ಬೆಂಗಳೂರು: ಬೆಂಗಳೂರಿನ ಜನನಿಬಿಡ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿದ್ದಾನೆ. ಪ್ಯಾಲೇಸ್ ಗುಟ್ಟಹಳ್ಳಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಡಾರ್ಜಿಲಿಂಗ್ ಮೂಲದ ಸುದೀಪ್(41) ನೇಣಿಗೆ ಶರಣಾದ ವ್ಯಕ್ತಿ ಎಂದು ಹೇಳಲಾಗಿದೆ. ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಡಾರ್ಜಿಲಿಂಗ್ ನ ಸುದೀಪ್ ಮನೆ ಸಮೀಪ ಇರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ವೈಯಾಲಿಕಾವಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ಸ್ಥಳಾಂತರ ಮಾಡಲಾಗಿದೆ.