LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೈರಿಗೂ ಇಂತಹ ಪರಿಸ್ಥಿತಿ ಬರಬಾರದು; ಮಾಡದ ತಪ್ಪಿಗೆ ಜೈಲುಶಿಕ್ಷೆ ಅನುಭವಿಸಿದ್ದೇನೆ: ಬಿಡಿಗಡೆ ಬಳಿಕ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಹೇಳಿಕೆ

ಬೆಂಗಳೂರು: ಬಗರ್ ಹುಕುಂ ಜಮೀನು ಮಂಜೂರಾತಿಯಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದ ಬೇಲೂರು ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರು ಸುಮಾರು 52 ದಿನಗಳ ಜೈಲುವಾಸದ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ನ್ಯಾಯಾಲಯವು ಜಾಮೀನು ಮಂಜೂರು ಮಾಡಿದ್ದು, ಅಗತ್ಯ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಲಿಂಗೇಶ್ ಅವರು ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.

ಮಾಜಿ ಶಾಸಕರು ಜೈಲಿನಿಂದ ಹೊರಬರುತ್ತಿದ್ದಂತೆಯೇ ಹೊರಗಡೆ ನೆರೆದಿದ್ದ ನೂರಾರು ಜೆಡಿಎಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಹೂವಿನ ಹಾರ ಹಾಕಿ, ಹೆಗಲ ಮೇಲೆ ಹೊತ್ತುಕೊಂಡು ಜಯಘೋಷಗಳೊಂದಿಗೆ ಅತ್ಯಂತ ಅದ್ದೂರಿಯಾಗಿ ಸ್ವಾಗತಿಸಿದರು.

ಈ ವೇಳೆ ಮಾತನಾಡಿದ ಕೆ.ಎಸ್. ಲಿಂಗೇಶ್, ನಮ್ಮ ವೈರಿಗೂ ಸಹ ಇಂತಹ ಪರಿಸ್ಥಿತಿ ಬರಬಾರದು. ನಾನು ಮಾಡದಿರುವ ತಪ್ಪಿಗೆ 52 ದಿನಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದೇನೆ. 1988ರಲ್ಲಿ ಅರ್ಜಿ ಸಲ್ಲಿಸಿದ್ದ ಅರ್ಹ ಫಲಾನುಭವಿಗಳಿಗೆ ನಾವು ಭೂಮಿ ಮಂಜೂರು ಮಾಡಿದ್ದೇವೇ ಹೊರತು ಯಾವುದೇ ಅಕ್ರಮ ಎಸಗಿಲ್ಲ ಎಂದರು.

ನಾನಾಗಲಿ ಅಥವಾ ಬೇಲೂರಿನ ಮಾಜಿ ಶಾಸಕರಾಗಿದ್ದ ದಿವಂಗತ ರುದ್ರೇಶ್‌ಗೌಡ ಅವರಾಗಲಿ ಯಾವುದೇ ತಪ್ಪು ಮಾಡಿಲ್ಲ. ಕಾನೂನುಬದ್ಧವಾಗಿಯೇ ಕೆಲಸ ಮಾಡಿದ್ದೇವೆ. ತಮ್ಮ ಮೇಲಿರುವ ಎಲ್ಲಾ ಆರೋಪಗಳಿಂದ ಸಂಪೂರ್ಣವಾಗಿ ಮುಕ್ತರಾಗಿ ಹೊರಬರುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಗದ್ದಲ, ಪ್ರತಿಭಟನೆಗಳ ನಡುವೆಯೇ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆಜಾರ್ಖಂಡ್‌ನಲ್ಲಿ ನೇಮಕಾತಿ ಪರೀಕ್ಷಾ ಅಕ್ರಮದ ವಿರುದ್ಧ ವಿದ್ಯಾರ್ಥಿಗಳ ಹೋರಾಟ 600 ಮಂದಿಯ ವಿರುದ್ಧ ಪ್ರಕರಣ ದಾಖಲುಜೇಬಿಲ್ಲದ ಸಮವಸ್ತ್ರದಿಂದ 180 ದಿನಗಳ CCTVವರೆಗೆ: ರಾಮ ಮಂದಿರ ದೇಣಿಗೆ ಎಣಿಕೆಗೆ ಹೊಸ ಕಾವಲುಓಲಾ, ಉಬರ್, ರ್ಯಾಪಿಡೊ ಆ್ಯಪ್‌ಗಳಲ್ಲಿ ರೈಡ್‌ಗೂ ಮುನ್ನವೇ ಕೇಳುತ್ತಿದ್ದ ಟಿಪ್‌ಗೆ ಬ್ರೇಕ್ ಹಾಕಿದ ಕೇಂದ್ರ!BREAKING: ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಜಿರಳೆ, ಫಂಗಸ್ ಪತ್ತೆBREAKING: ನಟ ದರ್ಶನ್ ಗೆ ಬಿಗ್ ಶಾಕ್: ಸಿಸಿಹೆಚ್ ಕೋರ್ಟ್ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಹುಟ್ಟು-ಸಾವು ನಮ್ಮಕೈಲಿಲ್ಲ: ವಿಧಾನಸಭೆಯಲ್ಲಿ ಡಿ.ಸುಧಾಕರ್ ನೆನೆದು ಭಾವುಕರಾದ ಸಿಎಂ ಡಿ.ಕೆ.ಶಿವಕುಮಾರ್ವೈರಿಗೂ ಇಂತಹ ಪರಿಸ್ಥಿತಿ ಬರಬಾರದು; ಮಾಡದ ತಪ್ಪಿಗೆ ಜೈಲುಶಿಕ್ಷೆ ಅನುಭವಿಸಿದ್ದೇನೆ: ಬಿಡಿಗಡೆ ಬಳಿಕ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಹೇಳಿಕೆಜೈಲಿನಲ್ಲಿ ಪ್ರಜ್ವಲ್ ಮೊಬೈಲ್ ಬಳಕೆ: ಹೆಚ್.ಡಿ.ರೇವಣ್ಣ ಹೇಳಿದ್ದೇನು?ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ