ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿ ಮೂರು ದಿನಗಳು ಕಳೆದರೂ ಇನ್ನೂ ಸಚಿವರಿಗೆ ಖಾತೆ ಹಂಚಿಕೆಯಾಗಿಲ್ಲ. ಇದೇ ವಿಚಾರವಾಗಿ ವಿಪಕ್ಷಗಳು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಅನ್ಡುವೆ ನೂತನವಾಗಿ ಪ್ರಮಾಣವಚನ ಸ್ವೀಕರಿಸಿರುವ ಸಚಿವರಿಗೆ ಇಂದು ರಾತ್ರಿಯೇ ಖಾತೆ ಹಂಚಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂದು ರಾತ್ರಿಯೊಳಗೆ 19 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡುವ ನಿರೀಕ್ಷೆಯಿದೆ.ಈ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಒಂದು ಸುತ್ತಿನ ಸಭೆ ನಡೆಸಿದ್ದಾರೆ. ಹೀಗಿದ್ದರೂ ಮತ್ತೊಂದು ಸುತ್ತಿನ ಚರ್ಚೆ ಬಳಿಕ ಅಂತಿಮ ನಿರ್ಧಾರವಾಗಲಿದೆ.
ನೂತನ ಸಚಿವರಿಗೆ ಖಾತೆ ಹಂಚಿದರೂ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇರುವ ಕಾರಣ ಯಾವುದೇ ಖಾತೆ ನೀಡಿದರೂ ಕಾರ್ಯ ನಿರ್ವಹಿಸುವಂತೆ ನೂತನ ಸಚಿವರಿಗೆ ಹೈಕಮಾಂಡ್ ನಾಯಕರು ಸಂದೇಶ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.