LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾವೇರಿ ನದಿ ನೀರು ಹಂಚಿಕೆ ವಿವಾದ: ಕರ್ನಾಟಕ-ತಮಿಳುನಾಡು ಮುಖ್ಯಮಂತ್ರಿಗಳ ಸಭೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್, ಕರ್ನಾಅಟಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಮಾತುಕತೆಗೆ ನಿರ್ಧರಿಸಿದ್ದು, ಉಭಯ ರಾಜ್ಯಗಳ ಸಿಎಂ ಸಭೆಗೆ ಮುಹೂರ್ತ ಫಿಕ್ಸ್ ಆಗಿದೆ.

ಕಾವೇರಿ ನೀರು ವಿವಾದ ವಿಚಾರವಾಗಿ ಕರ್ನಾಟಕ ಸಿಎಂ ಡಿ.ಕೆ ಶಿವಕುಮಾರ್ ಹಾಗೂ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ನಡುವಿನ ಸಂದಾನ ಮಾತುಕತೆಗೆ ವೇದಿಕೆ ಸಿದ್ಧವಾಗಿದ್ದು, ಆಗಸ್ಟ್ 3ರ ಮಧ್ಯಾಹ್ನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಿಗದಿಯಾಗಿದೆ.

ಈ ಹಿನ್ನೆಲೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿದ್ಧತೆ ನಡೆಯುತ್ತಿವೆ. ಸ್ವಚ್ಛತೆ, ಎಸಿ ಕ್ಲೀನಿಂಗ್, ನೆಲಹಾಸು ಬದಲಾವಣೆ ಸೇರಿದಂತೆ ಉಭಯ ರಾಜ್ಯಗಳ ಬಾವುಟ ಮತ್ತು ಲಾಂಛನಗಳ ಅಳವಡಿಕೆ ಕಾರ್ಯ ನಡೆದಿದೆ.

ಇನ್ನು ಈ ಸಭೆಯಲ್ಲಿ ಎರಡೂ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳು ಸೇರಿ ಒಟ್ಟು 25 ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.

ಕರ್ನಾಟಕದಲ್ಲಿ ಭೀಕರ ಬರಗಾಲವಿರುವುದರಿಂದ ಕಾವೇರಿ ಕೊಳ್ಳದಲ್ಲಿ ನೀರಿನ ಅಭಾವವಿದೆ. ಇಲ್ಲಿನ ರೈತರಿಗೆ ಬೆಳೆಗಳಿಗೆ ನೀರಿಲ್ಲ, ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಮುಖ್ಯಮಂತ್ರಿಗಳ ನಡುವಿನ ಮಾತುಕತೆ ತೀವ್ರ ಕುತೂಹಲ ಮೂಡಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ