LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸುಪ್ರೀಂ ಕೋರ್ಟ್ ನಲ್ಲಿ ಕಾವೇರಿ ನದಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಸೋಮವಾರ ಮುಂದೂಡುವ ಸಾಧ್ಯತೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವುದಿಲ್ಲ. ಪ್ರಕರಣದ ವಿಚಾರಣೆಯನ್ನು ಮುಂದಿನ ಸೋಮವಾರಕ್ಕೆ (ಆಗಸ್ಟ್ 17) ಮುಂದೂಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ಸಂಬಂಧ ಕರ್ನಾಟಕ ಸರ್ಕಾರ ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಸುದೀರ್ಘ ಪ್ರತ್ಯುತ್ತರ ಸಲ್ಲಿಕೆ ಮಾಡಿದೆ. ರಾಜ್ಯದಲ್ಲಿ ‘ಎಲ್ ನಿನೋ’ ಪರಿಣಾಮದಿಂದಾಗಿ ಭೀಕರ ಮಳೆ ಕೊರತೆ ಎದುರಾಗಿದ್ದರೂ ಸಿಡಬ್ಲ್ಯೂಎಂಎ (CWMA) ಶಿಫಾರಸಿಗಿಂತ ಹೆಚ್ಚಿನ ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ ಎಂದು ಕರ್ನಾಟಕ ಸ್ಪಷ್ಟಪಡಿಸಿದೆ.

ಈ ವರ್ಷ ಎಲ್ ನಿನೋ ಪರಿಣಾಮದಿಂದಾಗಿ ಸಂಕಷ್ಟ ಎದುರಾಗಿದ್ದು, ಕರ್ನಾಟಕದ 4 ಡ್ಯಾಂಗಳ ಒಳಹರಿವಿನಲ್ಲಿ ಶೇಕಡಾ 65.76ರಷ್ಟು ಕೊರತೆ ಉಂಟಾಗಿದೆ. ಹೀಗಿದ್ದರೂ CWMA ಶಿಫಾರಸುಗಳಿಗಿಂತ ಹೆಚ್ಚಿನ ನೀರನ್ನು ಬಿಳಿಗುಂಡ್ಲು ಬಳಿ ಬಿಡುಗಡೆ ಮಾಡಲಾಗಿದೆ. ವಯನಾಡು ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾದ ಕಾರಣ ಜುಲೈ 29ರಿಂದ ಆಗಸ್ಟ್ 10ರವರೆಗೆ ಜಲಾಶಯಗಳಿಂದ ಹೆಚ್ಚುವರಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವ ಬಗ್ಗೆ ಮಾಹಿತಿ ನೀಡಲಾಗಿದೆ.

ಈಗಾಗಲೇ ಕರ್ನಾಟಕದ ಜಲಾಶಯಗಳಿಂದ ಒಟ್ಟು 1,64,080 ಕ್ಯೂಸೆಕ್ ನೀರು ಹರಿದಿದ್ದು, ಬಿಳಿಗುಂಡ್ಲು ಮೂಲಕ 86,797 ಕ್ಯೂಸೆಕ್ ನೀರು ತಮಿಳುನಾಡು ತಲುಪಿದೆ. ತಮಿಳುನಾಡು ಶೇ.26.954 TMC ಸಂಕಷ್ಟದ ಕೊರತೆಯನ್ನು ಲೆಕ್ಕಹಾಕಿದೆ. ಬಿಳಿಗುಂಡ್ಲುವಿನಲ್ಲಿರುವ CWRC ಗೇಜ್‌ ಸ್ಟೇಷನ್ ನೀರಿನ ಹರಿವನ್ನ ದಾಖಲಿಸಿದೆ. ಗೇಜ್‌ ಸ್ಟೇಷನ್ ಗಂಟೆಗೊಮ್ಮೆ ನೀರಿನ ಹರಿವನ್ನು ದಾಖಲಿಸುತ್ತಿದ್ದು, ನೀರಿನ ಹರಿವನ್ನು ದಾಖಲಿಸಲು ಪ್ರತ್ಯೇಕ ಮೇಲ್ವಿಚಾರಣೆಯ ಅಗತ್ಯವಿಲ್ಲ. ಸಂಕಷ್ಟದ ವರ್ಷದಲ್ಲಿ ಪ್ರೊ-ರೇಟಾ ಪರಿಗಣಿಸದಿದ್ದರೆ ನ್ಯಾಯಸಮ್ಮತವಾಗಲ್ಲ ಎಂದು ಸುಪ್ರೀಂಕೋರ್ಟ್​ನಲ್ಲಿ ಹಿರಿಯ ವಕೀಲ ಮೋಹನ್ ವಿ.ಕಾತರಕಿ ಪ್ರತಿಕ್ರಿಯೆ ಸಲ್ಲಿಕೆ ಮಾಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ