LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಪಕ್ಷ ಯುವಜನರ ರಕ್ತ ಹೀರಿ ಬದುಕುತ್ತಿದೆ: ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ನೀಟ್ ಪರೀಕ್ಷೆಯಲ್ಲಿ ಮಾತ್ರ ಆಗಿದೆಯೇ? ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಬೆಂಗಳೂರು: ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿದಾರೆ. ಕಾಂಗ್ರೆಸ್ ಪಕ್ಷ ಯುವಜನರ ರಕ್ತ ಹೀರಿ ಬದುಕುತ್ತಿದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ ಸಿ.ಎನ್. ಅಶ್ವಥ್ ನಾರಾಯಣ ಅವರ ಕಚೇರಿಗೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದಾರೆ. ಇದು ಖಂಡನೀಯ ಎಂದರು. ಸದಾ ಪೋಸ್ಟರ್ ಚಳವಳಿ ಮಾಡುವುದೇ ಕಾಂಗ್ರೆಸ್‌ನ ಸಂಸ್ಕೃತಿಯಾಗಿದೆ. ಜೆನ್ ಜೀ ಯುವಸಮೂಹ ಈ ದೇಶದ ಭವಿಷ್ಯ. ನಾವು ಯುವಕರ ಪರವಾಗಿ ನಿಲ್ಲುತ್ತೇವೆ ಎಂದರು.

ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ನೀಟ್ ಪರೀಕ್ಷೆಯಲ್ಲಿ ಮಾತ್ರ ಆಗಿದೆಯೇ? ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಾಲೇಜಿನಲ್ಲಿ ಹಾಗೂ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಯಲ್ಲೂ ಪೇಪರ್ ಸೋರಿಕೆಯಾಗಿದೆ, ಅದಕ್ಕೆ ಸರ್ಕಾರದ ಬಳಿ ಉತ್ತರವಿದೆಯೇ? KPSC ಅಕ್ರಮ ಖಂಡಿಸಿ, ಪಶುವೈದ್ಯರು ಹಾಗೂ ಕೃಷಿ ವಿವಿ ಅಭ್ಯರ್ಥಿಗಳು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಅಕ್ರಮಗಳನ್ನು ಸರ್ಕಾರ ಸಿಬಿಐ ತನಿಖೆಗೆ ಏಕೆ ನೀಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆಗೆ ಕಾಂಗ್ರೆಸ್ ತೀವ್ರ ಒತ್ತಡ ಹೇರುತ್ತಿದೆ. ಮುಖ್ಯಮಂತ್ರಿಗಳು ಎರಡು ಬಾರಿ ಹೊರಟ್ಟಿ ಅವರಿಗೆ ಕರೆ ಮಾಡಿ ರಾಜೀನಾಮೆ ಕೇಳಿದ್ದಾರೆ. ನಿನ್ನೆ ತಮ್ಮ ಮನೆಗೆ ಕರೆಸಿಕೊಂಡು ರಾಜೀನಾಮೆಗೆ ಒತ್ತಡ ಹೇರಿದ್ದಾರೆ. ಸಭಾಪತಿಗಳನ್ನು ಮುಖ್ಯಮಂತ್ರಿಗಳು ತಮ್ಮ ಮನೆಗೆ ಕರೆಸಿಕೊಂಡಿದ್ದು ಶಿಷ್ಟಾಚಾರದ ಉಲ್ಲಂಘನೆ. ಸಿಎಂ ಅವರೇ ಸಭಾಪತಿಗಳ ಮನೆಗೆ ಹೋಗಿದ್ದರೆ ಅದು ಸಭ್ಯತೆಯಾಗುತ್ತಿತ್ತು ಎಂದರು.

ಹಿಂದೆ ವಿರೋಧ ಪಕ್ಷದವರು ಸಭಾಪತಿಯಾಗಿದ್ದಾಗ ಅವರನ್ನು ತೆಗೆದುಹಾಕದ ಪರಂಪರೆ ಇತ್ತು. ಆದರೆ ಕಾಂಗ್ರೆಸ್ ಈಗ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ತರುವುದಾಗಿ ಬೆದರಿಸುತ್ತಿದೆ. ಎಐಸಿಸಿ ಲೆಟರ್ ಹೆಡ್‌ನಲ್ಲಿ ಸಭಾಪತಿಗಳ ಹೆಸರು ಉಲ್ಲೇಖಿಸಿ ಕಳುಹಿಸುವ ಮೂಲಕ ಸದನ ಮತ್ತು ಸಂವಿಧಾನಕ್ಕೆ ಅಪಮಾನ ಎಸಗಲಾಗಿದೆ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ