LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೈಕ್ ಸವಾರನ ಮೇಲೆ ದರ್ಪ ತೋರಿದ ಪ್ರಕರಣ: ಮಾಲೂರು ಜಡ್ಜ್ ಗಾಯತ್ರಿ ಬೀದರ್ ಜಿಲ್ಲೆಗೆ ವರ್ಗಾವಣೆ

ಬೆಂಗಳೂರು: ಬೈಕ್ ಸವಾರನ ಮೇಲೆ ದರ್ಪ ತೋರಿ ಹೈಕೋರ್ಟ್ ನಿಂದ ತರಾಟೆಗೆ ಒಳಗಾಗಿದ್ದ ಕೋಲಾರ ಜಿಲ್ಲೆ ಮಾಲೂರು ಜೆ.ಎಂ.ಎಫ್.ಸಿ. ನ್ಯಾಯಾಧೀಶರಾದ ಗಾಯತ್ರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

ಈ ಕುರಿತಾಗಿ ಹೈಕೋರ್ಟ್ ರಿಜಿಸ್ಟ್ರಾರ್ ಚಂದ್ರಶೇಖರ ರೆಡ್ಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ನ್ಯಾಯಾಧೀಶೆ ಗಾಯತ್ರಿ ಅವರ ಇನೋವಾ ಕಾರು ಓವರ್ ಟೇಕ್ ಮಾಡಿದ್ದಾನೆ ಎನ್ನುವ ಕಾರಣಕ್ಕೆ ಬೈಕ್ ಸವಾರ ವಿನಯ್ ಫಾಲೋ ಮಾಡಿಕೊಂಡು ಹೋಗಿ ಸಾರ್ವಜನಿಕವಾಗಿ ರಂಪಾಟ ನಡೆಸಿದ್ದರು. ಪೊಲೀಸರನ್ನು ಕರೆಸಿ ಗಲಾಟೆ ಮಾಡಿದ್ದರು. ಈ ದೃಶ್ಯಗಳು ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆಯ ನಂತರ ಬೈಕ್ ಸವಾರ ವಿನಯ್ ವಿರುದ್ಧ ಮಾಲೂರು ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.

ತಮ್ಮ ವಿರುದ್ಧದ ನಕಲಿ ಪ್ರಕರಣ ರದ್ದುಗೊಳಿಸಲು ಕೋರಿ ವಿನಯ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆದಿತ್ತು. ಎಫ್ಐಆರ್ ದಾಖಲಿಸಿದ್ದಕ್ಕೆ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದ್ದು, ನ್ಯಾಯಾಧೀಶೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಿಜಿಸ್ಟ್ರಾ ಗೆ ಸೂಚನೆ ನೀಡಲಾಗಿತ್ತು. ಹೈಕೋರ್ಟ್ ನಿರ್ದೇಶನದ ಬೆನ್ನಲ್ಲೇ ನ್ಯಾಯಾಧೀಶೆ ಗಾಯತ್ರಿ ಅವರನ್ನು ಹುಮ್ನಾಬಾದ್ ಗೆ ವರ್ಗಾವಣೆ ಮಾಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ