LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನಲ್ಲಿ ವಿಮಾನಗಳ ನಿರ್ವಹಣೆ, ರಿಪೇರಿ, ನವೀಕರಣ ಕೇಂದ್ರ ಸ್ಥಾಪನೆಗೆ ‘ಲುಫ್ತಾನ್ಸಾ’ ಆಸಕ್ತಿ

ಬೆಂಗಳೂರು: ಲುಫ್ತಾನ್ಸಾ ಟೆಕ್ನಿಕ್ ಕಂಪನಿಯು ಬೆಂಗಳೂರಿನಲ್ಲಿ ವಿಮಾನಗಳ ನಿರ್ವಹಣೆ, ರಿಪೇರಿ ಮತ್ತು ನವೀಕರಣ ಕೇಂದ್ರ ಸ್ಥಾಪಿಸಲು ಆಸಕ್ತಿ ತೋರಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಲುಫ್ತಾನ್ಸಾ ಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾರ್ಸೆಲ್ ಪಾಸ್ಟೂಸ್ಕ ನೇತೃತ್ವದ ಬುಧವಾರ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ.

ಕರ್ನಾಟಕದತ್ತ ಲುಫ್ತಾನ್ಸಾ ಟೆಕ್ನಿಕ್‌ ನ ಚಿತ್ತ. ಜಾಗತಿಕ ವಿಮಾನಯಾನ, MRO ಹಾಗೂ ತಾಂತ್ರಿಕ ಸೇವೆಗಳ ಮುಂಚೂಣಿ ಸಂಸ್ಥೆಯಾದ Lufthansa Technik, ತನ್ನ ವಿಸ್ತರಣೆಯ ಮುಂದಿನ ಹಂತಕ್ಕಾಗಿ ಭಾರತವನ್ನು ಪರಿಗಣಿಸುತ್ತಿದ್ದು, ಪ್ರಮುಖ ಸಂಭಾವ್ಯ ತಾಣವಾಗಿ ಕರ್ನಾಟಕದತ್ತವೂ ಗಮನ ಹರಿಸಿರುವುದು ಸಂತಸದ ಸಂಗತಿಯಾಗಿದೆ.

ಸಂಸ್ಥೆಯ ಹಿರಿಯ ಜಾಗತಿಕ ನಿಯೋಗವು ನನ್ನನ್ನು ಭೇಟಿ ಮಾಡಿ, ಸಂಸ್ಥೆಯ ವಿಸ್ತರಣಾ ಯೋಜನೆಗಳು ಹಾಗೂ ಕರ್ನಾಟಕದಲ್ಲಿ ಹೂಡಿಕೆಯ ಸಾಧ್ಯತೆಗಳ ಕುರಿತು ಮಹತ್ವದ ಮಾತುಕತೆ ನಡೆಸಿತು. ಬೆಂಗಳೂರಿನ ಜರ್ಮನ್ ಉಪ ಕಾನ್ಸುಲ್ ಜನರಲ್ ಅನೆಟ್ ಬೇಸ್ಲರ್ ಅವರೂ ಈ ಸಭೆಯಲ್ಲಿ ಉಪಸ್ಥಿತರಿದ್ದರು.

ಕರ್ನಾಟಕದ ಬಲಿಷ್ಠ ಏರೋಸ್ಪೇಸ್ & ಡಿಫೆನ್ಸ್ ಪರಿಸರ ವ್ಯವಸ್ಥೆ, ವಿಶ್ವದರ್ಜೆಯ ಎಂಜಿನಿಯರಿಂಗ್ ಮತ್ತು R&D ಪ್ರತಿಭೆ, ಕೌಶಲ್ಯಪೂರ್ಣ ಮಾನವ ಸಂಪನ್ಮೂಲ, ಅಭಿವೃದ್ಧಿ ಹೊಂದಿರುವ ವಿಮಾನಯಾನ ಪೂರೈಕೆ ಸರಪಳಿ, ಬಲಿಷ್ಠ MRO ಸಾಮರ್ಥ್ಯ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಜಾಗತಿಕ ಸಂಪರ್ಕ ಜಾಲ ಸಂಸ್ಥೆಯ ಗಮನ ಸೆಳೆದಿವೆ. ಜಾಗತಿಕ ಏರೋಸ್ಪೇಸ್ ನಕ್ಷೆಯಲ್ಲಿ ಕರ್ನಾಟಕದ ಸ್ಥಾನವನ್ನು ಮತ್ತಷ್ಟು ಎತ್ತರಕ್ಕೇರಿಸುವತ್ತ ಮತ್ತೊಂದು ಮಹತ್ವದ ಹೆಜ್ಜೆ ಇದಾಗಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ