LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ಔಷಧ ಜಾಲ ಪತ್ತೆ: ಬೆಂಗಳೂರು ಬಳಿ ಪತ್ತೆಯಾದ ಜಾಲ ಹಿಮಾಚಲ ಪ್ರದೇಶದವರೆಗೂ ವಿಸ್ತರಿಸಿರುವ ಶಂಕೆ: ಕ್ಯಾನ್ಸರ್ ಚಿಕಿತ್ಸೆಯ ಔಷಧಗಳೇ ಟಾರ್ಗೆಟ್!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಬಳಿ ಪತ್ತೆಯಾದ ನಕಲಿ ಔಷಧ ದಂಧೆಯ ಜಾಲ ದೇಶದ ಹಲವು ರಾಜ್ಯಗಳಿಗೆ ವಿಸ್ತರಿಸಿರುವ ಶಂಕೆ ವ್ಯಕ್ತವಾಗಿದೆ. ಕರ್ನಾಟಕದ ಔಷಧ ನಿಯಂತ್ರಣ ಇಲಾಖೆ ನೀಡಿದ ಮಾಹಿತಿಯ ಆಧಾರದ ಮೇಲೆ ದೇಶದ ಎಲ್ಲ ರಾಜ್ಯಗಳ ಔಷಧ ನಿಯಂತ್ರಕರು (Drug Controllers) ಹಾಗೂ ರಾಜ್ಯ ಪರವಾನಗಿ ಪ್ರಾಧಿಕಾರಗಳಿಗೆ (State Licensing Authorities) ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರಿನಿಂದ ಮುಂಬೈ, ತೆಲಂಗಾಣ, ಹಿಮಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ನಡುವೆ ನಕಲಿ ಔಷಧ ಜಾಲದ ನಂಟು ಇರುವ ಸಾಧ್ಯತೆ ಇದೆ ಎಂದು ಔಷಧ ಇಲಾಖೆ ವ್ಯಕ್ತಪಡಿಸಿದೆ.

ಕರ್ನಾಟಕದ ಡ್ರಗ್ ಎನ್‌ಫೋರ್ಸ್‌ಮೆಂಟ್ ವಿಂಗ್ ಆಗಸ್ಟ್ 18ರಂದು ಬಿಡದಿ ಬಳಿಯ ನಂ.34 ಕುರುಬರಹಳ್ಳಿ ಗ್ರಾಮದಲ್ಲಿ ಲೈಸೆನ್ಸ್ ಇಲ್ಲದ ಔಷಧ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ನಕಲಿ ಔಷಧಗಳು, ಬಲ್ಕ್ ಸ್ಟಾಕ್, ಪ್ಯಾಕೇಜಿಂಗ್ ಯಂತ್ರಗಳು, ಖಾಲಿ ವಯಲ್‌ಗಳು ಹಾಗೂ ನಕಲಿ ಲೇಬಲ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ವಸ್ತುಗಳ ಒಟ್ಟು ಅಂದಾಜು ಮೌಲ್ಯ 5,05,49,575 ರೂ. ಎಂದು ತಿಳಿದುಬಂದಿದೆ.

ಈ ಪ್ರಕರಣ ಅಂತರರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಂಕೆ ಹಿನ್ನೆಲೆಯಲ್ಲಿ ಕರ್ನಾಟಕದ ಔಷಧ ಗುಣಮಟ್ಟ ಇಲಾಖೆ ದೇಶದ ಎಲ್ಲ ರಾಜ್ಯಗಳ ಔಷಧ ನಿಯಂತ್ರಕರಿಗೆ ಪತ್ರ ಬರೆದಿದೆ. ತಮ್ಮ ರಾಜ್ಯದಲ್ಲೂ ಅನುಮಾನಾಸ್ಪದ ಲೇಬಲಿಂಗ್ ಹೊಂದಿರುವ ಔಷಧಗಳು ಅಥವಾ ಕರ್ನಾಟಕದಲ್ಲಿ ಬ್ಯಾನ್ ಮಾಡಿರುವ ಬ್ಯಾಚ್‌ಗಳ ಔಷಧಗಳು ಪತ್ತೆಯಾದರೆ ತಕ್ಷಣ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ರಾಜ್ಯದ ಖಾಸಗಿ ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್‌ಗಳು ಹಾಗೂ ಔಷಧ ವಿತರಕರಿಗೂ ಎಚ್ಚರಿಕೆ ನೀಡಲಾಗಿದ್ದು, ಬ್ಯಾನ್ ಮಾಡಿರುವ ಬ್ಯಾಚ್‌ಗಳ ಔಷಧಗಳು ಬಳಕೆಯಾಗುತ್ತಿವೆಯೇ ಎಂಬುದನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ.

ಅಪರ ಔಷಧ ನಿಯಂತ್ರಕ ಡಾ. ಉಮೇಶ್ ನೀಡಿರುವ ಮಾಹಿತಿಯ ಪ್ರಕಾರ, ಪ್ರಮುಖ ಹೋಲ್‌ಸೇಲ್ ಔಷಧ ಮಾರುಕಟ್ಟೆ, ಡಿಸ್ಟ್ರಿಬ್ಯೂಷನ್ ಹಬ್ ಮತ್ತು ರಿಟೇಲ್ ಮೆಡಿಕಲ್ ಶಾಪ್‌ಗಳಲ್ಲಿ ದಿಢೀರ್ ತಪಾಸಣೆ ನಡೆಸುವಂತೆ ಬೇರೆ ರಾಜ್ಯಗಳಿಗೆ ಸೂಚಿಸಲಾಗಿದೆ. ವಿಶೇಷವಾಗಿ Pfizer ಹೆಸರಿನಲ್ಲಿ ಅನುಮಾನಾಸ್ಪದ ಅಥವಾ ದಾಖಲೆಗಳಿಲ್ಲದ ಔಷಧ ಸ್ಟಾಕ್ ಇದೆಯೇ ಎಂಬುದನ್ನು ಪರಿಶೀಲಿಸಲು ಸೂಚಿಸಲಾಗಿದೆ. ದುಬಾರಿ ಔಷಧಗಳನ್ನು ಮಾರಾಟ ಮಾಡುವ ಡಿಸ್ಟ್ರಿಬ್ಯೂಟರ್‌ಗಳ Purchase Invoice, Batch Records ಮತ್ತು ಔಷಧದ ಮೂಲದ ದಾಖಲೆಗಳನ್ನು ಪರಿಶೀಲಿಸುವಂತೆ ಸೂಚನೆ ನೀಡಲಾಗಿದೆ.

ತೆಲಂಗಾಣ ಮತ್ತು ಹಿಮಾಚಲ ಪ್ರದೇಶದ ಮ್ಯಾನುಫ್ಯಾಕ್ಚರಿಂಗ್ ಹಬ್‌ಗಳಿಂದ ಕಡಿಮೆ ಬೆಲೆಯ ಜೆನೆರಿಕ್ ಔಷಧಗಳನ್ನು ಪಡೆದು, ಅವುಗಳನ್ನು ಕರ್ನಾಟಕದ ಲೈಸೆನ್ಸ್ ಇಲ್ಲದ ಘಟಕದಲ್ಲಿ ಹೊಸ ವಯಲ್‌ಗಳಿಗೆ ತುಂಬಿ, ನಕಲಿ ಲೇಬಲ್ ಅಂಟಿಸಿ ದುಬಾರಿ ಆಮದು ಔಷಧಗಳಂತೆ ಮಾರಾಟ ಮಾಡಲಾಗುತ್ತಿತ್ತೆಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಜಾಲದಲ್ಲಿ ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆಗಳ ಚಿಕಿತ್ಸೆಯಲ್ಲಿ ಬಳಸುವ ಹೈ-ವ್ಯಾಲ್ಯೂ ಇಂಜೆಕ್ಷನ್‌ಗಳೂ ಟಾರ್ಗೆಟ್ ಆಗಿರುವುದು ಆತಂಕಕ್ಕೆ ಕಾರಣವಾಗಿದೆ. ನಕಲಿ ಔಷಧಗಳು ರೋಗಿಗಳ ಜೀವಕ್ಕೆ ನೇರ ಅಪಾಯ ಉಂಟುಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳು ಮತ್ತು ವೈದ್ಯರಿಗೆ ವಿಶೇಷ ಎಚ್ಚರಿಕೆ ನೀಡಲಾಗಿದೆ.

ಆಂಕಾಲಜಿಸ್ಟ್‌ಗಳು, ವೈದ್ಯರು ಮತ್ತು ಫಾರ್ಮಸಿಗಳು ದುಬಾರಿ ಆಮದು ಔಷಧಗಳ ಪ್ಯಾಕೇಜಿಂಗ್‌ನ Authenticity Features ಪರಿಶೀಲಿಸುವಂತೆ ಸೂಚಿಸಲಾಗಿದೆ. ಅನುಮಾನಾಸ್ಪದ ಪ್ಯಾಕೇಜಿಂಗ್, ಬ್ಯಾಚ್ ದಾಖಲೆಗಳ ಕೊರತೆ ಅಥವಾ ಅನುಮಾನಾಸ್ಪದ ಮೂಲದ ಸ್ಟಾಕ್ ಕಂಡುಬಂದರೆ ತಕ್ಷಣ ವಶಪಡಿಸಿಕೊಳ್ಳುವಂತೆ ನಿರ್ದೇಶಿಸಲಾಗಿದೆ.

ಬಿಡದಿ ಬಳಿ ದಾಳಿಯ ವೇಳೆ ಬಹುರಾಷ್ಟ್ರೀಯ ಔಷಧ ಕಂಪನಿಗಳ ಹೆಸರನ್ನು ಬಳಸಿಕೊಂಡು ಸಿದ್ಧಪಡಿಸಲಾಗಿದ್ದ ನಕಲಿ ಔಷಧಗಳು ಪತ್ತೆಯಾಗಿವೆ. ವಿಶೇಷವಾಗಿ Pfizer Ltd. ಹೆಸರಿನಲ್ಲಿ ನಕಲಿ ಔಷಧಗಳನ್ನು ಸಿದ್ಧಪಡಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ವಶಪಡಿಸಿಕೊಂಡ ಪ್ರಮುಖ ಔಷಧಗಳಲ್ಲಿ Aztreonam-Avibactam – EMBLAVEO – 1.5g/0.5g, Ceftazidime & Avibactam Injection – CEFIAVIGE NT-2.5 – 2.5g, Tigecycline for Injection USP – TIGYNT – 50mg, Midazolam Injection HIZLAM 2, ಇದರ ಜತೆಗೆ Ceftazidime 2g + Avibactam 0.5g ಹೆಸರಿನ ಖಾಲಿ ವಯಲ್‌ಗಳು ಹಾಗೂ Zavicefta ಸೇರಿದಂತೆ ವಿವಿಧ ಬ್ರ್ಯಾಂಡ್‌ಗಳ ನಕಲಿ ಲೇಬಲ್‌ಗಳು ಪತ್ತೆಯಾಗಿವೆ. Xavitaz, Trezam, AztraQ ಸೇರಿದಂತೆ ಇತರ ಬ್ರ್ಯಾಂಡ್‌ಗಳ ಖಾಲಿ ಲೇಬಲ್ ಮತ್ತು ವಯಲ್‌ಗಳನ್ನೂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಇದರಿಂದ ಔಷಧಗಳನ್ನು ನಕಲಿಯಾಗಿ ತಯಾರಿಸುವುದಷ್ಟೇ ಅಲ್ಲದೆ, ಅವುಗಳಿಗೆ ನಕಲಿ ಪ್ಯಾಕೇಜಿಂಗ್ ಮತ್ತು ಲೇಬಲಿಂಗ್ ಮಾಡುವ ವ್ಯವಸ್ಥೆಯೂ ಘಟಕದಲ್ಲಿ ಇತ್ತು ಎಂದು ಹೇಲಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿರುವ ಬೆನ್ನಲ್ಲೇ ದೇಶದ ವಿವಿಧ ರಾಜ್ಯಗಳಲ್ಲಿ ಮಾರುಕಟ್ಟೆ ತಪಾಸಣೆ ನಡೆಸಿ, ಅದರ ವರದಿ ಹಾಗೂ ಮಾಹಿತಿಯನ್ನು ಪರಸ್ಪರ ಹಂಚಿಕೊಳ್ಳುವಂತೆ ಸೂಚಿಸಲಾಗಿದೆ. ಈ ಮೂಲಕ ನಕಲಿ ಔಷಧ ಜಾಲದ ಸಂಪೂರ್ಣ ಸಂಪರ್ಕವನ್ನು ಪತ್ತೆಹಚ್ಚಲು ಔಷಧ ನಿಯಂತ್ರಣ ಇಲಾಖೆ ಮುಂದಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ