LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿ

ಸರ್ಕಾರದ ಜಲಸಂಪನ್ಮೂಲ ಇಲಾಖೆ ಅವರು ಸೂಚಿಸಿರುವಂತೆ ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಕ್ಷೀಣಿಸುತ್ತಿರುವುದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಾಗೂ ಜಲ ನೀತಿ ಅನ್ವಯ ಕುಡಿಯುವ ನೀರಿಗೆ ಪ್ರಥಮ ಆಧ್ಯತೆ ನೀಡಬೇಕಾದ ಕಾರಣ ಪ್ರಸ್ತುತ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಕಾಯ್ದಿರಿಸಿಕೊಂಡು ಬಳಸಬೇಕಾಗಿರುತ್ತದೆ.

ಮುಂಬರುವ ದಿನಗಳಲ್ಲಿ ಎನ್-ನಿನೊ ಪರಿಣಾಮದಿಂದ ಮಳೆಯ ಕೊರತೆ ಉಂಟಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆಯು ಸೂಚನೆ ನೀಡಿರುವುದರಿಂದ ರಾಜ್ಯದ ಹಲವು ಕಡೆ ಬರ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇರುವುದರಿಂದ ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ ಎಂದು ಮುಖ್ಯಮಂತ್ರಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿರುತ್ತಾರೆ.

ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಮೈಸೂರು ವಿಭಾಗದ ಕುಡಿಯುವ ನೀರಿನ ಯೋಜನೆಯ ಸಮಿತಿಯಡಿಯಲ್ಲಿ ಬರುವ ಜಲಾಶಯಗಳಾದ ಕೃಷ್ಣರಾಜಸಾಗರ, ಕಬಿನಿ, ಹಾರಂಗಿ, ಹೇಮಾವತಿ, ಭದ್ರಾ, ನುಗು, ತಾರಕ, ಸುವರ್ಣಾವತಿ, ಚಿಕ್ಲಿಹೊಳೆ, ಗುಂಡಾಲ್, ಉಡುತೊರೆಹಳ್ಳ, ಪಾಟೇಹೊಳೆ ಮತ್ತು ಯಗುಚಿ ಜಲಾಶಯಗಳಲ್ಲಿ ಪ್ರಸ್ತುತ ಲಭ್ಯವಿರುವ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಲು ಹಾಗೂ ರೈತ ಬಾಂಧವರು ಜಲಾಶಯದ ನೀರನ್ನು ಅವಲಂಬಿಸಿರುವ ಬೆಳೆಗಳನ್ನು ಬೆಳೆಯದಂತೆ ಹಾಗೂ ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಂಡು ಕೃಷಿ ಇಲಾಖಾ ಅಧಿಕಾರಿಗಳು ನೀಡುವ ಸಲಹೆಯಂತೆ ಮಳೆ ಆಶ್ರಿತ ಬೆಳೆಗಳನ್ನು ಬೆಳೆಯುವಂತೆ ಈ ಮೂಲಕ ಎಲ್ಲಾ ರೈತ ಬಾಂಧವರಿಗೆ ತಿಳಿಸಿದೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕುಡಿಯುವ ನೀರಿನ ಸಮಿತಿ ಜಲಾಶಯ ಯೋಜನೆಯ ಅಧ್ಯಕ್ಷರು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ