ್ ಲೈನ್ ಮೂಲಕ, ಸೇವಾ ಕೇಂದ್ರಗಳಲ್ಲಿ, ಹೋಬಳಿ ಮಟ್ಟದಲ್ಲಿ ತೆರೆಯಲಾಗಿರುವ facilitation centre ಗಳಲ್ಲಿ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ನನ್ನ ಮತ್ತು ಉಪಮುಖ್ಯಮಂತ್ರಿಗಳ ಭಾವಚಿತ್ರವಿರುವ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ. BLO ಗಳು ನೀಡುವ ಅರ್ಜಿಗಳನ್ನು ಭರ್ತಿ ಮಾಡಿ ಅವರಿಗೆ ತಲುಪಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಕಳೆದುಕೊಂಡರೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಐದು ಗ್ಯಾರಂಟಿಗಳ ಜೊತೆ ಭೂಮಿ ಗ್ಯಾರಂಟಿಯನ್ನೂ ನೀಡುತ್ತಿದ್ದು, ಇದರ ಜೊತೆಗೆ ರಾಜ್ಯದಲ್ಲಿ ವಿಶೇಷ ಆಂದೋಲನವನ್ನು ಸರ್ಕಾರ ಕೈಗೊಂಡು ಮತದಾನದ ಗ್ಯಾರಂಟಿಯನ್ನು ಜಾರಿಗೊಳಿಸಿದ್ದೇವೆ ಎಂದರು.

ಜನರ ಬದುಕು, ಗುರುತು ಬಹಳ ಮುಖ್ಯ. ಗುರುತಿದ್ದಲ್ಲಿ ಬದುಕು ಇದೆ. ಅದರಲ್ಲಿ ಶಕ್ತಿ ಇದ್ದು, ಮುಂದಿನ ದಿನಗಳಲ್ಲಿ ಅವರ ನಾಯಕರನ್ನು ಆಯ್ಕೆ ಮಾಡಿಕೊಳ್ಳಲು ಇದು ಅತ್ಯಗತ್ಯ ಎಂದರು.

ಜನರ ಬದುಕಿಗೆ ನೇರವಾಗಿ ಸಹಾಯ ಮಾಡುವುದು ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆಯಲ್ಲಿಯೇ ಕರ್ನಾಟಕ ಸರ್ಕಾರ ಕೈಗೊಂಡಿರುವ ಐತಿಹಾಸಿಕ ಹೆಜ್ಜೆ ಇದಾಗಿದೆ ಎಂದು ಸಿಎಂ ಬಣ್ಣಿಸಿದರು.

ಅಭಿಯಾನದ ಮೂಲಕ ಜನರ ಸೌಲಭ್ಯಗಳನ್ನು ನೇರವಾಗಿ ಮನೆಬಾಗಿಲಿಗೆ ತಲುಪಿಸಲಾಗುತ್ತಿದೆ. ಸರ್ಕಾರ ಮತ್ತು ಜನರ ನಡುವಿನ ಅಂತರ ನಿವಾರಣೆಯಾಗಬೇಕು ಎನ್ನುವ ದೃಷ್ಟಿಯಿಂದ ಹಾಗು ಜನರು ಸರ್ಕಾರಿ ಕಚೇರಿಗಳಿಗೆ ಅಲೆಯಬಾರದು ಎಂಬ ದೃಷ್ಟಿಯಿಂದ ಈ ಕಾರ್ಯವನ್ನು ಕೈಗೊಂಡಿದೆ ಎಂದರು.

ಈ ಸೌಲಭ್ಯವನ್ನು ಜನರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಗ್ರಾಮ ಲೆಕ್ಕಿಗರು ಸೇರಿದಂತೆ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ಶ್ರಮ ಅಭಿನಂದನೀಯ ಎಂದು ಮುಖ್ಯಮಂತ್ರಿಗಳು ಜನರು ಶಾಶ್ವತ ಸಾಕ್ಷಿ ಪತ್ರವನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಾಸಕಾಂಗದಲ್ಲಿ ನಿಯಮಗಳನ್ನು ರೂಪಿಸಿದರೂ, ಅದನ್ನು ಕಾರ್ಯಾಂಗ ನಿಷ್ಠೆಯಿಂದ ಅನುಷ್ಠಾನಗೊಳಿಸಿದಾಗ ಮಾತ್ರ ಸರ್ಕಾರದ ಉದ್ದೇಶ ಸಾರ್ಥಕವಾಗುತ್ತದೆ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING: ಉಕ್ರೇನ್‌ ಒಡೆಸಾ ಬಂದರಿನಿಂದ ಹೊರಟಿದ್ದ ಹಡಗಿನ ಮೇಲೆ ದಾಳಿ: ನಾಲ್ವರು ಭಾರತೀಯರು ಸಾವುಅಕ್ರಮ ಮರಳು ದಂಧೆಕೋರರಿಗೆ ಶಾಕ್: 3000 ಮೆಟ್ರಿಕ್ ಟನ್ ಮರಳು ಜಪ್ತಿಬೆಂಗಳೂರಿನಲ್ಲಿ ಜನನಿಬಿಡ ಪ್ರದೇಶದಲ್ಲೇ ವ್ಯಕ್ತಿ ಆತ್ಮಹತ್ಯೆವ್ಯವಸ್ಥೆ ಶುದ್ಧೀಕರಿಸದಿದ್ದರೆ ಅರ್ಹತೆ ಇರುವ ಯುವ ಜನತೆ ನರಳುತ್ತಾರೆ: ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಅರ್ಜಿʻಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆʼಗೆ ಮರು ನಾಮಕರಣ: ʻಬೆಂಗಳೂರು ಕೇಂದ್ರ ಶೈಕ್ಷಣಿಕ ಜಿಲ್ಲೆʼ ಕಡ್ಡಾಯ ಬಳಕೆಗೆ ಆದೇಶಪೆಟ್ರೋಲ್‌ ನಲ್ಲಿ ಎಥೆನಾಲ್ ಮಿಶ್ರಣ 20% ಕ್ಕಿಂತ ಹೆಚ್ಚಿಸಲು ಯಾವುದೇ ನಿರ್ಧಾರ ಕೈಗೊಂಡಿಲ್ಲ: ಕೇಂದ್ರ ಸಚಿವ ಸುರೇಶ್ ಗೋಪಿಚಿನ್ನದ ಬೆಲೆ ಮತ್ತೆ ಏರಿಕೆ ಬೆಳ್ಳಿ ಕೆಜಿಗೆ ₹5,000 ಜಿಗಿತ: ಜುಲೈ 20ರ ಹೊಸ ದರ ಇಲ್ಲಿದೆರಾಜ್ಯ ಸರ್ಕಾರ ತನ್ನ ಅಧಿಕಾರದ ಮಿತಿಯನ್ನು ಮೀರಿ ನಡೆದುಕೊಳ್ಳುತ್ತಿರುವುದು ಸಂವಿಧಾನ ವ್ಯವಸ್ಥೆಗೆ ವಿರುದ್ಧ: ಆರ್.ಅಶೋಕ್ ಕಿಡಿಉದ್ಯೋಗಾಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಜುಲೈ 23 ರಂದು ಉದ್ಯೋಗ ನೇರ ಸಂದರ್ಶನಚೆನ್ನಮ್ಮ ಇನ್ನು ನೆನಪು ಮಾತ್ರ: ಸ್ವಾಮಿಯ ಸಾನ್ನಿಧ್ಯಕ್ಕೆ ಕಳುಹಿಸಿಕೊಡುತ್ತೇನೆ….ಎನ್ನುತ್ತಾ ಅಂತ್ಯಕ್ರಿಯೆ ವೇಳೆ ಪತ್ನಿ ಬಗ್ಗೆ ಗದ್ಗದಿತರಾದ ಮಾಜಿ ಪ್ರಧಾನಿ ದೇವೇಗೌಡ