LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೈಕ್ ರೈಡ್ ಪ್ರಿಯರಿಗೆ ಕಹಿಸುದ್ದಿ: ಕುದುರೆಮುಖದಲ್ಲಿ ಆಫ್‌ರೋಡ್ ಅಡ್ವೆಂಚರ್‌ಗೆ ಕಡಿವಾಣ: ವರದಿ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು:-ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖದಲ್ಲಿ ಆ.15 ಮತ್ತು 16ರಂದು ನಡೆಯಲಿರುವ ಆಫ್‌ರೋಡ್ ಅಡ್ವೆಂಚರ್‌ ಚಟುವಟಿಕೆ ಕುರಿತು ಸಮಗ್ರ ವರದಿ ನೀಡುವಂತೆ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.

ಆಫ್‌ರೋಡ್ ಅಡ್ವೆಂಚರ್ ಚಟುವಟಿಕೆಯ ವಿವರ

ಬೆಂಗಳೂರಿನ ಸಂಸ್ಥೆಯೊಂದು ಆ.15ರಂದು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಿಂದ ಪ್ರವಾಸ ಆರಂಭಿಸಿ, ಆ.15 ಮತ್ತು 16ರಂದು ಕುದುರೆಮುಖದಲ್ಲಿ ಆಫ್‌ರೋಡ್ ಅಡ್ವೆಂಚರ್ ಆಯೋಜಿಸಿರುವುದಾಗಿ ಜಾಹೀರಾತು ನೀಡಿದೆ ಎಂದು ಸಿಇಒ ಗಮನಕ್ಕೆ ತಂದಿದ್ದಾರೆ.

ಈ ಸಾಹಸ ಚಟುವಟಿಕೆಯಲ್ಲಿ ನದಿಗಳನ್ನು ದಾಟುವುದು, ಮಣ್ಣಿನ ರಸ್ತೆಗಳಲ್ಲಿ ವಾಹನ ಚಲಾಯಿಸುವುದು ಹಾಗೂ ಬೆಟ್ಟ-ಗುಡ್ಡಗಳನ್ನು ಹತ್ತಿ ಇಳಿಯುವ ಅವಕಾಶವಿದೆ ಎಂದು ಜಾಹೀರಾತಿನಲ್ಲಿ ತಿಳಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪರಿಸರದ ಮೇಲಿನ ದುಷ್ಪರಿಣಾಮಗಳ ಕಳವಳ

ಆದರೆ ಮಳೆಗಾಲದ ಸಂದರ್ಭದಲ್ಲಿ ಇಂತಹ ಆಫ್‌ರೋಡ್ ವಾಹನಗಳ ಸಂಚಾರದಿಂದ ಪರಿಸರ ಮತ್ತು ನೈಸರ್ಗಿಕ ಜಲಮೂಲಗಳ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಸಂವಿಧಾನದ ವಿಧಿ 51ಎ(ಜಿ)ಯಲ್ಲಿ ಅರಣ್ಯ, ಸರೋವರ, ನದಿ, ವನ್ಯಜೀವಿಗಳು ಸೇರಿದಂತೆ ನೈಸರ್ಗಿಕ ಪರಿಸರವನ್ನು ರಕ್ಷಿಸುವುದು ಮತ್ತು ಸುಧಾರಿಸುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಮೂಲ ಕರ್ತವ್ಯವೆಂದು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕಿದೆ ಎಂದು ಸಚಿವರು ತಿಳಿಸಿದ್ದಾರೆ.

ಆಫ್‌ರೋಡ್ ಅಡ್ವೆಂಚರ್‌ಗೆ ಬಳಸುವ ವಾಹನಗಳಿಗೆ ದಪ್ಪ ಹಾಗೂ ಪರಿವರ್ತಿತ ಟೈರ್‌ಗಳನ್ನು ಅಳವಡಿಸುವುದರಿಂದ ಮಳೆಯಿಂದ ತೊಯ್ದಿರುವ ಗ್ರಾಮೀಣ ರಸ್ತೆಗಳು ಹಾಳಾಗುವ ಸಾಧ್ಯತೆ ಇದೆ. ಅಲ್ಲದೆ, ಬೆಟ್ಟ-ಗುಡ್ಡಗಳ ಮೇಲೆ ಇಂತಹ ವಾಹನಗಳ ಸಂಚಾರದಿಂದ ಮಣ್ಣಿನ ಪದರ ಸವಕಳಿಯಾಗುವ ಅಪಾಯವಿದೆ ಎಂದು ಆತಂಕ ಹೊರ ಹಾಕಿದ್ದಾರೆ.

ಮಳೆ ಸಂದರ್ಭದಲ್ಲಿ ಮಣ್ಣು ಕೊಚ್ಚಿಕೊಂಡು ಬಂದು ಕೆರೆ, ಕಟ್ಟೆ, ಸರೋವರ ಸೇರಿದಂತೆ ಜಲಮೂಲಗಳಲ್ಲಿ ಹೂಳು ಹೆಚ್ಚಾಗಬಹುದು. ಇದರಿಂದ ಜಲಮೂಲಗಳ ನೀರು ಸಂಗ್ರಹಣಾ ಸಾಮರ್ಥ್ಯ ಕುಸಿಯುವ ಸಾಧ್ಯತೆಯೂ ಇದೆ ಎಂದು ಸಚಿವರು ಎಚ್ಚರಿಸಿದ್ದಾರೆ.

ಇದರ ಜೊತೆಗೆ ವಾಹನಗಳ ಸಂಚಾರದಿಂದ ಶಬ್ದ ಮತ್ತು ವಾಯುಮಾಲಿನ್ಯ ಉಂಟಾಗುವುದಲ್ಲದೆ, ವನ್ಯಜೀವಿಗಳು ಸೇರಿದಂತೆ ವಿವಿಧ ಜೀವಿಗಳಿಗೂ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಕಠಿಣ ಕ್ರಮಕ್ಕೆ ಸಚಿವರ ನಿರ್ದೇಶನ

ನದಿ, ತೊರೆ, ಕಾಲುವೆ ಸೇರಿದಂತೆ ಕುಡಿಯುವ ನೀರು ಪೂರೈಸುವ ಜಲಮೂಲಗಳಲ್ಲಿ ಯಾವುದೇ ಸಾಹಸಿ ವಾಹನಗಳು ಸಂಚರಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ. ಗ್ರಾಮೀಣ ರಸ್ತೆಗಳು ಹಾಳಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆಯೂ ಅವರು ನಿರ್ದೇಶನ ನೀಡಿದ್ದಾರೆ.

ಒಂದೊಮ್ಮೆ ಆಫ್‌ರೋಡ್ ಚಟುವಟಿಕೆಯಿಂದ ರಸ್ತೆ ಹಾಳಾದರೆ ಅಥವಾ ಜಲಮೂಲ ಕಲುಷಿತಗೊಂಡರೆ, ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕುದುರೆಮುಖದಲ್ಲಿ ನಡೆಯಲಿರುವ ಆಫ್‌ರೋಡ್ ಅಡ್ವೆಂಚರ್ ಚಟುವಟಿಕೆಯ ಸ್ವರೂಪ, ಅನುಮತಿ ಹಾಗೂ ಪರಿಸರದ ಮೇಲಿನ ಪರಿಣಾಮಗಳ ಕುರಿತು ಪರಿಶೀಲಿಸಿ ಸಮಗ್ರ ವರದಿ ಸಲ್ಲಿಸುವಂತೆ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ