LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರದ ನಿರ್ದೇಶನದಂತೆ ನ್ಯಾಯಬೆಲೆ ಅಂಗಡಿಗಳ ಮೂಲಕ ಕಾರ್ಡುದಾರರಿಗೆ ಆಗಸ್ಟ್, ಸೆಪ್ಟೆಂಬರ್ ತಿಂಗಳ ಎನ್ಎಫ್ಎಸ್ಎ ಅಕ್ಕಿ ದಾಸ್ತಾನು ಒಟ್ಟಿಗೆ ವಿತರಣೆ

ಕೇಂದ್ರ ಸರ್ಕಾರದ ನಿರ್ದೇಶನದಂತೆ ಆಗಸ್ಟ್-2026ರ ಮಾಹೆಯಲ್ಲಿ ಆಗಸ್ಟ್ ಹಾಗೂ ಸೆಪ್ಟೆಂಬರ್-2026ರ ಎರಡು ತಿಂಗಳ ಎನ್‌ಎಫ್‌ಎಸ್‌ಎ ಅಕ್ಕಿ ದಾಸ್ತಾನನ್ನು ಒಟ್ಟಿಗೆ ಹಂಚಿಕೆ ನೀಡಿ, ನ್ಯಾಯಬೆಲೆ ಅಂಗಡಿಗಳ ಮೂಲಕ ಕಾರ್ಡುದಾರರಿಗೆ ವಿತರಿಸಲಾಗುತ್ತಿದೆ.

ಎರಡು ತಿಂಗಳ ಪಡಿತರವನ್ನು ಆಗಸ್ಟ್ ಮಾಹೆಯಲ್ಲಿಯೇ ವಿತರಿಸಲಾಗುತ್ತಿದ್ದು, ಆಗಸ್ಟ್ ಮತ್ತು ಸೆಪ್ಟೆಂಬರ್ ಮಾಹೆಗಳಿಗೆ ಸಂಬಂಧಿಸಿದಂತೆ ಕಾರ್ಡುದಾರರಿಂದ ಎರಡು ಬಾರಿ ಬಯೋಮೆಟ್ರಿಕ್ ಪಡೆಯಲಾಗುತ್ತದೆ.

ಆಗಸ್ಟ್-2026ರ ಮಾಹೆಯಲ್ಲಿ ಕಾರ್ಡುದಾರರಿಗೆ ವಿತರಿಸುವ ಪ್ರಮಾಣ: ಅಂತ್ಯೋದಯ ಅನ್ನ ಯೋಜನೆ(ಎಎವೈ) ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ ಪ್ರತಿ ಪಡಿತರ ಚೀಟಿಗೆ 28 ಕೆ.ಜಿ. ಅಕ್ಕಿ ಹಾಗೂ 42 ಕೆ.ಜಿ. ಜೋಳ ಸೇರಿದಂತೆ ಒಟ್ಟು 70 ಕೆ.ಜಿ. ಆಹಾರ ಧಾನ್ಯ. ಕೇಂದ್ರ ಪಡಿತರ ಚೀಟಿ ಸದಸ್ಯರಿಗೆ ಸಂಬಂಧಿಸಿದಂತೆ ಪ್ರತಿ ಸದಸ್ಯರಿಗೆ 4 ಕೆ.ಜಿ. ಅಕ್ಕಿ ಹಾಗೂ 6 ಕೆ.ಜಿ. ಜೋಳ ಸೇರಿದಂತೆ ಒಟ್ಟು 10 ಕೆ.ಜಿ. ಆಹಾರ ಧಾನ್ಯ. ರಾಜ್ಯ ಪಡಿತರ ಚೀಟಿ ಸದಸ್ಯರಿಗೆ ಸಂಬಂಧಿಸಿದಂತೆ ಪ್ರತಿ ಸದಸ್ಯರಿಗೆ 10 ಕೆ.ಜಿ. ಅಕ್ಕಿ ವಿತರಿಸಲಾಗುವುದು.

ಆಗಸ್ಟ್ ಮಾಹೆಯಲ್ಲಿ ಎರಡು ತಿಂಗಳ ಪಡಿತರವನ್ನು ವಿತರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಸಾರ್ವಜನಿಕರು ಈ ಕುರಿತು ಗಮನಹರಿಸಿ, ನ್ಯಾಯಬೆಲೆ ಅಂಗಡಿಗಳ ಮೂಲಕ ನಿಗದಿತ ಪ್ರಮಾಣದ ಪಡಿತರವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ