LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿನ್ನದ ದರದಲ್ಲಿ ಮತ್ತೆ ಏರಿಕೆ, ಸಾರ್ವಕಾಲಿಕ ದಾಖಲೆ; ಬೆಳ್ಳಿ ಬೆಲೆಯಲ್ಲಿ ಸ್ಥಿರತೆ

ಬೆಂಗಳೂರು: ದೇಶೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರಿಕೆ ಪರ್ವ ಸತತವಾಗಿ ಮುಂದುವರಿದಿದ್ದು, ಗುರುವಾರವೂ (ಆಗಸ್ಟ್ 13) ಚಿನ್ನದ ದರದಲ್ಲಿ ಮತ್ತೆ ಹೆಚ್ಚಳ ಕಂಡುಬಂದಿದೆ. ಕಳೆದ ಎರಡು ದಿನಗಳಿಂದ ಸಸತವಾಗಿ ಏರಿಕೆಯಾಗುತ್ತಿರುವ ಚಿನ್ನದ ಬೆಲೆ ಇದೀಗ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಆದರೆ, ಖರೀದಿದಾರರಿಗೆ ಕೊಂಚ ನೆಮ್ಮದಿ ನೀಡುವ ವಿಷಯವೆಂದರೆ ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗದೆ ತಟಸ್ಥವಾಗಿದೆ.

ಜಾಗತಿಕ ಮಟ್ಟದಲ್ಲಿ ಹಣದುಬ್ಬರದ ಭೀತಿ ಕಡಿಮೆಯಾಗಿರುವುದು ಹಾಗೂ ಬಡ್ಡಿದರ ಏರಿಕೆಯ ಕುರಿತು ಅನಿಶ್ಚಿತತೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಬಂಗಾರ ಮತ್ತು ಬೆಳ್ಳಿಯತ್ತ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಇದರ ಪರಿಣಾಮವಾಗಿ ಮಾರುಕಟ್ಟೆಯಲ್ಲಿ ಲೋಹಗಳ ದರ ಭಾರಿ ಜಿಗಿತ ಕಾಣುತ್ತಿದೆ.

ಇಂದಿನ ಚಿನ್ನದ ದರ ಪಟ್ಟಿ (ಆಗಸ್ಟ್ 13, 2026):

24 ಕ್ಯಾರೆಟ್ (ಅಪರಂಜಿ ಚಿನ್ನ): 1 ಗ್ರಾಂ ಶುದ್ಧ ಚಿನ್ನದ ಬೆಲೆಯಲ್ಲಿ ₹27 ಏರಿಕೆಯಾಗಿದ್ದು, ಪ್ರಸ್ತುತ ₹15,513 ತಲುಪಿದೆ. 10 ಗ್ರಾಂ ಶುದ್ಧ ಚಿನ್ನದ ಬೆಲೆ ₹270 ಹೆಚ್ಚಳವಾಗಿ ಬರೋಬ್ಬರಿ ₹1,55,130 ತಲುಪಿದೆ.

22 ಕ್ಯಾರೆಟ್ (ಆಭರಣ ಚಿನ್ನ): 1 ಗ್ರಾಂ ಆಭರಣ ಚಿನ್ನದ ಬೆಲೆ ₹25 ಏರಿಕೆಯಾಗಿ ₹14,220 ತಲುಪಿದೆ. 10 ಗ್ರಾಂ ಬೆಲೆಯಲ್ಲಿ ₹250 ಹೆಚ್ಚಳವಾಗಿದ್ದು, ಪ್ರಸ್ತುತ ₹1,42,200 ರಷ್ಟಿದೆ.

18 ಕ್ಯಾರೆಟ್ ಚಿನ್ನ: 1 ಗ್ರಾಂ ಬೆಲೆ ₹210 ಏರಿಕೆಯಾಗಿದ್ದು, ₹11,635 ರಂತೆ ಮಾರಾಟವಾಗುತ್ತಿದೆ. 10 ಗ್ರಾಂ ಬೆಲೆ ₹1,16,350 ತಲುಪಿದೆ.

ಬೆಂಗಳೂರು ಮಾರುಕಟ್ಟೆ ಹಾಗೂ ಬೆಳ್ಳಿ ದರ:

ರಾಜಧಾನಿ ಬೆಂಗಳೂರಿನಲ್ಲಿ 24 ಕ್ಯಾರೆಟ್‌ನ ಶುದ್ಧ ಚಿನ್ನದ ಗ್ರಾಂ ಬೆಲೆ ₹15,513 ತಲುಪಿದೆ. ಇನ್ನು ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ವ್ಯತ್ಯಾಸವಾಗಿಲ್ಲ. 1 ಗ್ರಾಂ ಬೆಳ್ಳಿಯ ಬೆಲೆ ₹255 ರಷ್ಟಿದ್ದು, 1 ಕೆಜಿ ಬೆಳ್ಳಿಯ ದರ ₹2,55,000 ನಲ್ಲಿ ಸ್ಥಿರವಾಗಿದೆ.

ಕಳೆದ 12 ದಿನಗಳ ವಹಿವಾಟನ್ನು ಗಮನಿಸಿದರೆ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಒಟ್ಟಾರೆಯಾಗಿ ಬರೋಬ್ಬರಿ ₹10,000 ದಷ್ಟು ಭಾರಿ ಏರಿಕೆ ದಾಖಲಾಗಿರುವುದು ಹೂಡಿಕೆದಾರರಲ್ಲಿ ಹೊಸ ಸಂಚಲನ ಮೂಡಿಸಿದೆ.

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

​ನಗರಗಳ ಹೆಸರು ​ ಚಿನ್ನದ ಬೆಲೆ (10 ಗ್ರಾಂ)

ಬೆಂಗಳೂರು ₹1,55,130

ನಾಗ್ಪುರ ₹1,55,130

ಮುಂಬೈ ₹1,55,130

ಚೆನ್ನೈ ₹1,55,130

ಕೋಲ್ಕತ್ತಾ ₹1,55,130

ಪಾಟ್ನಾ ₹1,55,180

ಸೂರತ್‌ ₹1,55,180

ಚಂಡೀಗಢ ₹1,55,280

ಲಕ್ನೋ ₹1,55,280

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಕ್ಲ್ಯಾಂಡ್ ಆಯ್ತು, ಈಗ ವೆಲ್ಲಿಂಗ್ಟನ್‌ನಲ್ಲೂ ವರುಣನದ್ದೇ ಆರ್ಭಟ: ಎರಡನೇ ಏಕದಿನ ಪಂದ್ಯಕ್ಕೆ ಕಂಟಕವಾದ ಹವಾಮಾನ!ಸೇವೆಯಲ್ಲಿರುವ ಅಗ್ನಿವೀರರಿಗೆ ಮಾತ್ರ ಹೊಸ ಬದಲಾವಣೆ‘ರಾಮಾಯಣ’ ಸಿನಿಮಾ ನೋಡಿ ಭಾವುಕರಾದ ಅನುಪಮ್ ಖೇರ್: ಭಾರತೀಯ ಚಿತ್ರರಂಗದ ಸರ್ವಶ್ರೇಷ್ಠ ಸಿನಿಮಾ ಎಂದ ನಟ!ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!